AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಮುಡಾದ 160 ನಿವೇಶನ​​ಗಳನ್ನು ಜಪ್ತಿಗೆ ಇಡಿ ಆದೇಶ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) 160 ನಿವೇಶನಗಳನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ. ಬೇನಾಮಿ ಮತ್ತು ಅಕ್ರಮ ಹಣ ವ್ಯವಹಾರದ ಶಂಕೆಯಿಂದಾಗಿ ಈ ಕ್ರಮ ಕೈಗೊಳ್ಳಲಾಗಿದೆ. ರವಿ, ಅಬ್ದುಲ್ ವಾಹಿದ್ ಮತ್ತು ಕ್ಯಾಥಡ್ರಾಲ್ ಸೊಸೈಟಿ ಸೇರಿದಂತೆ ಹಲವಾರು ವ್ಯಕ್ತಿಗಳ ಹೆಸರಿನಲ್ಲಿ ನಿವೇಶನಗಳು ನೋಂದಣಿಯಾಗಿವೆ.

ಮೈಸೂರು: ಮುಡಾದ 160 ನಿವೇಶನ​​ಗಳನ್ನು ಜಪ್ತಿಗೆ ಇಡಿ ಆದೇಶ
ಮುಡಾ ನಿವೇಶನ ಇಡಿ ಜಪ್ತಿ
ದಿಲೀಪ್​, ಚೌಡಹಳ್ಳಿ
| Updated By: ವಿವೇಕ ಬಿರಾದಾರ|

Updated on: Jan 29, 2025 | 9:50 AM

Share

ಮೈಸೂರು, ಜನವರಿ 29: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ 160 ನಿವೇಶನ​​ಗಳನ್ನು ಜಪ್ತಿ ಮಾಡುವಂತೆ ಜಾರಿ ನಿರ್ದೇಶನಾಲಯ (ED) ಆದೇಶ ಹೊರಡಿಸಿದೆ. 160 ನಿವೇಶನಗಳ ವಹಿವಾಟಿನಲ್ಲಿ ಬೇನಾಮಿ ಮತ್ತು ಅಕ್ರಮ ಹಣ ವ್ಯವಹಾರ ನಡೆದಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಎಲ್ಲ ನಿವೇಶನಗಳನ್ನು ಜಪ್ತಿ ಮಾಡುವಂತೆ ಆದೇಶ ಪ್ರತಿಯಲ್ಲಿ ಉಲ್ಲೇಖಿಸಿದೆ.

ಸರ್ಕಾರದ ಮಾರ್ಗಸೂಚಿ ಪ್ರಕಾರ ಒಂದು ನಿವೇಶನ ಮೌಲ್ಯ 81 ಕೋಟಿ ರೂ. ಇದೆ. ಮಾರುಕಟ್ಟೆ ದರ 300 ಕೋಟಿ ರೂಪಾಯಿಗೂ ಅಧಿಕ ಮೌಲ್ಯವಿದೆ. ರವಿ ಎಂಬುವರ ಹೆಸರಲ್ಲಿ 31 ನಿವೇಶನ​, ಅಬ್ದುಲ್ ವಾಹಿದ್ ಎಂಬುವರ ಹೆಸರಲ್ಲಿ 41 ನಿವೇಶನ, ಕ್ಯಾಥಡ್ರಾಲ್ ಸೊಸೈಟಿ ಹೆಸರನಿಲ್ಲಿ 40 ನಿವೇಶನ, ಇತರರಿಗೆ ಸೇರಿದ 48 ನಿವೇಶನಗಳನ್ನು ಜಪ್ತಿ ಮಾಡುವಂತೆ ಹೇಳಿದೆ.

ನೋಂದಣಿಯಾಗಿದ್ದು ಯಾವಾಗ?

2023ರ ಸೆಪ್ಟೆಂಬರ್ 11ರಂದು ರವಿ ಹೆಸರಲ್ಲಿ 31 ನಿವೇನಗಳು ನೋಂದಣಿಯಾಗಿವೆ. ಮೈಸೂರು ನಗರದ ಹೃದಯಭಾಗ ಕುವೆಂಪುನಗರದಲ್ಲಿಯ 12 ನಿವೇಶನ​​ಗಳು, ದಟ್ಟಗಳ್ಳಿ, ವಿಜಯನಗರದಲ್ಲಿ 19 ನಿವೇಶನಗಳು ರವಿ ಹೆಸರಿಗೆ ನೋಂದಣಿಯಾಗಿವೆ.

ಇದನ್ನೂ ಓದಿ: ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಬುಡಕ್ಕೆ ಮುಡಾ ಹಗರಣ: ಇಡಿ, ಲೋಕಾಯುಕ್ತಕ್ಕೆ ದೂರು

ಇನ್ನು ಅಬ್ದುಲ್ ವಾಹಿದ್ ಎಂಬುವರ ಹೆಸರಿಗೆ 2023ರ ಮಾರ್ಚ್​ 8ರಂದು ಒಂದೇ ದಿನದಲ್ಲಿ 28 ನಿವೇಶನಗಳು ನೋಂದಣಿಯಾಗಿವೆ. ಮತ್ತೆ, 2023ರ ಸೆಪ್ಟೆಂಬರ್​ 1ರಂದು ಅಬ್ದುಲ್ ವಾಹಿದ್​ ಹೆಸರಿಗೆ 13 ವಿಜಯನಗರ, ಜೆ.ಪಿ.ನಗರ, ನಾಚನಹಳ್ಳಿಪಾಳ್ಯದಲ್ಲಿನ ನಿವೇಶನಗಳು ನೋಂದಣಿಯಾಗಿವೆ.​

ಮುಡಾದಲ್ಲಿ ನಿವೇಶನ ಕೊಡಿಸುವುದಾಗಿ ವಂಚನೆ

ಮುಡಾದಲ್ಲಿ ನಿವೇಶನ ಕೊಡಿಸುವುದಾಗಿ ಆಮಿಷವೊಡ್ಡಿ ಮಹಿಳೆಗೆ ವಂಚಿಸಲಾಗಿದೆ. ವಂಚನೆ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಲಲಿತಾದ್ರಿಪುರ ಗ್ರಾಮದ ಮನಿಷಾ ಎಂಬುವರ ಮೇಲೆ ಹಲ್ಲೆ ಮಾಡಿರುವ ಆರೋಪವಿದೆ. ಆಲನಹಳ್ಳಿಯ ಪವಿತ್ರಾ, ಪತಿ ವಿಶ್ವನಾಥ್ ಶೆಟ್ಟಿ, ಪುತ್ರನ ವಿರುದ್ಧ ಆಲನಹಳ್ಳಿ ಠಾಣೆಯಲ್ಲಿ ಮೂವರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಮುಡಾ ನಿವೇಶನ ಕೊಡಿಸುವುದಾಗಿ ಪವಿತ್ರಾ, ವಿಶ್ವನಾಥ್ ದಂಪತಿ ಮನಿಷಾ ಅವರಿಂದ 30 ಲಕ್ಷ ಹಣ ಪಡೆದಿದ್ದರು. ಹಣ ಪಡೆದು ಮುಡಾ ನಿವೇಶನ ನೀಡದೇ ವಂಚಿಸಿದ್ದಾರೆ. ಹಣ ವಾಪಸ್ ನೀಡುವುದಾಗಿ ಮನಿಷಾ ಅವರನ್ನು ಮನೆ ಬಳಿ ಕರೆಸಿಕೊಂಡು ಹಲ್ಲೆಗೈದಿರುವ ಆರೋಪ ಕೇಳಿಬಂದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ