ಮೈಸೂರು: ಉಪ ತಹಸೀಲ್ದಾರ್ ಕಿರುಕುಳ ಆರೋಪ, ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ

ಉಪ ತಹಸೀಲ್ದಾರ್ ಕಿರುಕುಳ ತಾಳಲಾರದೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯ ನಾಡ ಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ವಿಕಲಚೇತ ಪರಮೇಶ್ವರ್​ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಹುಲ್ಲಹಳ್ಳಿ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೈಸೂರು: ಉಪ ತಹಸೀಲ್ದಾರ್ ಕಿರುಕುಳ ಆರೋಪ, ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ
ಮೃತ ಕಂಪ್ಯೂಟರ್ ಆಪರೇಟರ್ ಪರಮೇಶ್
Updated By: ವಿವೇಕ ಬಿರಾದಾರ

Updated on: Jan 08, 2024 | 7:41 AM

ಮೈಸೂರು, ಜನವರಿ 08: ಉಪ ತಹಸೀಲ್ದಾರ್ (Deputy Tehsildar) ಕಿರುಕುಳ ತಾಳಲಾರದೆ ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಪರಮೇಶ್ ಆತ್ಮಹತ್ಯೆಗೆ ಶರಣಾದ ಕಂಪ್ಯೂಟರ್ ಆಪರೇಟರ್. ವಿಕಲಚೇತನಾಗಿದ್ದ ಪರಮೇಶ್ ನಂಜನಗೂಡು (Nanjangudu) ತಾಲೂಕಿನ ಹುಲ್ಲಹಳ್ಳಿಯ ನಾಡ ಕಚೇರಿಯಲ್ಲಿ ಪರಮೇಶ್ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು. ಇವರಿಗೆ ಉಪ ತಹಶೀಲ್ದಾರ್ ಶಿವಕುಮಾರ್ ಮಾನಸಿಕವಾಗಿ ಹಿಂಸೆ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇವರ ಕಿರುಕುಳ ತಾಳಲಾರದೆ ಪರಮೇಶ್​ ಡೆತ್ ನೋಟ್ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದರು.

ಕೂಡಲೇ ಪರಮೇಶ್ ಅವರನ್ನು ಮೈಸೂರಿನ ಕೆ.ರ್.ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪರಮೇಶ್ ಮೃತಪಟ್ಟಿದ್ದಾರೆ. ನನ್ನ ಸಾವಿಗೆ ಉಪ ತಹಸೀಲ್ದಾರ್ ಶಿವಕುಮಾರ್ ಕಾರಣ ಎಂದು ಪರಮೇಶ್​​ ಡೆತ್ ನೋಟ್​ನಲ್ಲಿ ಬರೆದಿದ್ದಾರೆ. ಹುಲ್ಲಹಳ್ಳಿ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ