ಮೈಸೂರು; ಮಾರಕಾಸ್ತ್ರಗಳಿಂದ ಕೊಚ್ಚಿ ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿ ಕೊಲೆ, ಆಪ್ತ ಸಹಾಯಕ ಅರೆಸ್ಟ್

ಮೈಸೂರಿನ ಸಿದ್ದಾರ್ಥನಗರದಲ್ಲಿರುವ ಅನ್ನದಾನೇಶ್ವರ ಮಠದ 90 ವರ್ಷದ ಶಿವಾನಂದ ಸ್ವಾಮೀಜಿ ಅವರ ಕೊಲೆ ಆಗಿದೆ. ಸ್ವಾಮೀಜಿ ಅವರ ಆಪ್ತಸಹಾಯಕ ರವಿ ಹುಲ್ಲು ಕತ್ತರಿಸುವ ಆಯುಧದಲ್ಲಿ ಸ್ವಾಮೀಜಿ ಕೊಲೆ ಮಾಡಿದ್ದಾರೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ.

ಮೈಸೂರು; ಮಾರಕಾಸ್ತ್ರಗಳಿಂದ ಕೊಚ್ಚಿ ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿ ಕೊಲೆ, ಆಪ್ತ ಸಹಾಯಕ ಅರೆಸ್ಟ್
ಶಿವಾನಂದ ಸ್ವಾಮೀಜಿ
Follow us
ರಾಮ್​, ಮೈಸೂರು
| Updated By: ಆಯೇಷಾ ಬಾನು

Updated on: Jun 10, 2024 | 2:39 PM

ಮೈಸೂರು, ಜೂನ್.10: ಮೈಸೂರಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಸ್ವಾಮೀಜಿ ಕೊಲೆ (Swamiji Murder) ಮಾಡಲಾಗಿದೆ. ಮೈಸೂರಿನ ಸಿದ್ದಾರ್ಥನಗರದಲ್ಲಿರುವ ಅನ್ನದಾನೇಶ್ವರ ಮಠದ 90 ವರ್ಷದ ಶಿವಾನಂದ ಸ್ವಾಮೀಜಿ ಅವರ ಕೊಲೆ ಆಗಿದೆ. ಸ್ವಾಮೀಜಿ ಆಪ್ತ ಸಹಾಯಕ ರವಿ(60) ಎಂಬಾತನಿಂದ ಕೃತ್ಯ ನಡೆದಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನಾ ಸ್ಥಳಕ್ಕೆ ನಜರ್‌ಬಾದ್ ಪೊಲೀಸರು (Nazarbad Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶಿವಾನಂದ ಸ್ವಾಮೀಜಿಗಳ ಆಪ್ತ ಸಹಾಯಕನಾಗಿದ್ದ ರವಿ ಕುಡಿದ ಮತ್ತಿನಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹುಲ್ಲು ಕತ್ತರಿಸುವ ಆಯುಧದಲ್ಲಿ ಸ್ವಾಮೀಜಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಡಿಸಿಪಿ ಮುತ್ತುರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅನ್ನದಾನೇಶ್ವರ ಮಠವು ಸುಮಾರು 9 ಎಕರೆ ವಿಸ್ತೀರ್ಣದಲ್ಲಿದೆ. ಮೈಸೂರು ರಾಜರು ದಾನವಾಗಿ ನೀಡಿದ್ದ ಈ ಮಠದ ಜಾಗದ ವಿಚಾರವಾಗಿ ಹಲವು ವಿವಾದಗಳಾಗಿದ್ದವು.

ಇನ್ನು ಮತ್ತೊಂದೆಡೆ ಶಿವಾನಂದ ಸ್ವಾಮೀಜಿಯವರು ನಿವೇಶನ ಮಾಡಿ ಸಂಬಂಧಿಕರಿಗೆ ಹಂಚಿದ್ದರು. 2011ರಲ್ಲಿ ಸ್ವಾಮೀಜಿ ವಿರುದ್ದ ಪ್ರಕರಣ ದಾಖಲಾಗಿತ್ತು. ನಿವೇಶನ ನೀಡುವುದಾಗಿ ಹಣ ಪಡೆದು ಮೋಸಕ್ಕೆ ಒಳಗಾಗಿದ್ದ ಪಾಟೀಲ್ ದಂಪತಿ ಸ್ವಾಮೀಜಿಯಿಂದ ವಂಚನೆ, ಲೈಂಗಿಕ ದೌರ್ಜನ್ಯ ಆರೋಪದಡಿ ಪ್ರಕರಣ ದಾಖಲಿಸಿದ್ದರು. ಇದರ ಜೊತೆಗೆ ಬದುಕಿದ್ದಾಗಲೇ ತಮ್ಮ ಗುರುಗಳ ಗದ್ದುಗೆ ಪಕ್ಕದಲ್ಲೇ ಮಠದ ಒಳಭಾಗದಲ್ಲೇ ಶಿವಾನಂದ ಸ್ವಾಮೀಜಿ ಸಮಾಧಿ ಮಾಡಿಕೊಂಡಿದ್ದರು.

ಇದನ್ನೂ ಓದಿ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ ಪ್ರಕರಣ: ಡೆತ್​ನೋಟ್ ಪತ್ತೆ, ಕಾಮುಕನ ವಿಕೃತ ಮುಖ ಬಯಲು

ಕಣಿವೆಯಲ್ಲಿ ಉದ್ಯಮಿ ಶವ ಪತ್ತೆ

ಬಿಳಿಗಿರಿರಂನಬೆಟ್ಟದ ಕಮರಿಯಲ್ಲಿ ಹಾರಿ ರಿಯಲ್ ಎಸ್ಟೇಟ್ ಉದ್ಯಮಿ ಸಾವನ್ನಪ್ಪಿದ್ದಾನೆ. ಮೈಸೂರಿನ ಕುಂಬಾರಹಳ್ಳಿ ಮಹೇಶ್ ಮೇ5 ರಂದು ನಾಪತ್ತೆ ಆಗಿದ್ದಾರೆಂದು ಕವಲಂದೆ ಪೋಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಜೂನ್ 6ರಂದು ಬಿಳಿಗಿರಿರಂನಬೆಟ್ಟದ ಬಳಿ ಬೈಕ್ ಪತ್ತೆಯಾಗಿತ್ತು. ಡ್ರೋನ್ ಮೂಲಕ ಹುಡುಕಾಟ ನಡೆಸಿದಾಗ, ಬೆಟ್ಟದ ಕಡಿದಾದ ಜಾಗದಲ್ಲಿ ಮೃತ ದೇಹ ಪತ್ತೆಯಾಗಿದೆ.

ಅಪಘಾತದಿಂದ 15ಕ್ಕೂ ಹೆಚ್ಚು ಜನರಿಗೆ ಗಾಯ

ಖಾಸಗಿ ಬಸ್​ ಪಲ್ಟಿಯಾಗಿ 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರದ ಮುಂಬಾಳು ಗ್ರಾಮದಲ್ಲಿ ಅಪಘಾತ ಸಂಭವಿಸಿದೆ. ಕೆರೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ ಹೊಡೆದಿದೆ. ಗಾಯಾಳುಗಳನ್ನ ಸ್ಥಳಿಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ