ಪ್ರತ್ಯೇಕ ಘಟನೆ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್​ ಸವಾರರಿಬ್ಬರ ಸಾವು, ಮೆಡಿಕಲ್​ ಶಾಪ್​ಗೆ ಬಂದಿದ್ದ ವ್ಯಕ್ತಿಗೆ ಹೃದಯಾಘಾತ​

ಮೈಸೂರಿನ ಉದಯಗಿರಿ ಮೆಡಿಕಲ್ ಸ್ಟೋರ್​ಗೆ ಔಷಧಿ ಖರೀದಿಸಲು ಬಂದಿದ್ದ ವ್ಯಕ್ತಿಗೆ ಹೃದಯಾಘಾತವಾಗಿದ್ದು ಕುಸಿದು ಬಿದ್ದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜಗದೀಶ್(38) ಮೃತ ವ್ಯಕ್ತಿ. ಜಗದೀಶ್ ಕುಸಿದು ಬಿದ್ದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಮಾತ್ರೆ ಖರೀದಿಸಲು ಜಗದೀಶ್ ಮೆಡಿಕಲ್ ಸ್ಟೋರ್‌ಗೆ ಬಂದಿದ್ದರು.

ಪ್ರತ್ಯೇಕ ಘಟನೆ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್​ ಸವಾರರಿಬ್ಬರ ಸಾವು, ಮೆಡಿಕಲ್​ ಶಾಪ್​ಗೆ ಬಂದಿದ್ದ ವ್ಯಕ್ತಿಗೆ ಹೃದಯಾಘಾತ​
ಅಪಘಾತದಲ್ಲಿ ಮೃತಪಟ್ಟ ಸೋಮಶೇಖರ್, ನಾಗೇಶ್
Edited By: ಆಯೇಷಾ ಬಾನು

Updated on: Oct 05, 2023 | 9:40 AM

ಮೈಸೂರು, ಅ.05: ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ (Accident) ಘಟನೆ ಮೈಸೂರು ಜಿಲ್ಲೆ ಹೆಚ್​.ಡಿ.ಕೋಟೆ ತಾಲೂಕಿನ ಗದ್ದಿಗೆ ಸುಂಕಲ್ ಮಂಟಿ ಬಳಿ ನಡೆದಿದೆ. ಅಪಘಾತದಲ್ಲಿ ಬೈಕ್​​ನಲ್ಲಿದ್ದ ಸೋಮಶೇಖರ್​(30), ನಾಗೇಶ್​​(28) ಮೃತಪಟ್ಟಿದ್ದಾರೆ. ಮೈಸೂರಿನಿಂದ ಹೆಚ್​.ಡಿ.ಕೋಟೆಗೆ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಈ ಸಂಬಂಧ ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ (HD Kote Police Station) ಪ್ರಕರಣ ದಾಖಲಾಗಿದೆ.

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ನಂಜನಗೂಡು ತಾಲೂಕಿನ ಈರೇಗೌಡನ ಹುಂಡಿ ಗ್ರಾಮದಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಹೆಡಿಯಾಲ ಗ್ರಾಮದ ಮಣಿಕಂಠ (37) ಮೃತ ದುರ್ದೈವಿ. ಯುವಕ ಜಮೀನಿನಲ್ಲಿ ನೇಣಿಗೆ ಶರಣಾಗಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ರಮೇಶ್ ಕರಕಿಕಟ್ಟೆ ಸೇರಿದಂತೆ ಇತರೆ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಔಷಧಿ ಖರೀದಿಸಲು ಮೆಡಿಕಲ್​ ಶಾಪ್​ಗೆ ಬಂದಿದ್ದ ವ್ಯಕ್ತಿಗೆ ಹೃದಯಾಘಾತ​

ಮೈಸೂರಿನ ಉದಯಗಿರಿ ಮೆಡಿಕಲ್ ಸ್ಟೋರ್​ಗೆ ಔಷಧಿ ಖರೀದಿಸಲು ಬಂದಿದ್ದ ವ್ಯಕ್ತಿಗೆ ಹೃದಯಾಘಾತವಾಗಿದ್ದು ಕುಸಿದು ಬಿದ್ದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜಗದೀಶ್(38) ಮೃತ ವ್ಯಕ್ತಿ. ಜಗದೀಶ್ ಕುಸಿದು ಬಿದ್ದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಮಾತ್ರೆ ಖರೀದಿಸಲು ಜಗದೀಶ್ ಮೆಡಿಕಲ್ ಸ್ಟೋರ್‌ಗೆ ಬಂದಿದ್ದರು. ಈ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಮೃತ ಜಗದೀಶ್ ಅವರು ಕ್ಯಾತಮಾರನಹಳ್ಳಿಯಲ್ಲಿ ಚಿಕನ್ ಅಂಗಡಿ ನಡೆಸುತ್ತಿದ್ದರು. ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಸಿನಿಮಾ ಕಥೆಯಂತೆ ನಡೆದ ರಿಯಲ್ ಸ್ಟೋರಿ: ಚಾಕು ಹಿಡಿದು ಬೆದರಿಸಲು ಹೋದವ ಕೊಲೆಯಾದ

ತಲೆ ಮೇಲೆ ಕಲ್ಲು ಎತ್ತಿಹಾಕಿ ಟೈಲರ್ ಅಂಗಡಿ ಮಾಲೀಕನ ಹತ್ಯೆ​

ಕಲಬುರಗಿಯ ಮಕ್ತಂಪುರ ಬಡಾವಣೆಯಲ್ಲಿ ನಿನ್ನೆ ರಾತ್ರಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಟೈಲರ್ ಅಂಗಡಿ ಮಾಲೀಕನ ಹತ್ಯೆ ನಡೆದಿದೆ. ಮನೆ ಮುಂದೆಯೇ ದುಷ್ಕರ್ಮಿಗಳು ಸಂತೋಷ್​(44) ಹತ್ಯೆ ಮಾಡಿದ್ದಾರೆ.  ಹಳೇ ವೈಷಮ್ಯ ಹಿನ್ನೆಲೆ ಸಂತೋಷ್​​ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಬ್ರಹ್ಮಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
 ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:35 am, Thu, 5 October 23

Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
Follow Us