AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಚಲಿಸುತ್ತಿದ್ದ ಸಾರಿಗೆ ಬಸ್​ನಿಂದ ಆಯತಪ್ಪಿ ಬಿದ್ದು ಕಂಡಕ್ಟರ್​ ಸಾವು

ಪ್ರತ್ಯೇಕ ಎರಡು ಘಟನೆ: ಚಲಿಸುತ್ತಿದ್ದ ಕೆಎಸ್​​ಆರ್​ಟಿಸಿ ಬಸ್​ನಿಂದ ಆಯತಪ್ಪಿ ಬಿದ್ದು ನಿರ್ವಾಹಕ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಮಲ್ಲನಮೂಲೆ ಮಠದ ಬಳಿ ನಡೆದಿದೆ. ಮತ್ತೊಂದು ಘಟನೆಯಲ್ಲಿ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮ ವಸತಿ ನಿಲಯದಲ್ಲಿ 10ನೇ ತರಗತಿ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾಳೆ.

ಮೈಸೂರು: ಚಲಿಸುತ್ತಿದ್ದ ಸಾರಿಗೆ ಬಸ್​ನಿಂದ ಆಯತಪ್ಪಿ ಬಿದ್ದು ಕಂಡಕ್ಟರ್​ ಸಾವು
ಮೃತ ನಿರ್ವಾಹಕ ಮಹದೇವಸ್ವಾಮಿ
TV9 Web
| Edited By: |

Updated on: Mar 09, 2024 | 10:29 AM

Share

ಮೈಸೂರು, ಮಾರ್ಚ್​ 09: ಚಲಿಸುತ್ತಿದ್ದ ಕೆಎಸ್​​ಆರ್​ಟಿಸಿ (KSRTC) ಬಸ್​ನಿಂದ ಆಯತಪ್ಪಿ ಬಿದ್ದು ನಿರ್ವಾಹಕ (Contactor) ಮೃತಪಟ್ಟಿರುವ ಘಟನೆ ನಂಜನಗೂಡು (Nanjangud) ತಾಲೂಕಿನ ಮಲ್ಲನಮೂಲೆ ಮಠದ ಬಳಿ ನಡೆದಿದೆ. ಚಾಮರಾಜನಗರ (Chamarajanagar) ತಾಲೂಕಿನ ಹಳೇಪುರ ನಿವಾಸಿ ಮಹದೇವಸ್ವಾಮಿ (35) ಮೃತ ನಿರ್ವಾಹಕ. ನಿರ್ವಾಹಕ ಮಹದೇವಸ್ವಾಮಿ ಕೆಎಸ್​ಆರ್​ಟಿಸಿ ಬಸ್​ನ ಫುಟ್​ ಬೋರ್ಡ್​​ನಲ್ಲಿ ನಿಂತಿದ್ದರು. ಈ ವೇಳೆ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ. ಸ್ಥಳಕ್ಕೆ ನಂಜನಗೂಡು ಡಿವೈಎಸ್​​ಪಿ ರಘು, ಸಂಚಾರಿ ಪೊಲೀಸರು ಭೇಟಿ ನೀಡಿದ್ದಾರೆ. ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯಾರ್ಥಿನಿ ನೇಣಿಗೆ ಶರಣು

ಕಲಬುರಗಿ: ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮ ವಸತಿ ನಿಲಯದಲ್ಲಿ 10ನೇ ತರಗತಿ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾಳೆ. 16 ವರ್ಷದ ಭಾಗ್ಯಶ್ರೀ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಚಿತ್ತಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್​​ನ ಕೊಲೆ

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ಶಿವಮೊಗ್ಗ: ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಮೃತಪಟ್ಟಿರುವ ಘಟನೆ ಹೊಸನಗರ ತಾಲೂಕಿನ ಅರಸಾಳು ಬಳಿ ನಡೆದಿದೆ. ಬೆಳಗ್ಗೆ 7.45ರ ಸುಮಾರಿಗೆ ಬೆಂಗಳೂರು – ತಾಳಗುಪ್ಪ ರೈಲಿಗೆ ಸಿಲುಕಿ ಸಾವಿಗೀಡಾಗಿದ್ದಾರೆ.ಘಟನೆಯಲ್ಲಿ ವ್ಯಕ್ತಿಯ ರುಂಡ-ಮುಂಡ ಬೇರ್ಪಟ್ಟಿದೆ. ರೈಲಿಗೆ ತಲೆ ಇಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ರಿಪ್ಪನಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್