ಮೈಸೂರು, ಮಾರ್ಚ್ 09: ಚಲಿಸುತ್ತಿದ್ದ ಕೆಎಸ್ಆರ್ಟಿಸಿ (KSRTC) ಬಸ್ನಿಂದ ಆಯತಪ್ಪಿ ಬಿದ್ದು ನಿರ್ವಾಹಕ (Contactor) ಮೃತಪಟ್ಟಿರುವ ಘಟನೆ ನಂಜನಗೂಡು (Nanjangud) ತಾಲೂಕಿನ ಮಲ್ಲನಮೂಲೆ ಮಠದ ಬಳಿ ನಡೆದಿದೆ. ಚಾಮರಾಜನಗರ (Chamarajanagar) ತಾಲೂಕಿನ ಹಳೇಪುರ ನಿವಾಸಿ ಮಹದೇವಸ್ವಾಮಿ (35) ಮೃತ ನಿರ್ವಾಹಕ. ನಿರ್ವಾಹಕ ಮಹದೇವಸ್ವಾಮಿ ಕೆಎಸ್ಆರ್ಟಿಸಿ ಬಸ್ನ ಫುಟ್ ಬೋರ್ಡ್ನಲ್ಲಿ ನಿಂತಿದ್ದರು. ಈ ವೇಳೆ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ. ಸ್ಥಳಕ್ಕೆ ನಂಜನಗೂಡು ಡಿವೈಎಸ್ಪಿ ರಘು, ಸಂಚಾರಿ ಪೊಲೀಸರು ಭೇಟಿ ನೀಡಿದ್ದಾರೆ. ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ: ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮ ವಸತಿ ನಿಲಯದಲ್ಲಿ 10ನೇ ತರಗತಿ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾಳೆ. 16 ವರ್ಷದ ಭಾಗ್ಯಶ್ರೀ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಚಿತ್ತಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ನ ಕೊಲೆ
ಶಿವಮೊಗ್ಗ: ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಮೃತಪಟ್ಟಿರುವ ಘಟನೆ ಹೊಸನಗರ ತಾಲೂಕಿನ ಅರಸಾಳು ಬಳಿ ನಡೆದಿದೆ. ಬೆಳಗ್ಗೆ 7.45ರ ಸುಮಾರಿಗೆ ಬೆಂಗಳೂರು – ತಾಳಗುಪ್ಪ ರೈಲಿಗೆ ಸಿಲುಕಿ ಸಾವಿಗೀಡಾಗಿದ್ದಾರೆ.ಘಟನೆಯಲ್ಲಿ ವ್ಯಕ್ತಿಯ ರುಂಡ-ಮುಂಡ ಬೇರ್ಪಟ್ಟಿದೆ. ರೈಲಿಗೆ ತಲೆ ಇಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ರಿಪ್ಪನಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ