AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ನ ಮಾಜಿ ಶಾಸಕ ವಾಸು ನಿಧನ

ಚಾಮರಾಜ ಕ್ಷೇತ್ರದ ಕಾಂಗ್ರೆಸ್​ನ ಮಾಜಿ ಶಾಸಕ ವಾಸು ಅವರು ಇಂದು (ಮಾ.09) ಬೆಳಿಗ್ಗೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ವಾಸು ಅವರು ಮೈಸೂರಿನ ಖಾಸಗಿ ಆಸ್ಪತ್ರೆ ದಾಖಲಾಗಿದ್ದರು. ವಾಸು ಅವರು ಮೇಯರ್ ವಾಸು ಎಂದೇ ಪ್ರಖ್ಯಾತರಾಗಿದ್ದರು.

ಕಾಂಗ್ರೆಸ್​ನ ಮಾಜಿ ಶಾಸಕ ವಾಸು ನಿಧನ
ಮಾಜಿ ಶಾಸಕ ವಾಸು
ದಿಲೀಪ್​, ಚೌಡಹಳ್ಳಿ
| Edited By: |

Updated on: Mar 09, 2024 | 11:57 AM

Share

ಮೈಸೂರು, ಮಾರ್ಚ 09: ಕಾಂಗ್ರೆಸ್​ನ (Congress) ಮಾಜಿ ಶಾಸಕ ವಾಸು (72) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ವಾಸು ಅವರು ಮೈಸೂರಿನ (Mysore) ಖಾಸಗಿ ಆಸ್ಪತ್ರೆ ದಾಖಲಾಗಿದ್ದರು. ಇಂದು (ಮಾ.09) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರಿಗೆ ಮಕ್ಕಳಾದ ಕವೀಶ್​, ಅವೀಶ್​ ಹಾಗೂ ರಿತೇಷ್​ ಇದ್ದಾರೆ. ಗಾಯತ್ರಿಪುರಂ ವಾರ್ಡ್​​ ನಗರ ಪಾಲಿಕೆ ಸದಸ್ಯರಾಗಿ ಆಯ್ಕೆಗೊಂಡು ನಂತರ ಮೇಯರ್​​ ಆಗಿ ಆಯ್ಕೆಗೊಂಡಿದ್ದರು. ಇದರಿಂದ ವಾಸು ಅವರು ಮೇಯರ್ ವಾಸು ಎಂದೇ ಪ್ರಖ್ಯಾತರಾಗಿದ್ದರು.

ಚಾಮರಾಜ ಕ್ಷೇತ್ರದಲ್ಲಿ ನಾಲ್ಕು ಬಾರಿ ಕಾಂಗ್ರೆಸ್​ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮೂರು ಬಾರಿ ಸೋಲು ಕಂಡು, 2013ರ ಚುನಾವಣೆಯಲ್ಲಿ ಗೆಲವು ಸಾಧಿಸಿದ್ದರು. ಬಿಜೆಪಿಯ ಶಂಕರಲಿಂಗೇಗೌಡ ವಿರುದ್ಧ ಎರಡು ಬಾರಿ, ಬಿಜೆಪಿಯ ಎಲ್​. ನಾಗೇಂದ್ರ ವಿರುದ್ಧ ಒಂದು ಬಾರಿ ಸೋಲು ಕಂಡಿದ್ದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚಾಮರಾಜ ಕ್ಷೇತ್ರದಿಂದ ಕಾಂಗ್ರೆಸ್​ ಟಿಕೆಟ್​ ಬಯಸಿದ್ದರು. ಆದರೆ ಅವರಿಗೆ ಟಿಕೆಟ್ ಕೊಟ್ಟಿರಲಿಲ್ಲ. ಇದರಿಂದ ಆಕ್ರೋಶಗೊಂಡ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದರು.​

ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ

ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ವಾಸು ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ವಾಸು ನಿಧನದ ಸುದ್ದಿ ಕೇಳಿ ಬಹಳ ನೋವಾಗಿದೆ. ನನ್ನ ಆತ್ಮೀಯರಾಗಿದ್ದ ವಾಸು ಜೊತೆ ರಾಜಕೀಯ ಪಯಣದಲ್ಲಿ ಉತ್ತಮ ಒಡನಾಟ ಹೊಂದಿದ್ದೆ. ಮೈಸೂರು ಮೇಯರ್ ಆಗಿ, ನಂತರ ಶಾಸಕರಾಗಿ ವಾಸು ಅವರು ಮೈಸೂರು, ಚಾಮರಾಜನಗರ ಭಾಗದಲ್ಲಿ ಪಕ್ಷದ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರ ಅಗಲಿಕೆ ಪಕ್ಷಕ್ಕೆ ಬಹಳ ನಷ್ಟ ತಂದಿದೆ. ವಾಸು ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದರು.

ಅಂತಿಮ ದರ್ಶನ ಪಡೆದ ಜಿಟಿ ದೇವೇಗೌಡ

ಶಾಸಕ ಜಿ.ಟಿ.ದೇವೆಗೌಡ ವಾಸುರವರ ಅಂತಿಮ ದರ್ಶನ ಪಡೆದರು. ನಾವು ಅವರು ಬೇರೆ ಬೇರೆ ಪಕ್ಷದಲ್ಲಿದ್ದರೂ ಕೂಡ ನಮ್ಮ ಅವರ ಸಂಬಂಧ ಉತ್ತಮವಾಗಿತ್ತು. ವಾಸು ಶಿಕ್ಷಣ ಪ್ರೇಮಿ, ಶಿಕ್ಷಣ ಕ್ಷೇತ್ರಕ್ಕೆ ಕೊಡುಗೆ ಕೊಟ್ಟಿದ್ದಾರೆ. ವಾಸು ನಿಧನ ನಮಗೆ ತುಂಬಾ ನೋವುಂಟು ಮಾಡಿದೆ. ವಾಸುರವರ ಸಾವಿನ ದುಃಖ ಭರಿಸುವ ಶಕ್ತಿ ಅವರ ಕುಟುಂಬಕ್ಕೆ ದೇವರು ನೀಡಲಿ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್