ವಿಡಿಯೋ ನೋಡಿ: ಮೈಸೂರು; ಕುಡಿದ ಮತ್ತಿನಲ್ಲಿ ರಸ್ತೆ ಮಧ್ಯದಲ್ಲೇ ಕೆಎಸ್​ಆರ್​ಟಿಸಿ ಬಸ್ ನಿಲ್ಲಿಸಿದ ಚಾಲಕ

Drunk and Drive in Mysuru; ಬಸ್‌ನಲ್ಲಿ 50 ಪ್ರಯಾಣಿಕರಿದ್ದರು ಎನ್ನಲಾಗಿದೆ. ಮದ್ಯಪಾನದ ಅಮಲಿನಲ್ಲಿದ್ದ ಚಾಲಕ ಚಾಲನೆ ಮಾಡಲು ಸಾಧ್ಯವಾಗದೆ, ರಸ್ತೆಯ ಮಧ್ಯದಲ್ಲಿಯೇ ಬಸ್ ಅನ್ನು ನಿಲ್ಲಿಸಿದ್ದರಿಂದ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ತೊಂದರೆಯಾಯಿತು. ಸಿಟ್ಟಿಗೆದ್ದ ಪ್ರಯಾಣಿಕರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟಿದ್ದಕ್ಕಾಗಿ ಚಾಲಕನನ್ನು ನಿಂದಿಸುತ್ತಿದ್ದ ದೃಶ್ಯ ಕಂಡುಬಂತು.

Follow us
ರಾಮ್​, ಮೈಸೂರು
| Updated By: Ganapathi Sharma

Updated on: Aug 21, 2023 | 4:33 PM

ಮೈಸೂರು: ಪಾನಮತ್ತರಾಗಿದ್ದ ಕೆಎಸ್‌ಆರ್‌ಟಿಸಿ ಬಸ್ (KSRTC Bus) ಚಾಲಕನೊಬ್ಬ ವಾಹನ ಚಲಾಯಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಮೈಸೂರಿನ (Mysore) ಹ್ಯಾಂಡ್‌ಪೋಸ್ಟ್ ಬಳಿ ಬಸ್ ನಿಲ್ಲಿಸಿದ ವಿದ್ಯಮಾನ ಸೋಮವಾರ ನಡೆದಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರು ಚಾಲಕ ಮದ್ಯಪಾನದ ಮತ್ತಿನಲ್ಲಿದ್ದ ವಿಡಿಯೋಗಳನ್ನು ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ (Social Media) ಹಂಚಿಕೊಂಡಿದ್ದಾರೆ. ಚಾಲಕನನ್ನು ಗೋಪಾಲ ಕೃಷ್ಣ ಎಂದು ಗುರುತಿಸಲಾಗಿದ್ದು, ಇವರು ಎಚ್‌ಡಿ ಕೋಟೆ-ಮೈಸೂರು ಮಾರ್ಗದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಕರ್ತವ್ಯವನ್ನು ಪ್ರಾರಂಭಿಸುವ ಮೊದಲು ಬೆಳಿಗ್ಗೆ ಮದ್ಯಪಾನ ಮಾಡಿದ್ದೆ ಎಂದು ಗೋಪಾಲ ಕೃಷ್ಣ ಹೇಳುತ್ತಿರುವ ವೀಡಿಯೊ ವೈರಲ್ ಆಗಿದೆ.

ಬಸ್‌ನಲ್ಲಿ 50 ಪ್ರಯಾಣಿಕರಿದ್ದರು ಎನ್ನಲಾಗಿದೆ. ಮದ್ಯಪಾನದ ಅಮಲಿನಲ್ಲಿದ್ದ ಚಾಲಕ ಚಾಲನೆ ಮಾಡಲು ಸಾಧ್ಯವಾಗದೆ, ರಸ್ತೆಯ ಮಧ್ಯದಲ್ಲಿಯೇ ಬಸ್ ಅನ್ನು ನಿಲ್ಲಿಸಿದ್ದರಿಂದ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ತೊಂದರೆಯಾಯಿತು. ಸಿಟ್ಟಿಗೆದ್ದ ಪ್ರಯಾಣಿಕರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟಿದ್ದಕ್ಕಾಗಿ ಚಾಲಕನನ್ನು ನಿಂದಿಸುತ್ತಿದ್ದ ದೃಶ್ಯ ಕಂಡುಬಂತು. ಘಟನೆಯ ನಂತರ ಕೆಎಸ್‌ಆರ್‌ಟಿಸಿ ಬದಲಿ ಚಾಲಕನನ್ನು ಕಳುಹಿಸಿ ಬಸ್ ಅನ್ನು ಡಿಪೋಗೆ ಕರೆಸಿಕೊಂಡಿದೆ. ಚಾಲಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೋಮವಾರ ಬೆಳಗ್ಗೆ ಸಂಭವಿಸಿದ ಮತ್ತೊಂದು ಘಟನೆಯಲ್ಲಿ, ಮಡಿಕೇರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಪ್ರತಿಮೆಯೊಂದಕ್ಕೆ ಡಿಕ್ಕಿಯಾಗಿದೆ. ರಾಂಗ್ ಸೈಡ್​​ನಲ್ಲಿ ಚಲಿಸಿದ ಟ್ರಕ್‌ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಬಸ್ ಚಾಲಕ ಪ್ರಯತ್ನಿಸಿದಾಗ ಈ ಘಟನೆ ಸಂಭವಿಸಿದೆ. ಅದೃಷ್ಟವಶಾತ್, ಘಟನೆಯ ಸಮಯದಲ್ಲಿ ಬಸ್ ಖಾಲಿಯಾಗಿತ್ತು. ಚಾಲಕ ಮತ್ತು ಕಂಡಕ್ಟರ್‌ಗೆ ಸಣ್ಣಪುಟ್ಟ ಗಾಯಗಳಾಗಿವೆ.

ಇದನ್ನೂ ಓದಿ: Mysore Dasara 2023: ದಸರಾ ಗಜಪಡೆ ಸ್ವಾಗತಕ್ಕೆ ಸಜ್ಜಾಗುತ್ತಿದೆ ಅರಮನೆ ನಗರಿ, ಜಂಬೂಸವಾರಿಗೆ ಮಿಸ್ ಆಗಲಿವೆ ಚೈತ್ರಾ-ವಿಕ್ರಮ ಆನೆ

ಈ ಮಧ್ಯೆ, ಮೈಸೂರಿನ ಹುಣಸೂರು ತಾಲೂಕಿನ ಮಲ್ಲಿನಾಥಪುರದ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರ ಗಿರೀಶ್ (60) ಮೃತಪಟ್ಟಿದ್ದಾರೆ. ಅಪರಿಚಿತ ವಾಹನದ ಸಮೇತ ಅದರ ಚಾಲಕ ಪರಾರಿಯಾಗಿದ್ದಾನೆ. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ