ಮೈಸೂರು: ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥ

| Updated By: ವಿವೇಕ ಬಿರಾದಾರ

Updated on: May 12, 2024 | 10:35 AM

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕಡೇಮನುಗನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥರನ್ನು ತಾಲೂಕು ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗ್ರಾಮಕ್ಕೆ ಜಿಲ್ಲಾ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಮೈಸೂರು: ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥ
ಕಾಮಗಾರಿ, ಅಸ್ವಸ್ಥಗೊಂಡವರು
Follow us on

ಮೈಸೂರು, ಮೇ 12: ಕಲುಷಿತ ನೀರು (Contaminated water) ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಹುಣಸೂರು (Hunasuru) ತಾಲೂಕಿನ ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಜಲ ಜೀವನ್ ಮಿಷನ್ ಯೋಜನೆಯ (Jal Jeevan Mission) ಕಾಮಗಾರಿ ನಡೆಯುತ್ತಿದೆ. ಈ ಕಾಮಗಾರಿಯಿಂದ ಮನೆಗಳಿಗೆ ನೀರು ಪೂರೈಸುವ ಪೈಪ್​ಗೆ ಹಾನಿಯಾಗಿದೆ. ಒಡೆದ ಪೈಪ್​ ಒಳಗೆ​ ಕಲುಷಿತ ನೀರು ಸೇರ್ಪಡೆಯಾಗಿದೆ. ಈ ನೀರನ್ನು ಗ್ರಾಮಸ್ಥರು ಸೇವಿಸಿದ್ದು, 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥರನ್ನು ತಾಲೂಕು ಸೇರಿದಂತೆ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗ್ರಾಮಕ್ಕೆ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

200ಕ್ಕೂ ಹೆಚ್ಚು ಜನ ಅಸ್ವಸ್ಥ

ಮೈಸೂರು:  ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದಲ್ಲಿ ಬೀಗರ ಔತಣಕೂಟದಲ್ಲಿ ಊಟ ಮಾಡಿದ್ದ 200ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವ ಘಟನೆ ನಡೆದಿತ್ತು. ಬೀಗರ ಔತಣ ಊಟವನ್ನು ಸೇವಿಸಿದ ಸುಮಾರು 200ಕ್ಕೂ ಹೆಚ್ಚು ಮಂದಿಗೆ ತೀವ್ರ ವಾಂತಿ ಬೇಧಿಯಾಗಿದ್ದು, ಕೂಡಲೇ ಅವರನ್ನು ಸಮೀಪದ ಕುಶಾಲನಗರ ಆಸ್ಪತ್ರೆ, ಕೊಪ್ಪ ಆಸ್ಪತ್ರೆ, ಬೈಲಕುಪ್ಪೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಬೀಗರ ಔತಣಕೂಟದಲ್ಲಿ ಸಚಿವ ಕೆ, ವೆಂಕಟೇಶ್ ಸಹ ಭಾಗಿಯಾಗಿದ್ದರು. ಆದರೆ, ಅವರು ಮಾಂಸ ಆಹಾರ ಬದಲಿಗೆ ಸಸ್ಯಹಾರಿ ಆಹಾರ ಸೇವಿಸಿದ್ದರು. ಇದರಿಂದ ಅವರು ಆರೋಗ್ಯವಾಗಿದ್ದರು.

ಇದನ್ನೂ ಓದಿ: ಚಿಕನ್ ಶವರ್ಮಾ ತಿಂದು ಓರ್ವ ಯುವಕ ಸಾವು; ಐವರು ಅಸ್ವಸ್ಥ

150 ಕ್ಕೂ ಹೆಚ್ಚು ಜನರು ಅಸ್ವಸ್ಥ

ರಾಮನಗರ: ಜಿಲ್ಲೆಯಲ್ಲಿ ಇತ್ತೀಚೆಗೆ ಮದುವೆ ಸಮಾರಂಭದಲ್ಲಿ ಪಾಲ್ಗೊಂಡಿದ್ದ 150 ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವಂತಹ ಘಟನೆ ನಡೆದಿತ್ತು. ಫುಡ್​ ಪಾಯಿಸನ್​ ಲಕ್ಷಣಗಳು ಕಂಡ ಬಂದ ಹಿನ್ನೆಲೆ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬೆಂಗಳೂರಿನಿಂದ ಕೇವಲ 60 ಕಿಮೀ ದೂರದಲ್ಲಿರುವ ಚನ್ನಪಟ್ಟಣ ಪಟ್ಟಣದಲ್ಲಿ ಈ ಘಟನೆ ನಡೆದಿತ್ತು. ಚನ್ನಪಟ್ಟಣ ಪೊಲೀಸರ ಪ್ರಕಾರ, ಟಿಪ್ಪುನಗರದ ಮಿಲನ್ ಶಾದಿ ಮಾಲ್‌ನಲ್ಲಿ 200 ಕ್ಕೂ ಹೆಚ್ಚು ಜನರು ಮದುವೆ ಕಾರ್ಯದಲ್ಲಿ ಭಾಗವಸಿದ್ದರು ಎಂದು ಹೇಳಿದ್ದಾರೆ.

30ಕ್ಕೂ ಹೆಚ್ಚು ಜನರು ಅಸ್ವಸ್ಥ

ದಾವಣಗೆರೆ:  ಮದುವೆ ಊಟ ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವಂತಹ ಘಟನೆ ಚಿತ್ರದುರ್ಗ ತಾಲೂಕಿನ ಕಾಲಗೇರೆ ಗ್ರಾಮದಲ್ಲಿ ನಡೆದಿತ್ತು. ಕಾಲಗೇರೆಯ ಸಣ್ಣ ರುದ್ರಪ್ಪ ಪುತ್ರಿ ಮದುವೆ ಕಾರ್ಯಕ್ರಮದಲ್ಲಿ ಜನರು ಊಟ ಮಾಡಿದ್ದಾರೆ. ರಾತ್ರಿ ವೇಳೆಗೆ ವಾಂತಿ-ಭೇದಿಯಿಂದ ಜನರು ಬಳಲಿದ್ದಾರೆ. ಕೂಡಲೆ ಭರಮಸಾಗರ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅಸ್ವಸ್ಥರನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:51 am, Sun, 12 May 24