ಮೈಸೂರು ಮೇ 22: ಮೈಸೂರಿನ (Mysore) ಯರಗನಹಳ್ಳಿಯಲ್ಲಿ ವಾಸವಾಗಿದ್ದ ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಬಟ್ಟೆ ಐರನ್ ಕೆಲಸ ಮಾಡುತ್ತಿದ್ದ ಮಂಜುಳಾ (39), ಕುಮಾರಸ್ವಾಮಿ (45), ಅರ್ಚನಾ (19), ಸ್ವಾತಿ (17) ಮೃತ ದುರ್ದೈವಿಗಳು. ಸ್ಥಳಕ್ಕೆ ಕಮಿಷನರ್ ರಮೇಶ್ ಬಾನೋತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಲಿಂಡರ್ ಸೋರಿಕೆಯಿಂದ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ನಾಲ್ವರೂ ಎರಡು ದಿನದ ಹಿಂದೆಯೇ ಮೃತಪಟ್ಟಿರುವ ಬಗ್ಗೆ ಮಾಹಿತಿ ದೊರೆತಿದೆ.
ಮೂಲತಃ ಚಿಕ್ಕಮಗಳೂರು ಸಖರಯಪಟ್ಟಣದ ಕುಟುಂಬ ಕಳೆದ 30 ವರ್ಷದಿಂದ ಮೈಸೂರಿನಲ್ಲಿ ವಾಸವಾಗಿದೆ. ನಾಲ್ವರೂ ಕಳೆದ ಗುರುವಾರ ಗುರುವಾರ ಸಂಬಂಧಿಕರ ಮದುವೆ ಹೋಗಿದ್ದರು. ಮದುವೆ ಮುಗಿಸಿಕೊಂಡು ತಮ್ಮ ಊರಾದ ಸಖರಯಪಟ್ಟಣಕ್ಕೆ ಹೋಗಿದ್ದರು. ಅಲ್ಲಿಂದ ಸೋಮವಾರ ಬೆಳಗ್ಗೆ ಮೈಸೂರಿಗೆ ವಾಪಸ್ಸಾಗಿದ್ದರು.
ಸೋಮವಾರ ರಾತ್ರಿ ಅನಿಲ ಸೋರಿಕೆಯಾಗಿದೆ. ಇದರಿಂದ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಮಂಗಳವಾರ (ಮೇ 21) ಇಡೀ ದಿನ ಮನೆಯ ಬಾಗಿಲು ತೆರೆದಿರಲಿಲ್ಲ. ಇಂದು (ಮೇ 21) ಅರ್ಚನಾ ಮತ್ತು ಸ್ವಾತಿ ಕಾಲೇಜು ಸ್ನೇಹಿತರು ಮನೆ ಬಳಿ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಮನೆಯಲ್ಲಿ ನಾಲ್ಕು ಗ್ಯಾಸ್ ಪತ್ತೆಯಾಗಿವೆ.
ಇದನ್ನೂ ಓದಿ: ಪತ್ನಿಯನ್ನು ಕೊಂದು, ಮೃತದೇಹದೊಂದಿಗೆ ಸೆಲ್ಫಿ ತೆಗೆದು ಸಂಬಂಧಿಕರಿಗೆ ಕಳುಹಿಸಿ, ಆತ್ಮಹತ್ಯೆ ಮಾಡಿಕೊಂಡ ಪತಿ
ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮಹಿಮಾಪುರ ಬಳಿ ಟೆಂಪೋ ಪಲ್ಟಿಯಾಗಿ ಓರ್ವ ಮೃತಪಟ್ಟಿದ್ದಾರೆ. ತುಮಕೂರು ಜಿಲ್ಲೆ ಪಾವಗಡ ಮೂಲದ ಬಾಬುಜಾನ್ ಕ್ಲೀನರ್ ಬಾಬುಜಾನ್ (32) ಮೃತ ದುರ್ದೈವಿ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:49 am, Wed, 22 May 24