ಪಾರ್ಕಿಂಗ್, ಎಂಟ್ರಿ ಟಿಕೆಟ್​​ನಲ್ಲಿ ಅವ್ಯವಹಾರ: ಮೈಸೂರು ಅರಮನೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಮೈಸೂರು ಅರಮನೆ ಪ್ರವೇಶ ಟಿಕೆಟ್ ಹಾಗೂ ಪಾರ್ಕಿಂಗ್​ನಲ್ಲಿ ಸಾಕಷ್ಟು ಅವ್ಯವಹಾರ ನಡೆಯುತ್ತಿದೆ ಎಂಬ ಬಗ್ಗೆ ದೂರು ಬಂದಿತ್ತು. ಈ ಹಿನ್ನಲೆ ಇಂದು(ಮೇ.23) ಲೋಕಾಯುಕ್ತ ಎಸ್​ಪಿ ಸಚಿತ್ ನೇತೃತ್ವದಲ್ಲಿ ದಾಳಿ ಮಾಡಿತ್ತು. ಈ ವೇಳೆ ಲೆಕ್ಕಕ್ಕೆ ಸಿಗದ 4.10 ಲಕ್ಷ ರೂಪಾಯಿ ನಗದು ಪತ್ತೆಯಾಗಿದ್ದು, ವಶಕ್ಕೆ ಪಡೆಯಲಾಗಿದೆ.

ಪಾರ್ಕಿಂಗ್, ಎಂಟ್ರಿ ಟಿಕೆಟ್​​ನಲ್ಲಿ ಅವ್ಯವಹಾರ: ಮೈಸೂರು ಅರಮನೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ
ಮೈಸೂರು ಅರಮನೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ
Follow us
ರಾಮ್​, ಮೈಸೂರು
| Updated By: ಕಿರಣ್ ಹನುಮಂತ್​ ಮಾದಾರ್

Updated on: May 23, 2024 | 9:56 PM

ಮೈಸೂರು, ಮೇ.23: ಮೈಸೂರಿನ(Mysore) ಅರಮನೆ ಮಂಡಳಿ ಕಚೇರಿ ಮೇಲೆ ಇಂದು(ಮೇ.23) ಲೋಕಾಯುಕ್ತ ದಾಳಿ (Lokayukta Raid) ನಡೆಸಿದೆ. ಈ ವೇಳೆ ಪ್ರವೇಶ ದ್ವಾರ, ಪಾರ್ಕಿಂಗ್ ಲಾಟ್​ನಲ್ಲಿ ಲೆಕ್ಕಕ್ಕೆ ಸಿಗದ 4.10 ಲಕ್ಷ ರೂಪಾಯಿ ನಗದು ಪತ್ತೆಯಾಗಿದ್ದು, ವಶಕ್ಕೆ ಪಡೆಯಲಾಗಿದೆ. ಪ್ರವೇಶ ಟಿಕೆಟ್ ಹಾಗೂ ಪಾರ್ಕಿಂಗ್​ನಲ್ಲಿ ಸಾಕಷ್ಟು ಅವ್ಯವಹಾರ ನಡೆಯುತ್ತಿದೆ ಎಂಬ ಬಗ್ಗೆ ದೂರು ಬಂದಿತ್ತು. ಈ ಹಿನ್ನಲೆ ದೂರು ಆಧರಿಸಿ ಲೋಕಾಯುಕ್ತ ಎಸ್​ಪಿ ಸಚಿತ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ಅಕ್ರಮ ಹಣವನ್ನ ಜಪ್ತಿ ಮಾಡಲಾಗಿದೆ. ಇನ್ನು ಕಾರ್ಯಾಚರಣೆಯಲ್ಲಿ ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಮಡಿಕೇರಿ ಲೋಕಾಯುಕ್ತ ಡಿವೈಎಸ್​​ಪಿಗಳು, ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗಿಯಾಗಿದ್ದಾರೆ.

ಅಕ್ರಮ ಸಿಲಿಂಡರ್ ರೀಫಿಲಿಂಗ್ ಅಡ್ಡೆಗಳ ಮೇಲೆ ದಾಳಿ

ಕೋಲಾರ: ಜಿಲ್ಲೆಯ ಕೆಜಿಎಫ್​​ ನಗರದ ಆಂಡರ್ಸನ್ ಪೇಟೆಯಲ್ಲಿ ಅಕ್ರಮ ಸಿಲಿಂಡರ್ ರೀಫಿಲಿಂಗ್ ಅಡ್ಡೆಗಳ ಮೇಲೆ ಆಹಾರ ಇಲಾಖೆ ನಿರ್ದೇಶಕ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ 136 ಗೃಹೋಪಯೋಗಿ ಮತ್ತು ಕಮರ್ಷಿಯಲ್ ಸಿಲಿಂಡರ್​ಗಳು ಜಪ್ತಿಯಾಗಿದೆ. ಅಕ್ರಮವಾಗಿ ಇತರೆ ಉದ್ದೇಶಕ್ಕೆ ಬಳಸುತ್ತಿದ್ದ ಮಾಹಿತಿ ಮೇರೆಗೆ ಇಂದು ದಾಳಿ ನಡೆಸಲಾಗಿತ್ತು. ಈ ಕುರಿತು ಆಂಡರ್ಸನ್ ಪೇಟೆ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಲೋಕಾಯುಕ್ತ ದಾಳಿ; 6 ಭ್ರಷ್ಟ ಅಧಿಕಾರಿಗಳು ಖೆಡ್ಡಾಕ್ಕೆ

ಬೈಕ್ ಸವಾರ ಕಂದಕಕ್ಕೆ ಬಿದ್ದು ಸಾವು, ಮತ್ತೊಬ್ಬ ಗಂಭೀರ

ವಿಜಯನಗರ: ತುಂಗಭದ್ರಾ ಜಲಾಶಯದ ಹಿನ್ನೀರು ಬಳಿ ಕಂದಕಕ್ಕೆ ಬೈಕ್ ಬಿದ್ದು ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಜಗದೀಶ್ (28) ಮೃತ ರ್ದುದೈವಿ. ಇನ್ನು  ಶಶಾಂಕ್ ಪಾಟೀಲ್​ ಎಂಬುವವರಿಗೆ ಗಂಭೀರ ಗಾಯವಾಗಿದ್ದು, ಹೊಸಪೇಟೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರಿನಿಂದ ಇಳಕಲ್​ಗೆ ಬೈಕ್​ನಲ್ಲಿ ತೆರಳುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಈ ಕುರಿತು ಮರಿಯಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ