ಮೈಸೂರು, ಮೇ.23: ಮೈಸೂರಿನ(Mysore) ಅರಮನೆ ಮಂಡಳಿ ಕಚೇರಿ ಮೇಲೆ ಇಂದು(ಮೇ.23) ಲೋಕಾಯುಕ್ತ ದಾಳಿ (Lokayukta Raid) ನಡೆಸಿದೆ. ಈ ವೇಳೆ ಪ್ರವೇಶ ದ್ವಾರ, ಪಾರ್ಕಿಂಗ್ ಲಾಟ್ನಲ್ಲಿ ಲೆಕ್ಕಕ್ಕೆ ಸಿಗದ 4.10 ಲಕ್ಷ ರೂಪಾಯಿ ನಗದು ಪತ್ತೆಯಾಗಿದ್ದು, ವಶಕ್ಕೆ ಪಡೆಯಲಾಗಿದೆ. ಪ್ರವೇಶ ಟಿಕೆಟ್ ಹಾಗೂ ಪಾರ್ಕಿಂಗ್ನಲ್ಲಿ ಸಾಕಷ್ಟು ಅವ್ಯವಹಾರ ನಡೆಯುತ್ತಿದೆ ಎಂಬ ಬಗ್ಗೆ ದೂರು ಬಂದಿತ್ತು. ಈ ಹಿನ್ನಲೆ ದೂರು ಆಧರಿಸಿ ಲೋಕಾಯುಕ್ತ ಎಸ್ಪಿ ಸಚಿತ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ಅಕ್ರಮ ಹಣವನ್ನ ಜಪ್ತಿ ಮಾಡಲಾಗಿದೆ. ಇನ್ನು ಕಾರ್ಯಾಚರಣೆಯಲ್ಲಿ ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಮಡಿಕೇರಿ ಲೋಕಾಯುಕ್ತ ಡಿವೈಎಸ್ಪಿಗಳು, ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗಿಯಾಗಿದ್ದಾರೆ.
ಕೋಲಾರ: ಜಿಲ್ಲೆಯ ಕೆಜಿಎಫ್ ನಗರದ ಆಂಡರ್ಸನ್ ಪೇಟೆಯಲ್ಲಿ ಅಕ್ರಮ ಸಿಲಿಂಡರ್ ರೀಫಿಲಿಂಗ್ ಅಡ್ಡೆಗಳ ಮೇಲೆ ಆಹಾರ ಇಲಾಖೆ ನಿರ್ದೇಶಕ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ 136 ಗೃಹೋಪಯೋಗಿ ಮತ್ತು ಕಮರ್ಷಿಯಲ್ ಸಿಲಿಂಡರ್ಗಳು ಜಪ್ತಿಯಾಗಿದೆ. ಅಕ್ರಮವಾಗಿ ಇತರೆ ಉದ್ದೇಶಕ್ಕೆ ಬಳಸುತ್ತಿದ್ದ ಮಾಹಿತಿ ಮೇರೆಗೆ ಇಂದು ದಾಳಿ ನಡೆಸಲಾಗಿತ್ತು. ಈ ಕುರಿತು ಆಂಡರ್ಸನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ:ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಲೋಕಾಯುಕ್ತ ದಾಳಿ; 6 ಭ್ರಷ್ಟ ಅಧಿಕಾರಿಗಳು ಖೆಡ್ಡಾಕ್ಕೆ
ವಿಜಯನಗರ: ತುಂಗಭದ್ರಾ ಜಲಾಶಯದ ಹಿನ್ನೀರು ಬಳಿ ಕಂದಕಕ್ಕೆ ಬೈಕ್ ಬಿದ್ದು ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಜಗದೀಶ್ (28) ಮೃತ ರ್ದುದೈವಿ. ಇನ್ನು ಶಶಾಂಕ್ ಪಾಟೀಲ್ ಎಂಬುವವರಿಗೆ ಗಂಭೀರ ಗಾಯವಾಗಿದ್ದು, ಹೊಸಪೇಟೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರಿನಿಂದ ಇಳಕಲ್ಗೆ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಈ ಕುರಿತು ಮರಿಯಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ