ಮೈಸೂರು: ನಕಲಿ ಮರಣ ಪ್ರಮಾಣ ಪತ್ರ ಹಾಗೂ ವಂಶವೃಕ್ಷ ಸೃಷ್ಟಿಸಿ ಅಕ್ರಮ, ಮೂವರು ಅಧಿಕಾರಿಗಳ ಅಮಾನತು
ತಿರುಮಕೂಡಲು ಗ್ರಾಮದ ಸರ್ವೆ ನಂ.55/2 ರಲ್ಲಿ 22 ಗುಂಟೆ ಹಾಗೂ 55/6 ರಲ್ಲಿನ 8 ಗುಂಟೆ ಜಮೀನಿಗೆ ಅಕ್ರಮವಾಗಿ ಪೌತಿಖಾತೆ ಮಾಡಿಸಿದ್ದಾರೆ. ಕರ್ತವ್ಯಲೋಪ ಮೇಲ್ನೋಟಕ್ಕೆ ಕಂಡುಬಂದಿರುವ ಹಿನ್ನೆಲೆ ಮೂವರು ಅಧಿಕಾರಿಗಳನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಆದೇಶ ಹೊರಡಿಸಿದ್ದಾರೆ.
ಮೈಸೂರು, ನ.11: ನಕಲಿ ಮರಣ ಪ್ರಮಾಣ ಪತ್ರ ಹಾಗೂ ವಂಶವೃಕ್ಷ ಸೃಷ್ಟಿಸಿ ಅಕ್ರಮ ಎಸಗುತ್ತಿದ್ದ ಘಟನೆನೊಂದು ಬೆಳಕಿಗೆ ಬಂದಿದೆ. ಬೇನಾಮಿ ವ್ಯಕ್ತಿಗಳಿಗೆ ಪೌತಿಖಾತೆ ಮಾಡಿ ಕೊಟ್ಟ ಆರೋಪ ಹಿನ್ನೆಲೆ ಮೂವರು ಅಧಿಕಾರಿಗಳನ್ನು ಅಮಾನತು (Suspend) ಮಾಡಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಆದೇಶ ಹೊರಡಿಸಿದ್ದಾರೆ. ಐವರು ಅಧಿಕಾರಿಗಳ ವಿರುದ್ದ ಶಿಸ್ತುಕ್ರಮ ಕೈಗೊಳ್ಳುವಂತೆ ಟಿ.ನರಸೀಪುರ ತಹಶೀಲ್ದಾರ್ ಗೀತಾ, ಉಪ ವಿಭಾಗಾಧಿಕಾರಿ ಕೆ.ಆರ್.ರಕ್ಷಿತ್ ಅವರು ಶಿಫಾರಸ್ಸು ಮಾಡಿದ್ದರು. ಇದರ ಅನ್ವಯ ಮೂವರು ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಟಿ.ನರಸೀಪುರ ತಾಲೂಕು ಕಚೇರಿ ಹಿಂದಿನ ರಾಜಸ್ವ ನಿರೀಕ್ಷಕ ಹಾಲಿ ಆಹಾರ ನಿರೀಕ್ಷಕ ದೇವಣ್ಣ.ಕೆ, ಟಿ.ನರಸೀಪುರ ಭೈರಾಪುರ ಹಿಂದಿನ ಗ್ರಾಮ ಆಡಳಿತ ಅಧಿಕಾರಿ ಹಾಲಿ ಜಯಪುರ ವೃತ್ತ ಗ್ರಾಮ ಆಡಳಿತಾಧಿಕಾರಿ ಪ್ರದೀಪ್ ಸಿಂಗ್, ಟಿ.ನರಸೀಪುರ ತಾಲೂಕು ಕಚೇರಿ ಗ್ರಾಮ ಆಡಳಿತ ಅಧಿಕಾರಿ ಭೂಮಿಕೇಂದ್ರದ ಹಂಸಲೇಖ ಸೇರಿ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ತಿರುಮಕೂಡಲು ಗ್ರಾಮದ ಸರ್ವೆ ನಂ.55/2 ರಲ್ಲಿ 22 ಗುಂಟೆ ಹಾಗೂ 55/6 ರಲ್ಲಿನ 8 ಗುಂಟೆ ಜಮೀನಿಗೆ ಅಕ್ರಮವಾಗಿ ಪೌತಿಖಾತೆ ಮಾಡಿಸಿದ್ದಾರೆ. ಕರ್ತವ್ಯಲೋಪ ಮೇಲ್ನೋಟಕ್ಕೆ ಕಂಡುಬಂದಿರುವ ಹಿನ್ನೆಲೆ ಜಿಲ್ಲಾಧಿಕಾರಿ, ಇಲಾಖಾ ವಿಚಾರಣೆ ಕಾಯ್ದಿರಿಸಿದ್ದಾರೆ. ತಕ್ಷಣ ಜಾರಿಗೆ ಬರುವಂತೆ ಅಮಾನತ್ತಿನಲ್ಲಿಡುವಂತೆ ಆದೇಶಿಸಿದ್ದಾರೆ.
ಇದನ್ನೂ ಓದಿ: ಪಿಎಸ್ಐ ಮರು ಪರೀಕ್ಷೆ ನಡೆಸುವಂತೆ ಹೈಕೋರ್ಟ್ ತೀರ್ಪು: ಆದೇಶ ಪ್ರತಿ ಕೈ ಸೇರಿದ ಬಳಿಕ ಮುಂದಿನ ಹೆಜ್ಜೆ: ಜಿ ಪರಮೇಶ್ವರ್
ನಾಡಿಗೆ ಬಂದಿದ್ದ ಕಾಡಾನೆ ಸೆರೆ
ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಮಾಸ್ತಿಗುಡಿ ಪುನರ್ವಸತಿ ಕೇಂದ್ರದ ಬಳಿ ಕಾಡಾನೆ ಸೆರೆ ಹಿಡಿಯಲಾಗಿದೆ. ಕಾಡಿನಿಂದ ನಾಡಿಗೆ ಬಂದಿದ್ದ 45 ವರ್ಷದ ಒಂಟಿ ಸಲಗೆ ಸೆರೆಯಾಗಿದೆ. ದಸರಾ ಆನೆಗಳಾದ ಅಭಿಮನ್ಯು, ಅಶ್ವತ್ಥಾಮ, ಭೀಮ, ಹರ್ಷ, ಮಹೇಂದ್ರ ಸಹಾಯದಿಂದ ಕಾಡಾನೆ ಸೆರೆ ಹಿಡಿಯಲಾಗಿದೆ.
ಅಕ್ರಮ ಚಟುವಟಿಕೆ ಆರೋಪ, ಕ್ಲಬ್ ಮೇಲೆ ದಾಳಿ
ಬೆಂಗಳೂರಿನ ಬಸವೇಶ್ವರನಗರ ಪೊಲೀಸರು ಕ್ಲಬ್ ಮೇಲೆ ದಾಳಿ ಮಾಡಿದ್ದಾರೆ. ಅಕ್ರಮ ಚಟುವಟಿಕೆ ಹಿನ್ನಲೆ ಅಶೋಕ್ ಅಡಿಗ ಎಂಬುವರಿಗೆ ಸೇರಿದ ಕ್ಲಬ್ ಮೇಲೆ ರೇಡ್ ಮಾಡಿದ್ದಾರೆ. ಈ ಹಿಂದೆ ಅಶೋಕ್ ಅಡಿಗ ಆಡಿಯೋ ಒಂದು ವೈರಲ್ ಆಗಿತ್ತು. ಸಿಸಿಬಿ ಮುಖ್ಯಸ್ಥನಾಗಿದ್ದ ರಮಣ್ ಗುಪ್ತಾ ನಿಂದಿಸಿದ್ದ ಆಡಿಯೋ ಹರಿದಾಡಿತ್ತು. ಇದೀಗ ಅಕ್ರಮ ಚಟುವಟಿಕೆ ಹಿನ್ನಲೆ ಪೊಲೀಸರು ಕ್ಲಬ್ ಮೇಲೆ ದಾಳಿ ಮಾಡಿದ್ದಾರೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ