Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ- 20 ವರ್ಷ ಕಠಿಣ ಜೈಲು; ಮೈಸೂರಿನಲ್ಲಿ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವು

2019ರಲ್ಲಿ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮದಲ್ಲಿ ಪ್ರಕರಣ ನಡೆದಿತ್ತು. ಆಟವಾಡುತ್ತಿದ್ದ ಮಗುವಿನ ಮೇಲೆ ಜಗದೀಶ್ ದೌರ್ಜನ್ಯ ನಡೆಸಿದ್ದ. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸರ್ಕಾರದ ಪರ ಪಿಪಿ ಪುಷ್ಪಲತಾ ವಾದ ಮಂಡಿಸಿದ್ದರು.

ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ- 20 ವರ್ಷ ಕಠಿಣ ಜೈಲು; ಮೈಸೂರಿನಲ್ಲಿ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವು
ಸಾಂಕೇತಿಕ ಚಿತ್ರ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Sep 09, 2021 | 9:01 AM

ಮೈಸೂರು: ಮೂರೂವರೆ ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಾಬೀತಾಗಿದ್ದು, 45 ವರ್ಷದ ಜಗದೀಶ್ ಎಂಬಾತನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 50 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಮೈಸೂರಿನ ಪೋಕ್ಸೋ ವಿಶೇಷ ನ್ಯಾಯಾಲಯ ಈ ಆದೇಶ ನೀಡಿದೆ. ನ್ಯಾಯಾಧೀಶೆ ಶ್ಯಾಮಾಕಂರೋಸ್‌ ತೀರ್ಪು ನೀಡಿದ್ದಾರೆ.

2019ರಲ್ಲಿ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮದಲ್ಲಿ ಪ್ರಕರಣ ನಡೆದಿತ್ತು. ಆಟವಾಡುತ್ತಿದ್ದ ಮಗುವಿನ ಮೇಲೆ ಜಗದೀಶ್ ದೌರ್ಜನ್ಯ ನಡೆಸಿದ್ದ. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸರ್ಕಾರದ ಪರ ಪಿಪಿ ಪುಷ್ಪಲತಾ ವಾದ ಮಂಡಿಸಿದ್ದರು.

ಮೈಸೂರಿನಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಕಾರ್ಮಿಕ ಸಾವು:

ಮೈಸೂರಿನಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಕಾರ್ಮಿಕ ಅಸುನೀಗಿದ್ದಾರೆ. ಮೈಸೂರಿನ ಬೋಗಾದಿಯಲ್ಲಿ ಕಟ್ಟಡ ನಿರ್ಮಾಣ ವೇಳೆ ಬಳ್ಳಾರಿ ಮೂಲದ ಕಾರ್ಮಿಕ ಹನುಮಂತ ಮೃತಪಟ್ಟ ದುರ್ದೈವಿ. ಮೊದಲನೆಯ ಮಹಡಿಯಲ್ಲಿ ಕಟ್ಟಡ ಕಾಮಗಾರಿ ಕೆಲಸ ನಡೆಯುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವನ್ನಪ್ಪಿದ್ದಾನೆ. ಕಾರ್ಮಿಕನ ಮೇಲೆ ಬಿದ್ದ ಮತ್ತೊಬ್ಬ ಕಾರ್ಮಿಕ ಪಾರಾಗಿದ್ದಾನೆ. ಪ್ರಾಣಾಯದಿಂದ ಪಾರಾದ ಕೂಲಿ ಕಾರ್ಮಿಕನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸರಸ್ವತಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ, ಓರ್ವ ಸಾವು

mandya car accident

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ, ಓರ್ವ ಸಾವು

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಜವನಗಹಳ್ಳಿ ಬಳಿ ಕೊಳ್ಳೇಗಾಲ-ಮಳವಳ್ಳಿ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ, ಓರ್ವ ಮೃತಪಟ್ಟರುವ ಘಟನೆ ನಡೆದಿದೆ. ಕಾರಿನಲ್ಲಿದ್ದ ಗೋವಿಂದರಾಜು (28) ಸ್ಥಳದಲ್ಲೇ‌ ಕೊನೆಯುಸಿರೆಳೆದಿದ್ದಾರೆ. ಐವರಿಗೆ ಗಂಭೀರ ಗಾಯಗಳಾಗಿದ್ದು, ಮಳವಳ್ಳಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಪಾಂಡವಪುರದಿಂದ ಮಹದೇಶ್ವರ ಬೆಟ್ಟಕ್ಕೆ ಕಾರಿನಲ್ಲಿ ತೆರೆಳುತ್ತಿದ್ದರು. ಚಾಲಕನ‌ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಕಾರು ಸಂಪೂರ್ಣ ಜಖಂಗೊಂಡಿದೆ.

ಮಂಡ್ಯ: ಕಾಡುಹಂದಿಗೆ ಹೊಡೆದ ಗುಂಡು ತಗುಲಿ ಯುವಕನಿಗೆ ಗಾಯ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮೇಳಾಪುರ ಗ್ರಾಮದಲ್ಲಿ ಕಾಡುಹಂದಿ ಬೇಟೆ ವೇಳೆ ಕಾಡುಹಂದಿಗೆ ಹೊಡೆದ ಗುಂಡು ತಗುಲಿ ಯುವಕ ಗಾಯಗೊಂಡಿದ್ದಾನೆ. ಹವ್ಯಾಸಿ ಬೇಟೆಗಾರರಿಂದ 25 ವರ್ಷದ ಮಾದೇಶ್​ಗೆ ಗುಂಡೇಟು ಬಿದ್ದಿದ್ದು, ಗಾಯಗೊಂಡಿದ್ದಾನೆ.

ಮೈಸೂರು ಜಿಲ್ಲೆಯ 6 ಮಂದಿ ಯುವಕರ ತಂಡವು ನಾಡಬಂದೂಕು ಬಳಸಿ ಕಾಡುಹಂದಿ ಬೇಟೆಗೆ ಬಂದಿತ್ತು. ತಂಡ ಮಾದೇಶ ಅವರ ಕಬ್ಬಿನ ಗದ್ದೆಯಲ್ಲಿ ಹಂದಿಗಾಗಿ ಶೋಧ ನಡೆಸುತ್ತಿತ್ತು. ಮಾದೇಶ ಅದೇ ಗದ್ದೆಯ ಬದುವಿನಲ್ಲಿದ್ದ. ಮಾದೇಶನ ಹೊಟ್ಟೆ ಭಾಗಕ್ಕೆ ಗುಂಡು ತಗುಲಿ ಗಂಭೀರ ಗಾಯಗಳಾಗಿವೆ. ಗಾಯಗೊಂಡ ಮಾದೇಶ್‌ಗೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೈಸೂರು ಜಿಲ್ಲೆಯ 6 ಜನರ ತಂಡ ಬೇಟೆಗೆ ಬಂದಿತ್ತು. ಗ್ರಾಮಸ್ಥರು 6 ಜನರ ಪೈಕಿ ಮೂವರನ್ನ ಪೊಲೀಸರಿಗೊಪ್ಪಿಸಿದ್ದಾರೆ. ಶ್ರೀರಂಗಪಟ್ಟಣ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಸಾಮೂಹಿಕ ಅತ್ಯಾಚಾರದಲ್ಲಿ ಇದ್ದಿದ್ದು 6 ಜನ ಮಾತ್ರ ಅಲ್ಲ; ಪೊಲೀಸರ ಮುಂದೆ ಬಾಯ್ಬಿಟ್ಟ ಆರೋಪಿಗಳು

(mysore physical assault on baby girl accused get rigorous imprisonment)

Published On - 8:24 am, Thu, 9 September 21