ಸಂತ್ರಸ್ತೆ ಜೊತೆಗಿದ್ದ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ, ಆರೋಪಿಗಳ ಗುರುತು ಪತ್ತೆ ಮಾಡುವುದೇ ಪೊಲೀಸರಿಗೆ ದೊಡ್ಡ ಸವಾಲು

ಆರೋಪಿಗಳ ಗುರುತು ಪತ್ತೆ ಹಚ್ಚುವುದು ಪೊಲೀಸರಿಗೆ ದೊಡ್ಡ ಸವಾಲಾಗಿದೆ. ಸದ್ಯ ಪೊಲೀಸರು ಸಂತ್ರಸ್ತೆಯ ಜೊತೆಗಿದ್ದ ಯುವಕನಿಂದ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಆದ್ರೆ ಪ್ರಕರಣದ ಬಗ್ಗೆ ಪೊಲೀಸರಿಗೆ ಸೂಕ್ತ ಮಾಹಿತಿ ಸಿಗದ ಹಿನ್ನೆಲೆಯಲ್ಲಿ ಆರೋಪಿಗಳ ಗುರುತು ಪತ್ತೆಯೇ ಪೊಲೀಸರಿಗೆ ದೊಡ್ಡ ಸಮಸ್ಯೆಯಾಗಿದೆ.

ಸಂತ್ರಸ್ತೆ ಜೊತೆಗಿದ್ದ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ, ಆರೋಪಿಗಳ ಗುರುತು ಪತ್ತೆ ಮಾಡುವುದೇ ಪೊಲೀಸರಿಗೆ ದೊಡ್ಡ ಸವಾಲು
ನಿರ್ಜನ ಪ್ರದೇಶಗಳೇ ಆರೋಪಿಗಳ ಟಾರ್ಗೆಟ್​ ಆಗಿತ್ತು
Follow us
TV9 Web
| Updated By: ಆಯೇಷಾ ಬಾನು

Updated on:Aug 27, 2021 | 8:32 AM

ಮೈಸೂರು: ಮೈಸೂರಿನಲ್ಲಿ ಯುವತಿ ಮೇಲೆ ನಡೆದಿರೋ ಅಮಾನುಷ ಕೃತ್ಯ ಇಡೀ ದೇಶದ ಗಮನ ಸೆಳೆದಿದೆ. ಕಾಮುಕರ ಅಟ್ಟಹಾಸಕ್ಕೆ ಎಲ್ರೂ ಛೀ ಥೂ ಅಂತಿದ್ದಾರೆ. ಇಂಥಾ ಹೊತ್ತಲ್ಲಿ ಕರುನಾಡ ಜನ ಕೂಡ ಆಕ್ರೋಶ ಹೊರಹಾಕಿದ್ದಾರೆ. ಮೈಸೂರು ಗ್ಯಾಂಗ್ ರೇಪ್ ಖಂಡಿಸಿ ನಿನ್ನೆ ರಾಜ್ಯಾದ್ಯಂತ ಪ್ರತಿಭಟನೆ ನಡೆದಿದೆ. ಯುವತಿಯನ್ನು ಗ್ಯಾಂಗ್ ರೇಪ್ ಮಾಡಿರೋ ಕಾಮುಕರನ್ನು ತಕ್ಷಣ ಬಂಧಿಸುವಂತೆ ವಿದ್ಯಾರ್ಥಿಗಳು, ವಿವಿಧ ಸಂಘಟನೆ ಕಾರ್ಯಕರ್ತರ ಬೀದಿಗಿಳಿದು ಪ್ರತಿಭಟನೆ ನಡೆಸಿದ್ರು.

ಗ್ಯಾಂಗ್‌ರೇಪ್‌ನ ಆರೋಪಿಗಳ ಗುರುತು ಪತ್ತೆ ದೊಡ್ಡ ಸವಾಲು ಆದ್ರೆ ಮತ್ತೊಂದು ಕಡೆ ಆರೋಪಿಗಳ ಗುರುತು ಪತ್ತೆ ಹಚ್ಚುವುದು ಪೊಲೀಸರಿಗೆ ದೊಡ್ಡ ಸವಾಲಾಗಿದೆ. ಸದ್ಯ ಪೊಲೀಸರು ಸಂತ್ರಸ್ತೆಯ ಜೊತೆಗಿದ್ದ ಯುವಕನಿಂದ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಆದ್ರೆ ಪ್ರಕರಣದ ಬಗ್ಗೆ ಪೊಲೀಸರಿಗೆ ಸೂಕ್ತ ಮಾಹಿತಿ ಸಿಗದ ಹಿನ್ನೆಲೆಯಲ್ಲಿ ಆರೋಪಿಗಳ ಗುರುತು ಪತ್ತೆಯೇ ಪೊಲೀಸರಿಗೆ ದೊಡ್ಡ ಸಮಸ್ಯೆಯಾಗಿದೆ.

ಆರೋಪಿಗಳ ಚಹರೆ, ಅವರು ಮಾತನಾಡುತ್ತಿದ್ದ ಭಾಷೆ. ಯಾವ ವಾಹನದಲ್ಲಿ ಬಂದಿದ್ದರೆಂಬ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಈ ಬಗ್ಗೆ ಸಂತ್ರಸ್ತೆ ಜೊತೆಗಿದ್ದ ಯುವಕ ಸರಿಯಾದ ಮಾಹಿತಿ ನೀಡಿಲ್ಲ. ಸದ್ಯ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸುವುದಕ್ಕೆ ಸಾಧ್ಯವಾಗಿಲ್ಲ. ಹೀಗಾಗಿ ಪೊಲೀಸರಿಗೆ ಆರೋಪಿಗಳ ಗುರುತು ಪತ್ತೆ ಸಮಸ್ಯೆಯಾಗಿದೆ.

ಗೃಹ ಸಚಿವ ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ಸಭೆ ಮೈಸೂರಲ್ಲಿ ಗ್ಯಾಂಗ್‌ರೇಪ್, ಡಕಾಯಿತಿ ಶೂಟ್ಔಟ್ ಕೇಸ್ ಸಂಬಂಧ ಮೈಸೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಇಂದು ಬೆಳಗ್ಗೆ 11ಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ಸಭೆ ನಡೆಯಲಿದೆ. 2 ಪ್ರಕರಣಗಳ ತನಿಖಾ ಮಾಹಿತಿಯನ್ನು ಸಚಿವರು ಪಡೆಯಲಿದ್ದಾರೆ.

ಅರಗ ಜ್ಞಾನೇಂದ್ರ ಮೊದಲು ಚಾಮುಂಡೇಶ್ವರಿ ದರ್ಶ‌ನ ಪಡೆದು ನಂತರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲಿಂದ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ ಸುತ್ತೂರು ಶ್ರೀಗಳ ಆಶೀರ್ವಾದ ಪಡೆಯಲಿದ್ದಾರೆ. ನಂತರ ಮೈಸೂರು ಬಿಜೆಪಿ ಕಚೇರಿಗೆ ಭೇಟಿ ನೀಡಲಿದ್ದಾರೆ.

ಇದನ್ನೂ ಓದಿ: ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣದಂತಹ ಘಟನೆ ಮುಂದೆಂದೂ ನಡೆಯಬಾರದು: ಎಡಿಜಿಪಿ ಪ್ರತಾಪ್ ರೆಡ್ಡಿ

Published On - 8:23 am, Fri, 27 August 21