AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಐತಿಹಾಸಿಕ ದೇವರಾಜ ಮಾರುಕಟ್ಟೆ ಮರುನಿರ್ಮಾಣ, ನೆಲಸಮ ವಿಚಾರ: ಹೈಕೋರ್ಟ್ ಆದೇಶ, ಆತಂಕದಲ್ಲಿ ವ್ಯಾಪಾರಿಗಳು

Mysore Devaraja Market: ಶಿಥಿಲಾವಸ್ಥೆಯಲ್ಲಿರುವ ದೇವರಾಜ ಮಾರುಕಟ್ಟೆಯನ್ನು ನೆಲಸಮ ಮಾಡಿ, ನೂತನ ಮಾರುಕಟ್ಟೆ ಸಂಕೀರ್ಣ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಇದರ ವಿರುದ್ಧ 2020ರಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ, ಮಾರುಕಟ್ಟೆಯನ್ನು ನೆಲಸಮಗೊಳಿಸದಂತೆ ಕೋರಲಾಗಿತ್ತು. ಸುಮಾರು 3.67 ಎಕರೆ ಪ್ರದೇಶದ ದೇವರಾಜ ಮಾರುಕಟ್ಟೆ ನಿರ್ವಹಣೆ ಕೊರತೆಯಿಂದ ಶಿಥಿಲಾವಸ್ಥೆ ತಲುಪಿದೆ. ಮಾರುಕಟ್ಟೆಯನ್ನು ನೆಲಸಮಗೊಳಿಸಿ ಹೊಸ ಕಟ್ಟಡ ಕಟ್ಟುವುದು ಬಿಟ್ಟು ಬೇರೆ ಮಾರ್ಗವಿಲ್ಲ ಎಂದು ಸಮಿತಿಯು ಸರ್ಕಾರಕ್ಕೆ ವರದಿ ಸಲ್ಲಿಸಿತ್ತು.

ಮೈಸೂರು: ಐತಿಹಾಸಿಕ ದೇವರಾಜ ಮಾರುಕಟ್ಟೆ ಮರುನಿರ್ಮಾಣ, ನೆಲಸಮ ವಿಚಾರ: ಹೈಕೋರ್ಟ್ ಆದೇಶ, ಆತಂಕದಲ್ಲಿ ವ್ಯಾಪಾರಿಗಳು
ದೇವರಾಜ ಮಾರುಕಟ್ಟೆ ಮರುನಿರ್ಮಾಣ, ನೆಲಸಮ ವಿಚಾರ
ರಾಮ್​, ಮೈಸೂರು
| Updated By: ಸಾಧು ಶ್ರೀನಾಥ್​|

Updated on: Aug 16, 2023 | 10:45 AM

Share

ಮೈಸೂರು, ಆಗಸ್ಟ್​ 16: ರಾಜ್ಯ ಹೈಕೋರ್ಟ್ (Karnataka High Court) ಆದೇಶದ ನಂತರ ನಗರದ ಹೃದಯ ಭಾಗದಲ್ಲಿರುವ ಐತಿಹಾಸಿಕ ದೇವರಾಜ ಮಾರುಕಟ್ಟೆ (historic Devaraja Market) ಕಟ್ಟಡವನ್ನು ನೆಲಸಮಗೊಳಿಸಬಹುದು ಎಂಬ ಆತಂಕ ಸ್ಥಳೀಯ ವ್ಯಾಪಾರಿಗಳಲ್ಲಿ ಮನೆ ಮಾಡಿದೆ. ಮಾರುಕಟ್ಟೆ ನೆಲಸಮ ಮಾಡದಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ರಾಜ್ಯ ಹೈಕೋರ್ಟ್ ವಜಾ ಗೊಳಿಸಿರುವ ಹಿನ್ನೆಲೆ ಈ ಆತಂಕ ಎದುರಾಗಿದೆ. ಮಾರುಕಟ್ಟೆ ಕಟ್ಟ ಬೀಳಿಸದಂತೆ ಸಲ್ಲಿಸಲಾಗಿದ್ದ ಅರ್ಜಿಯನ್ನು ವಜಾ ಮಾಡಿರುವ ಹೈಕೋರ್ಟ್‌ನ ವಿಭಾಗೀಯ ಪೀಠವು ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನಿಲುವಿಗೆ ಬಲ ತುಂಬಿದಂತಾಗಿದೆ (Mysore).

ಶಿಥಿಲಾವಸ್ಥೆಯಲ್ಲಿರುವ ದೇವರಾಜ ಮಾರುಕಟ್ಟೆಯನ್ನು ನೆಲಸಮ ಮಾಡಿ, ನೂತನ ಮಾರುಕಟ್ಟೆ ಸಂಕೀರ್ಣ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಇದರ ವಿರುದ್ಧ 2020ರಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ, ಮಾರುಕಟ್ಟೆಯನ್ನು ನೆಲಸಮಗೊಳಿಸದಂತೆ ಕೋರಲಾಗಿತ್ತು. ಸುಮಾರು 3.67 ಎಕರೆ ಪ್ರದೇಶದ ದೇವರಾಜ ಮಾರುಕಟ್ಟೆ ನಿರ್ವಹಣೆ ಕೊರತೆಯಿಂದ ಶಿಥಿಲಾವಸ್ಥೆ ತಲುಪಿದೆ. 2016ರಲ್ಲಿ ದೇವರಾಜ ಮಾರುಕಟ್ಟೆಯ ಉತ್ತರ ದ್ವಾರ ಕುಸಿದಿತ್ತು. ಬಳಿಕ ದೇವರಾಜ ಮಾರುಕಟ್ಟೆ ಬಗ್ಗೆ ಸರ್ಕಾರ ತಜ್ಞರ ಸಮಿತಿಯೊಂದನ್ನು ರಚನೆ ಮಾಡಿತ್ತು.

Also read: Video: ಆ ಕಡೆ ಸೂರ್ಯನ ಪ್ರಕೋಪ -ಈ ಕಡೆ ಅಧಿಕಾರಿಗಳ ಬೇಜವಾಬ್ದಾರಿತನ: ಆತಂಕದ ಕ್ಷಣಗಳ ಎದುರಿಸಿದ ಸಚಿವ ಡಾಕ್ಟರ್​​ ಮಹದೇವಪ್ಪ

ಮಾರುಕಟ್ಟೆಯನ್ನು ನವೀಕರಣಗೊಳಿಸಲು ಸಾಧ್ಯವಿಲ್ಲ. ನೆಲಸಮಗೊಳಿಸಿ ಹೊಸ ಕಟ್ಟಡ ಕಟ್ಟುವುದು ಬಿಟ್ಟು ಬೇರೆ ಮಾರ್ಗವಿಲ್ಲ ಎಂದು ಸಮಿತಿಯು ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಇದೀಗ, ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ನಂತರ ವ್ಯಾಪಾರಿಗಳಲ್ಲಿ ಮತ್ತೆ ಆತಂಕ ಮನೆ ಮಾಡಿದೆ. ಮತ್ತೊಂದು ಕಡೆ, ಮಾರುಕಟ್ಟೆ ಕುಸಿಯುವ ಆತಂಕವೂ ಎದುರಾಗಿದೆ.

ಮೈಸೂರು ಜಿಲ್ಲಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

171 ರನ್​ ಗಳಿಸಿದ ಪಾಕಿಸ್ತಾನ್: 184 ರನ್​ ಚೇಸ್ ಮಾಡಿ ಗೆದ್ದ ವಿಂಡೀಸ್
171 ರನ್​ ಗಳಿಸಿದ ಪಾಕಿಸ್ತಾನ್: 184 ರನ್​ ಚೇಸ್ ಮಾಡಿ ಗೆದ್ದ ವಿಂಡೀಸ್
Daily Devotional: ಮಕ್ಕಳಿಗೆ ಬಾಲಾರಿಷ್ಟ ದೋಷಕ್ಕೆ ಪರಿಹಾರ ತಿಳಿಯಿರಿ
Daily Devotional: ಮಕ್ಕಳಿಗೆ ಬಾಲಾರಿಷ್ಟ ದೋಷಕ್ಕೆ ಪರಿಹಾರ ತಿಳಿಯಿರಿ
Daily horoscope: ಹಿಂಜರಿಕೆಯಿಂದ ನಿಮಗೆ ಒಳ್ಳೆಯದೇ ಆಗಲಿದೆ
Daily horoscope: ಹಿಂಜರಿಕೆಯಿಂದ ನಿಮಗೆ ಒಳ್ಳೆಯದೇ ಆಗಲಿದೆ
ವಿದ್ಯುತ್​ ದೀಪಾಲಂಕಾರ ನೋಡುತ್ತ ಮೈಸೂರು ಅರಮನೆಗೆ ಬಂದ ದಸರಾ ಆನೆಗಳು
ವಿದ್ಯುತ್​ ದೀಪಾಲಂಕಾರ ನೋಡುತ್ತ ಮೈಸೂರು ಅರಮನೆಗೆ ಬಂದ ದಸರಾ ಆನೆಗಳು
ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ.: ಯತ್ನಾಳ್
ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ.: ಯತ್ನಾಳ್
ಮೋದಿ ತೆರಳುತ್ತಿದ್ದ ವೇಳೆ ಬ್ಯಾರಿಕೇಡ್​ ಜಂಪ್ ಮಾಡಲು ಯತ್ನಿಸಿದ ಯುವಕ
ಮೋದಿ ತೆರಳುತ್ತಿದ್ದ ವೇಳೆ ಬ್ಯಾರಿಕೇಡ್​ ಜಂಪ್ ಮಾಡಲು ಯತ್ನಿಸಿದ ಯುವಕ
8 ಸಿಕ್ಸರ್, 83 ರನ್; ಟಿಮ್ ಡೇವಿಡ್ ಸಿಡಿಲಬ್ಬರದ ಬ್ಯಾಟಿಂಗ್‌
8 ಸಿಕ್ಸರ್, 83 ರನ್; ಟಿಮ್ ಡೇವಿಡ್ ಸಿಡಿಲಬ್ಬರದ ಬ್ಯಾಟಿಂಗ್‌
‘ಸನ್ ಆಫ್ ಮುತ್ತಣ್ಣ’ ಸಿನಿಮಾದ ಬಗ್ಗೆ ನಟ ರಂಗಾಯಣ ರಘು ಮಾತು
‘ಸನ್ ಆಫ್ ಮುತ್ತಣ್ಣ’ ಸಿನಿಮಾದ ಬಗ್ಗೆ ನಟ ರಂಗಾಯಣ ರಘು ಮಾತು
ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾಗೆ ಮುಹೂರ್ತ; ಜೋಡಿಯಾದ ಬೃಂದಾ ಆಚಾರ್ಯ
ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾಗೆ ಮುಹೂರ್ತ; ಜೋಡಿಯಾದ ಬೃಂದಾ ಆಚಾರ್ಯ
ಮೋದಿ-ಸಿದ್ದರಾಮಯ್ಯ ಮಟ್ರೋನಲ್ಲಿ ಸಂಚಾರ: ಪ್ರಯಾಣದುದ್ದಕ್ಕೂ ನಗೆಯಲ್ಲಿ ತೇಲಾಟ
ಮೋದಿ-ಸಿದ್ದರಾಮಯ್ಯ ಮಟ್ರೋನಲ್ಲಿ ಸಂಚಾರ: ಪ್ರಯಾಣದುದ್ದಕ್ಕೂ ನಗೆಯಲ್ಲಿ ತೇಲಾಟ