ಮೈಸೂರು, ಆಗಸ್ಟ್ 16: ರಾಜ್ಯ ಹೈಕೋರ್ಟ್ (Karnataka High Court) ಆದೇಶದ ನಂತರ ನಗರದ ಹೃದಯ ಭಾಗದಲ್ಲಿರುವ ಐತಿಹಾಸಿಕ ದೇವರಾಜ ಮಾರುಕಟ್ಟೆ (historic Devaraja Market) ಕಟ್ಟಡವನ್ನು ನೆಲಸಮಗೊಳಿಸಬಹುದು ಎಂಬ ಆತಂಕ ಸ್ಥಳೀಯ ವ್ಯಾಪಾರಿಗಳಲ್ಲಿ ಮನೆ ಮಾಡಿದೆ. ಮಾರುಕಟ್ಟೆ ನೆಲಸಮ ಮಾಡದಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ರಾಜ್ಯ ಹೈಕೋರ್ಟ್ ವಜಾ ಗೊಳಿಸಿರುವ ಹಿನ್ನೆಲೆ ಈ ಆತಂಕ ಎದುರಾಗಿದೆ. ಮಾರುಕಟ್ಟೆ ಕಟ್ಟ ಬೀಳಿಸದಂತೆ ಸಲ್ಲಿಸಲಾಗಿದ್ದ ಅರ್ಜಿಯನ್ನು ವಜಾ ಮಾಡಿರುವ ಹೈಕೋರ್ಟ್‌ನ ವಿಭಾಗೀಯ ಪೀಠವು ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನಿಲುವಿಗೆ ಬಲ ತುಂಬಿದಂತಾಗಿದೆ (Mysore).
ಶಿಥಿಲಾವಸ್ಥೆಯಲ್ಲಿರುವ ದೇವರಾಜ ಮಾರುಕಟ್ಟೆಯನ್ನು ನೆಲಸಮ ಮಾಡಿ, ನೂತನ ಮಾರುಕಟ್ಟೆ ಸಂಕೀರ್ಣ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಇದರ ವಿರುದ್ಧ 2020ರಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ, ಮಾರುಕಟ್ಟೆಯನ್ನು ನೆಲಸಮಗೊಳಿಸದಂತೆ ಕೋರಲಾಗಿತ್ತು. ಸುಮಾರು 3.67 ಎಕರೆ ಪ್ರದೇಶದ ದೇವರಾಜ ಮಾರುಕಟ್ಟೆ
ನಿರ್ವಹಣೆ ಕೊರತೆಯಿಂದ ಶಿಥಿಲಾವಸ್ಥೆ ತಲುಪಿದೆ. 2016ರಲ್ಲಿ ದೇವರಾಜ ಮಾರುಕಟ್ಟೆಯ ಉತ್ತರ ದ್ವಾರ ಕುಸಿದಿತ್ತು. ಬಳಿಕ ದೇವರಾಜ ಮಾರುಕಟ್ಟೆ ಬಗ್ಗೆ ಸರ್ಕಾರ ತಜ್ಞರ ಸಮಿತಿಯೊಂದನ್ನು ರಚನೆ ಮಾಡಿತ್ತು.
ಮಾರುಕಟ್ಟೆಯನ್ನು ನವೀಕರಣಗೊಳಿಸಲು ಸಾಧ್ಯವಿಲ್ಲ. ನೆಲಸಮಗೊಳಿಸಿ ಹೊಸ ಕಟ್ಟಡ ಕಟ್ಟುವುದು ಬಿಟ್ಟು ಬೇರೆ ಮಾರ್ಗವಿಲ್ಲ ಎಂದು ಸಮಿತಿಯು ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಇದೀಗ, ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ನಂತರ ವ್ಯಾಪಾರಿಗಳಲ್ಲಿ ಮತ್ತೆ ಆತಂಕ ಮನೆ ಮಾಡಿದೆ. ಮತ್ತೊಂದು ಕಡೆ, ಮಾರುಕಟ್ಟೆ ಕುಸಿಯುವ ಆತಂಕವೂ ಎದುರಾಗಿದೆ.
ಮೈಸೂರು ಜಿಲ್ಲಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ