AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಸಿಎಂ ಸಿದ್ದರಾಮಯ್ಯ ತವರಿನ ಅತಿದೊಡ್ಡ ಆಸ್ಪತ್ರೆಯಲ್ಲೇ ವ್ಹೀಲ್ ಚೇರ್ ಇಲ್ಲದೆ ಪರದಾಟ

ನೂರಾರು ಕೋಟಿ ರೂಪಾಯಿ ಅನುದಾನ ನೀಡಿದ್ದರೂ ಸಿಎಂ ಸಿದ್ದರಾಮಯ್ಯ ತವರು ಮೈಸೂರಿನ ಕೆಆರ್​​ ಆಸ್ಪತ್ರೆಯಲ್ಲಿ ಮೂಲಸೌಕರ್ಯ ಇಲ್ಲದಿರುವುದು ಬೆಳಕಿಗೆ ಬಂದಿದೆ. ಇರುವ ಒಂದು ವ್ಹೀಲ್​ ಚೇರ್​ಗೆ ಆಸ್ಪತ್ರೆ ಸಿಬ್ಬಂದಿ ಬೀಗ ಹಾಕಿಟ್ಟಿದ್ದರಿಂದ ವೃದ್ಧೆಯೊಬ್ಬರನ್ನು ಸಂಬಂಧಿಕರು ಪ್ಲಾಸ್ಟಿಕ್ ಚೇರ್​​ನಲ್ಲೇ ಕರೆದೊಯ್ದ ವಿಡಿಯೋ ಈಗ ವೈರಲ್ ಆಗುತ್ತಿದೆ.

ದಿಲೀಪ್​, ಚೌಡಹಳ್ಳಿ
| Edited By: |

Updated on:Aug 13, 2024 | 2:45 PM

Share

ಮೈಸೂರು, ಆಗಸ್ಟ್ 13: ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನ ಅತಿದೊಡ್ಡ ಆಸ್ಪತ್ರೆಯಾಗಿರುವ, ಶತಮಾನ ಪೂರೈಸಿರುವ ಪ್ರತಿಷ್ಠಿತ ಕೆಆರ್ ಸ್ಪತ್ರೆಯಲ್ಲಿ ಸಣ್ಣ ಮೂಲಸೌಕರ್ಯವೂ ಇಲ್ಲದಿರುವುದು ಬೆಳಕಿಗೆ ಬಂದಿದೆ. ಈಗಾಗಲೇ ಈ ಆಸ್ಪತ್ರೆಗೆ ನೂರು ಕೋಟಿ ರೂಪಾಯಿ ಅನುದಾನ ಕೂಡ ನೀಡಲಾಗಿದೆ. ಇಷ್ಟಾದರೂ ವ್ಹೀಲ್​ಚೇರ್ ಇಲ್ಲದೆ ಪ್ಲಾಸ್ಟಿಕ್ ಚೇರ್​​ನಲ್ಲಿ ವೃದ್ಧ ರೋಗಿಯನ್ನು ಸಂಬಂಧಿಕರು ಕರೆದೊಯ್ದಿದ್ದಾರೆ.

ಆಸ್ಪತ್ರೆಯಲ್ಲಿ ಇದ್ದೊಂದು ವ್ಹೀಲ್​ಚೇರ್​​ಗೆಗೆ ಸಿಬ್ಬಂದಿ ಬೀಗ ಹಾಕಿ ಕಟ್ಟಿಹಾಕಿರುವುದು ಕಂಡುಬಂದಿದೆ. ಸದ್ಯ ರೋಗಿಯನ್ನು ಪ್ಲಾಸ್ಟಿಕ್ ಚೇರ್​​​ನಲ್ಲಿ ಕರೆದುಕೊಂಡು ಹೋಗುತ್ತಿರುವ ವೀಡಿಯೋ ವೈರಲ್‌ ಆಗುತ್ತಿದ್ದು, ನಾಲ್ಕು ಜಿಲ್ಲೆಗಳಿಗೆ ಪ್ರತಿಷ್ಠಿತ ಆಸ್ಪತ್ರೆಯಾಗಿರುವ ಕೆಆರ್ ಆಸ್ಪತ್ರೆಗೇ ಇದೀಗ ಚಿಕಿತ್ಸೆ ಬೇಕಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಸ್ಪತ್ರೆಗೆ ಹರೀಶ್​ಗೌಡ ಭೇಟಿ

ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಶಾಸಕ ಹರೀಶ್‌ಗೌಡ ಕೆಆರ್​ ಆಸ್ಪತ್ರೆಗೆ ಭೇಟಿ ನೀಡಿದರು. ವ್ಹೀಲ್​ಚೇರ್​​ಗೆ ಬೀಗ ಹಾಕಿರುವುದನ್ನು ಕಂಡು ಕೆಂಡಾಮಂಡಲ ಆದ ಶಾಸಕರು, ‘ನಿಮಗೆ ಸರ್ಕಾರದಿಂದ ಸಂಬಳ ಬರುತ್ತಿಲ್ಲವೇ? ಹೊರ ಗುತ್ತಿಗೆಯವರಿಗೆ ಸರಿಯಾಗಿ ಸಂಬಳ ನೀಡುತ್ತಿಲ್ಲವೇ? ಸುಮ್ಮನೆ ಸರ್ಕಾರದ ಮರಿಯಾದೆ ಯಾಕೆ ಕಳೆಯುತ್ತಿದ್ದೀರಿ ಎಂದು ತರಾಟೆಗೆ ತೆಗೆದುಕೊಂಡರು. ಅಲ್ಲದೆ, ಸಮಸ್ಯೆಯನ್ನು ತಕ್ಷಣ ಬಗೆಹರಿಸಿ ಎಂದು ಮೇಲ್ವೀಚಾರಕಿ ಶೋಭಾಗೆ ತಾಕೀತು ಮಾಡಿದರು.

ಕೆಆರ್ ಆಸ್ಪತ್ರೆಯಲ್ಲಿ ಅಧ್ವಾನಗಳ ಸರಣಿ

ಶಾಸಕರ ಭೇಟಿ ವೇಳೆ ಆಸ್ಪತ್ರೆಯಲ್ಲಿ ಸ್ಟ್ರೆಚ್ಚರ್, ವ್ಹೀಲ್‌ಚೇರ್‌ ಸೇರಿ ಸಾಮಾಗ್ರಿಗಳಿದ್ದ ಕೊಠಡಿಗೆ ಬೀಗ ಹಾಕಿರುವುದು ಕಂಡುಬಂತು. ಶಾಸಕರು ಬಂದರೂ, ಡೀನ್ ಬಂದರೂ ಬೀಗ ಸಿಗಲಿಲ್ಲ. ಕೊನೆಗೆ ಶಾಸಕ ಹರೀಶ್‌ಗೌಡ ಬೀಗ ಹಾಕಿದ ಬಾಗಿಲು ತಳ್ಳಿ ತೆಗೆಯುವ ಯತ್ನ ಮಾಡಿದರು. ನಂತರ ಶಾಸಕರ ಸಮ್ಮುಖದಲ್ಲೇ ಸಿಬ್ಬಂದಿ ಕಲ್ಲಿನಿಂದ ಹೊಡೆದು ಬೀಗ ಮುರಿದರು.

ಇದೇ ವೇಳೆ, ವಸ್ತುಗಳು ಹಾಳಾಗಿರುವ ಬಗ್ಗೆ ಅಧಿಕಾರಿ ಹಾಗೂ ಸಿಬ್ಬಂದಿ ನಡುವೆ ಕೆಸರೆರಚಾಟ ನಡೆಯಿತು. ಶಾಸಕರು ತರಾಟೆಗೆ ತೆಗೆದುಕೊಳ್ಳುತ್ತಿದ್ದಂತೆಯೇ ಮೇಲ್ವಿಚಾರಕಿ ರಾಜೀನಾಮೆ ಕೊಡುವ ಬೆದರಿಕೆ ಹಾಕಿದರು. ಸ್ಥಳದಿಂದ ಕಣ್ಣೀರು ಹಾಕುತ್ತ ತೆರಳಿದರು. ಕೊನೆಗೆ ಶಾಸಕರು ಮನವೊಲಿಸಿದರು.

ಇದನ್ನೂ ಓದಿ: ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣ ಕ್ಯಾಂಟೀನ್ ಆಹಾರದಲ್ಲಿ ಹುಳ ಪತ್ತೆ!

‘ಆರ್​​ಟಿಐ ಕಾರ್ಯಕರ್ತರ ಬೆದರಿಕೆ ಇದೆ’

ನನಗೆ ಆರ್​​ಟಿಐ ಕಾರ್ಯಕರ್ತರ ಬೆದರಿಕೆ ಇದೆ. 10 ತಿಂಗಳಿಂದ ಕೆಲಸ ಮಾಡುತ್ತಿದ್ದೇನೆ. ಸೆಕ್ಯೂರಿಟಿ ಸೇರಿ ಸಿಬ್ಬಂದಿ ಸರಿಯಾಗಿ ಕೆಲಸ ಮಾಡುವುದಿಲ್ಲ. ಇದರ ಬಗ್ಗೆ ಪತ್ರ ಬರೆದರೆ 20 ಕ್ಕೂ ಹೆಚ್ಚು ಆರ್​​ಟಿಐ ಕಾರ್ಯಕರ್ತರು ಬಂದು ಪ್ರಶ್ನೆ ಮಾಡುತ್ತಾರೆ. ಇಲ್ಲಿ ವ್ಯವಸ್ಥೆ ಮೊದಲಿನಿಂದಲೂ ಹಾಳಾಗಿದೆ. ಡೀನ್ ಸೇರಿದಂತೆ ಎಲ್ಲರಿಗೂ ಮಾಹಿತಿ ಕೊಟ್ಟಿದ್ದೇನೆ. ಎಲ್ಲರಿಗೂ ಇದರ ಬಗ್ಗೆ ಮಾಹಿತಿ ಇದೆ ಎಂದು ಆಸ್ಪತ್ರೆ ಮೇಲ್ವಿಚಾರಕಿ ಶೋಭಾ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:42 pm, Tue, 13 August 24

Follow Us
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು