ಮೈಸೂರಿನಲ್ಲಿ 10 ಪ್ರಕರಣಗಳಲ್ಲಿ ಬೇಕಾಗಿದ್ದಆರೋಪಿಗಳ ತಂಡದ ಇಬ್ಬರ ಬಂಧನ
ಆರು ಜನರ ಆರೋಪಿಗಳ ತಂಡ ನಿರಂತರವಾಗಿ ಮೈಸೂರು ಗ್ರಾಮಾಂತರದಲ್ಲಿ ಕಳ್ಳತನ ಮಾಡುತ್ತಿತ್ತು. ಈ ಪೈಕಿ ಇಬ್ಬರನ್ನು ಬಂಧಿಸಲಾಗಿದೆ. ಇವರ ವಿರುದ್ಧ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 10 ಪ್ರಕರಣಗಳು ದಾಖಲಾಗಿವೆ. ಇನ್ನು ಉಳಿದ ನಾಲ್ವರ ಆರೋಪಿಗಳ ಬಂಧನಕ್ಕಾಗಿ ಮೈಸೂರು ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಮೈಸೂರು ಸೆ.09: ಮೈಸೂರು ಪೊಲೀಸರಿಗೆ (Police) ತಲೆನೋವಾಗಿದ್ದ, 10 ಪ್ರಕರಣದಲ್ಲಿ ಬೇಕಾಗಿದ್ದ ಇಬ್ಬರು ಆರೋಪಿಗಳನ್ನು ಮೈಸೂರು (Mysore) ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೆಂಪಿ ಸಿದ್ದನಹುಂಡಿ ಗ್ರಾಮದ ಉಮೇಶ್ (23) ಮಂಚಳ್ಳಿಹುಂಡಿಯ ಶಿವಾನಂದ (21) ಬಂಧಿತ ಆರೋಪಿಗಳು. ಬಂಧಿತರಿಂದ ಆಟೋ ಹಾಗೂ ಬೈಕ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರು ಜನರ ಆರೋಪಿಗಳ ತಂಡ ನಿರಂತರವಾಗಿ ಮೈಸೂರು ಗ್ರಾಮಾಂತರದಲ್ಲಿ ಕಳ್ಳತನ ಮಾಡುತ್ತಿತ್ತು. ಈ ಪೈಕಿ ಇಬ್ಬರನ್ನು ಬಂಧಿಸಲಾಗಿದೆ. ಇವರ ವಿರುದ್ಧ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 10 ಪ್ರಕರಣಗಳು ದಾಖಲಾಗಿವೆ. ಇನ್ನು ಉಳಿದ ನಾಲ್ವರ ಆರೋಪಿಗಳ ಬಂಧನಕ್ಕಾಗಿ ಕಾರ್ಯಾಚರಣೆ ಮುಂದುವರೆದಿದೆ.
ಆರೋಪಿಗಳು ಆಟೋ ಬಾಡಿಗೆ ಪಡೆದು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಚಾಲಕನಿಗೆ ಹಲ್ಲೆ ನಡೆಸಿ ಆಟೋ ಕಳ್ಳತನ ಮಾಡುತ್ತಿದ್ದರು. ಆರೋಪಿಗಳು 5 ಸುಲಿಗೆ, 2 ದೇವಸ್ಥಾನ ಕಳುವು ಹಾಗೂ ಮೂರು ಬೈಕ್‌ಗಳನ್ನು ಕಳ್ಳತನ ಮಾಡಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ.
ಇದನ್ನೂ ಓದಿ: ಬನ್ನೇರುಘಟ್ಟದಲ್ಲಿ ಶ್ರೀಗಂಧ ಮರ ಕಳ್ಳತನ: ಪರಾರಿಯಾಗಿದ್ದ ಪ್ರಮುಖ ಆರೋಪಿಯ ಬಂಧನ
ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಒಂದು, ವರುಣ ಪೊಲೀಸ್ ಠಾಣೆಯಲ್ಲಿ ಎರಡು, ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ಮೂರು, ಜಯಪುರ ಠಾಣೆಯಲ್ಲಿ ಒಂದು, ಹುಲ್ಲಹಳ್ಳಿ ಠಾಣೆಯಲ್ಲಿ ಒಂದು ಹಾಗೂ ಮೈಸೂರು ಗ್ರಾಮಾಂತರ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ. ಇದೀಗ ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:15 am, Sat, 9 September 23