ಸ್ಯಾಂಟ್ರೋ ರವಿ ಪ್ರಕರಣ ಸಿಐಡಿಗೆ ವರ್ಗಾವಣೆ, ಸರ್ಕಾರದಿಂದ ನಿರ್ದೇಶನ

ಸ್ಯಾಂಟ್ರೋ ರವಿ ಪ್ರಕರಣವನ್ನ ಸಿಐಡಿಗೆ ವರ್ಗಾಯಿಸುವಂತೆ ಸರ್ಕಾರ ಪೊಲೀಸರಿಗೆ ನಿರ್ದೇಶನ ನೀಡಿದ್ದು, ಡಿಜಿ & ಐಜಿಪಿ ಆದೇಶದಂತೆ ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ಅಷ್ಟರಲ್ಲಿ ಕೇಸ್ ಸಿಐಡಿಗೆ ಅಧಿಕೃತವಾಗಿ ವರ್ಗಾವಣೆ ಅಗಲಿದೆ.

ಸ್ಯಾಂಟ್ರೋ ರವಿ ಪ್ರಕರಣ ಸಿಐಡಿಗೆ ವರ್ಗಾವಣೆ, ಸರ್ಕಾರದಿಂದ ನಿರ್ದೇಶನ
ಸ್ಯಾಂಟ್ರೋ ರವಿ ಪ್ರಕರಣ ಸಿಐಡಿ ಗೆ ವರ್ಗಾವಣೆ
Updated By: ಕಿರಣ್ ಹನುಮಂತ್​ ಮಾದಾರ್

Updated on: Jan 16, 2023 | 12:57 PM

ಮೈಸೂರು: ಸದ್ಯ ಸ್ಯಾಂಟ್ರೋ ರವಿ ಕೇಸ್ ತನಿಖೆ ನಡೆಸುತ್ತಿರುವ ಮೈಸೂರು ನಗರ ಪೊಲೀಸರಿಂದ ಈ ಪ್ರಕರಣವನ್ನ ಸಿಐಡಿಗೆ ವರ್ಗಾವಣೆ ಮಾಡುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಸ್ಯಾಂಟ್ರೊ ರವಿ ವಿರುದ್ಧದ ದೂರುಗಳ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರದಿಂದ ಸಿಐಡಿ ಪೊಲೀಸರಿಗೆ ನಿರ್ದೇಶನ ನೀಡಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಟವಿ9 ಗೆ ಮಾಹಿತಿ ನೀಡಿದ್ದಾರೆ. ಡಿಜಿ&ಐಜಿಪಿ ಆದೇಶದಂತೆ ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ಅಷ್ಟರಲ್ಲಿ ಸಿಐಡಿಗೆ ಅಧಿಕೃತವಾಗಿ ಸ್ಯಾಂಟ್ರೊ ರವಿ ಪ್ರಕರಣ ವರ್ಗಾವಣೆ ಅಗಲಿದೆ.

ಜನವರಿ 25ರವರೆಗೆ ಸ್ಯಾಂಟ್ರೋ ರವಿಗೆ ನ್ಯಾಯಾಂಗ ಬಂಧನ

ಮೈಸೂರು: ಸ್ಯಾಂಟ್ರೋ ರವಿಯನ್ನು ಪೊಲೀಸ್ ಕಸ್ಟಡಿಗೆ ನೀಡದೆ. ಜನವರಿ 25ರವರೆಗೆ ನ್ಯಾಯಾಂಗ ಬಂಧನದಲ್ಲಿಡಬೇಕು ಎಂದು 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ನೀಡಿದೆ. ಇನ್ನು ಈ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡುವಂತೆ ಸರ್ಕಾರಿ ಪರ ವಕೀಲರು ಮನವಿ ಸಲ್ಲಿಸಿದ್ದರು. ಆದರೆ ಪ್ರಕರಣವನ್ನ ಸಿಐಡಿಗೆ ವರ್ಗಾಯಿಸುವುದು ಸರ್ಕಾರದ ಕೆಲಸ ನಾವು ಈ ವಿಚಾರದಲ್ಲಿ ಮಧ್ಯಪ್ರವೇಶಿಸಲ್ಲ ಎಂದು ಕೋರ್ಟ ಹೇಳಿತ್ತು. ಆದರೀಗ ಗೃಹ ಸಚಿವರು ಸಿಐಡಿಗೆ ಈ ಪ್ರಕರಣವನ್ನ ವಹಿಸುವುದಾಗಿ ಹೇಳಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:57 pm, Mon, 16 January 23