Santro Ravi: ಸ್ಯಾಂಟ್ರೋ ರವಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

| Updated By: Rakesh Nayak Manchi

Updated on: Jan 09, 2023 | 3:03 PM

ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಸ್ಯಾಂಟ್ರೋ ರವಿ ಬಂಧನಕ್ಕೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಈ ನಡುವೆ ನಿರೀಕ್ಷಣ ಜಾಮೀನು ಸಲ್ಲಿಸಿದ್ದ ರವಿ, ಪೊಲೀಸರ ಕಣ್ಣಿಗೆ ಬೀಳದೆ ತಲೆಮರೆಸಿಕೊಳ್ಳುತ್ತಿದ್ದಾನೆ.

Santro Ravi: ಸ್ಯಾಂಟ್ರೋ ರವಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ಸ್ಯಾಂಟ್ರೋ ರವಿ
Follow us on

ಮೈಸೂರು: ವಂಚನೆ, ಅತ್ಯಾಚಾರ, ವೇಶ್ಯವಾಟಿಕೆ ಇತ್ಯಾದಿ ಪ್ರಕರಣಗಳಲ್ಲಿ ಸಿಲುಕಿಕೊಂಡಿರುವ ಸ್ಯಾಂಟ್ರೋ ರವಿ (Santro Ravi) ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಮೈಸೂರಿನ (Mysore) 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (4th Additional District and Sessions Court)ವು ನಾಳೆಗೆ (ಜನವರಿ 10) ಮುಂದೂಡಿದೆ. ಅಲ್ಲದೆ, ಆಕ್ಷೇಪಣೆ ಸಲ್ಲಿಸಲು ಸರ್ಕಾರಿ ಅಭಿಯೋಜಕರಿಗೆ ನ್ಯಾಯಾಲಯವು ಸೂಚನೆ ನೀಡಿದೆ. ತನ್ನ ವಿರುದ್ಧ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿರುವ ಸ್ಯಾಂಟ್ರೋ ರವಿ, ಬಂಧನ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದನು. ವಕೀಲರ ಮೂಲಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದನು.

ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿರುವ ಸ್ಯಾಂಟ್ರೋ ರವಿ ಬಂಧನಕ್ಕೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಲ್ಯಾಪ್​ಟಾಪ್​ಗಾಗಿ ತನ್ನ ಪತ್ನಿ ವಿರುದ್ಧ ಷಡ್ಯಂತ ರೂಪಿಸಿ ನಕಲಿ ಪ್ರಕರಣ ದಾಖಲಿಸಿ ತನ್ನ ಪತ್ನಿ ಸೇರಿದಂತೆ ಮೂವರನ್ನು ಜೈಲು ಸೇರಿಸಿದ್ದನು. ಬಳಿಕ ಬಿಡುಗಡೆಯಾಗಿ ಹೊರಬಂದ ರವಿ ಪತ್ನಿ ಸೇರಿದಂತೆ ಮೂವರು ರವಿ ವಿರುದ್ಧವೇ ವರದಕ್ಷಿಣೆ ಕಿರುಕುಳ, ವಂಚನೆ, ಅತ್ಯಾಚಾರ ಪ್ರಕರಣಗಳನ್ನು ದಾಖಲಿಸಿದ್ದಾರೆ.

ಇದನ್ನೂ ಓದಿ: Santro Ravi: ಸ್ಯಾಂಟ್ರೋ ರವಿ ಸ್ಟೋರಿಯಲ್ಲಿ ಬಿಗ್ ಟ್ವಿಸ್ಟ್, ಬೆಂಗಳೂರು ಟು ಮೈಸೂರ್ ಕಹಾನಿ ಇಲ್ಲಿದೆ

ತನ್ನ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿರುವ ಸ್ಯಾಂಟ್ರೋ ರವಿ ಇದುವರೆಗೆ ಪೊಲೀಸರ ಕಣ್ಣಿಗೆ ಬಿದ್ದಿಲ್ಲ. ಪ್ರಕರಣ ದಾಖಲಾಗಿ ಇಂದಿಗೆ ಏಳು ದಿನಗಳ ಕಳೆದರೂ ಪೊಲೀಸರಿಗೆ ರವಿಯನ್ನು ಪತ್ತೆ ಹಚ್ಚಿ ಬಂಧಿಸಲು ಸಾಧ್ಯವಾಗಿಲ್ಲ. ಸದ್ಯ ಈತನ ಬಂಧನಕ್ಕೆ 11 ವಿಶೇಷ ಪೊಲೀಸರ ತಂಡ ರಚಿಸಲಾಗಿದೆ.

ರಾಜ್ಯದಿಂದ ಪರಾರಿಯಾಗಿರುವ ಆರೋಪಿ ಸ್ಯಾಂಟ್ರೋ ರವಿ?

ಬಂಧನದ ಭೀತಿಯಿಂದ ನಿರೀಕ್ಷಣ ಜಾಮೀನು ಸಲ್ಲಿಸಿರುವ ಸ್ಯಾಂಟ್ರೋ ರವಿ ಬಂಧನಕ್ಕೆ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಈ ನಡುವೆ ಹೊರ ರಾಜ್ಯಕ್ಕೆ ಆರೋಪಿ ಸ್ಯಾಂಟ್ರೋ ರವಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಒಟ್ಟು 11 ತಂಡಗಳನ್ನು ರಚಿಸಿಕೊಂಡು ರಾಜ್ಯದಲ್ಲಿ ಮಾತ್ರವಲ್ಲದೆ ಹೊರ ರಾಜ್ಯಗಳಲ್ಲೂ ಶೋಧ ನಡೆಸಲಾಗುತ್ತಿದೆ. ಕೇರಳ, ತಮಿಳುನಾಡು, ಆಂಧ್ರಪ್ರದೇಶ ಸೇರಿ ಹಲವು ರಾಜ್ಯಗಳಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಪ್ರಕರಣದ ಬಗ್ಗೆ ಮೇಲುಸ್ತುವಾರಿಯನ್ನು ಮೈಸೂರು ಪೊಲೀಸ್ ಆಯುಕ್ತ ರಮೇಶ್ ವಹಿಸಿದ್ದಾರೆ.​​ 11 ತಂಡಕ್ಕೂ ಇನ್ಸ್‌ಪೆಕ್ಟರ್‌ಗಳು ನೇತೃತ್ವ ವಹಿಸಿದ್ದು, ಪ್ರತಿ ತಂಡದಲ್ಲಿ 6 ರಿಂದ 10 ಮಂದಿ ಪೊಲೀಸರು ಇದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:03 pm, Mon, 9 January 23