ಮೈಸೂರು: ಪಿರಿಯಾಪಟ್ಟಣ ಬಳಿ ಹೃದಯಾಘಾತದಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಸಾವು
ಶಿಕ್ಷಕಿಗೆ ನೋಟ್ಸ್ ತೋರಿಸುವಾಗ ಕುಸಿದುಬಿದ್ದು 3ನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಇತ್ತೀಚೆಗೆ ಚಾಮರಾಜನಗರದಲ್ಲಿ ಸಂಭವಿಸಿತ್ತು. ಎಳವೆಯಲ್ಲೇ ಹೃದಯಾಘಾತ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿವೆ. ಇದೀಗ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ಬಳಿ ಕೆಲ್ಲೂರು ಎಂಬಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಮೈಸೂರು, ಜನವರಿ 27: ಹೃದಯಾಘಾತದಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ಸೋಮವಾರ ಸಂಭವಿಸಿದೆ. ನಾಗರಾಜ್, ವಸಂತ ದಂಪತಿ ಪುತ್ರಿ ದೀಪಿಕಾ (15) ಮೃತಪಟ್ಟ ವಿದ್ಯಾರ್ಥಿನಿ. ರಾವಂದೂರು ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ದೀಪಿಕಾ ಇದ್ದಕ್ಕಿದ್ದಂತೆ ಅಸ್ವಸ್ಥಳಾಗಿದ್ದಾಳೆ. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಸಾವು ಸಂಭವಿಸಿದೆ.
(ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ)
ಇದನ್ನೂ ಓದಿ: ಅಯ್ಯೋ ವಿಧಿಯೇ! ಶಿಕ್ಷಕಿಗೆ ನೋಟ್ಸ್ ತೋರಿಸುವಾಗ ಕುಸಿದುಬಿದ್ದು 3ನೇ ಕ್ಲಾಸ್ ವಿದ್ಯಾರ್ಥಿನಿ ಸಾವು
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ