ಮೈಸೂರು: ನುಗು ಡ್ಯಾಂನ ನಾಲೆಗೆ ಬಿದ್ದು ಒಂದೇ ಕುಟುಂಬದ ಮೂವರು ಸಾವು

ನುಗು ಡ್ಯಾಂನ ಬಲದಂಡೆ ನಾಲೆಗೆ ಬಿದ್ದು ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ‌.ಕೋಟೆ ತಾಲೂಕಿನ ಚಂಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೈಸೂರು: ನುಗು ಡ್ಯಾಂನ ನಾಲೆಗೆ ಬಿದ್ದು ಒಂದೇ ಕುಟುಂಬದ ಮೂವರು ಸಾವು
ಶೋಧಕಾರ್ಯದಲ್ಲಿ ತೊಡಗಿರುವ ಅಗ್ನಿಶಾಮಕ ಸಿಬ್ಬಂದಿ
Follow us
ದಿಲೀಪ್​, ಚೌಡಹಳ್ಳಿ
| Updated By: ವಿವೇಕ ಬಿರಾದಾರ

Updated on:Oct 01, 2023 | 9:19 AM

ಮೈಸೂರು ಅ.01: ನುಗು ಡ್ಯಾಂನ ಬಲದಂಡೆ ನಾಲೆಗೆ (Canal) ಬಿದ್ದು ಒಂದೇ ಕುಟುಂಬದ (Family) ಮೂವರು ಮೃತಪಟ್ಟಿರುವ ಘಟನೆ ಹೆಚ್.ಡಿ‌.ಕೋಟೆ (HD Kote) ತಾಲೂಕಿನ ಚಂಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಪ್ಪ ಮಹಮ್ಮದ್ ಕಪೀಲ್ (42), ಅಮ್ಮ ಶಾವರ ಭಾನು (35), ಶಾಹೀರಾ ಭಾನು (20) ಮೃತ ದುರ್ದೈವಿಗಳು. ಅಜ್ಜಿಯ ತಿಥಿ ಕಾರ್ಯ ಮುಗಿಸಿ ಪುತ್ರಿ ಶಾಹೀರಾ ಭಾನು ನುಗು ಜಲಾಶಯದ ಬಲದಂಡೆ ನಾಲೆಯಲ್ಲಿ ಕೈ ಕಾಲು ತೊಳೆಯಲು ಹೋಗಿದ್ದರು. ಈ ವೇಳೆ ಕಾಲು ಜಾರಿ ನಾಲೆಯಲ್ಲಿ ಬಿದ್ದಿದ್ದಾರೆ.

ಇದನ್ನು ಕಂಡ ರಕ್ಷಣೆಗೆ ಹೋದ ಅಪ್ಪ, ಅಮ್ಮ ಕೂಡ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಭೇಟಿ ನೀಡಿ ಮೂವರ ಮೃತ ದೇಹಗಳನ್ನು ಹೊರತೆಗೆದಿದ್ದಾರೆ. ಸರಗೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದಿದೆ. ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೈಕ್​, ಆಟೋ ಮತ್ತು ಲಾರಿ ಮಧ್ಯೆ ಅಪಘಾತ; ಕಾಲು ಕಳೆದುಕೊಂಡ ಯುವತಿ

ಮೈಮೇಲೆ ಕಂಬ ಬಿದ್ದು ರೈತ ಸಾವು

ಕಂಬ ಬಿದ್ದ ಪರಿಣಾಮ ರೈತ ಮೃತಪಟ್ಟಿರುವ ಘಟನೆ  ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕು ಬಾಡಗ ಗ್ರಾಮದಲ್ಲಿ ನಡೆದಿದೆ. ಬಾಡಗ ಗ್ರಾಮದ ಸಿದ್ದಪ್ಪ (46) ಮೃತ ರೈತ. ಬಾಡಗ ಗ್ರಾಮದ ಶಿಕ್ಷಕಿ ಶಾರದ ಎಂಬುವರ ಕಾರು ಕಂಬಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಕಂಬ ಮುರಿದು ರಸ್ತೆಯಲ್ಲಿ ಹೋಗುತ್ತಿದ್ದ ಸಿದ್ದಪ್ಪ ಅವರ ಮೇಲೆ ಬಿದ್ದಿದೆ.

ಇದರಿಂದ ಗಾಯಗೊಂಡ ಸಿದ್ದಪ್ಪ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಿದ್ದಪ್ಪ ಮೃತಪಟ್ಟಿದ್ದಾನೆ. ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:40 am, Sun, 1 October 23

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್