ಮೈಸೂರಿನ ಸಾರ್ವಜನಿಕರು ಹುಲಿ ಕಾಣಿಸಿದರೆ ಏನು ಮಾಡಬೇಕು? ಅರಣ್ಯ ಇಲಾಖೆ ಸಲಹೆ ಇಲ್ಲಿದೆ

ಕಳೆದ ಹಲವು ದಿನಗಳಿಂದ ಮೈಸೂರು ಜಿಲ್ಲೆಯಲ್ಲಿ ಮಾನವ ಮತ್ತು ಪ್ರಾಣಿ ನಡುವೆ ಸಂಘರ್ಷ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಚಿರತೆ ಕಾರ್ಯಪಡೆ ಹಾಗೂ ಅರಣ್ಯ ಸಿಬ್ಬಂದಿಗಳು ಹುಲಿ ಸೆರೆಗೆ ಕಾರ್ಯಾಚರಣೆ ನಡೆಸಿದ್ದಾರೆ. ದಡದಹಳ್ಳಿಯ ತೋಟಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೈಸೂರಿನ ಸಾರ್ವಜನಿಕರು ಹುಲಿ ಕಾಣಿಸಿದರೆ ಏನು ಮಾಡಬೇಕು? ಅರಣ್ಯ ಇಲಾಖೆ ಸಲಹೆ ಇಲ್ಲಿದೆ
ಅರಣ್ಯ ಇಲಾಖೆ ಪ್ರಕಟಣೆ, ಹುಲಿ (ಸಾಂದರ್ಭಿಕ ಚಿತ್ರ)
Follow us
ರಾಮ್​, ಮೈಸೂರು
| Updated By: ವಿವೇಕ ಬಿರಾದಾರ

Updated on:Dec 15, 2023 | 7:44 AM

ಮೈಸೂರು, ಡಿಸೆಂಬರ್​​ 15: ಕಳೆದ ಹಲವು ದಿನಗಳಿಂದ ಮೈಸೂರು (Mysore) ಜಿಲ್ಲೆಯಲ್ಲಿ ಮಾನವ ಮತ್ತು ಪ್ರಾಣಿ ನಡುವೆ ಸಂಘರ್ಷ ನಡೆಯುತ್ತಿದೆ. ಇತ್ತೀಚಿಗೆ ನಂಜನಗೂಡು (Najangudu) ತಾಲೂಕಿನ ಗ್ರಾಮವೊಂದರಲ್ಲಿ ಹುಲಿ (Tiger) ದಾಳಿ ನಡೆಸಿತ್ತು. ಹುಲಿ ದಾಳಿಗೆ ಓರ್ವ ಮಹಿಳೆ ಮೃತಪಟ್ಟಿದ್ದರು. ಇದಾದ ಬೆನ್ನಲ್ಲೇ ಮೈಸೂರು ತಾಲೂಕಿನ ದಡದಹಳ್ಳಿ ಗ್ರಾಮದ ತೋಟವೊಂದರಲ್ಲಿ ಹುಲಿ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಚಿರತೆ ಕಾರ್ಯಪಡೆ ಹಾಗೂ ಅರಣ್ಯ ಸಿಬ್ಬಂದಿಗಳು ಹುಲಿ ಸೆರೆಗೆ ಕಾರ್ಯಾಚರಣೆ ನಡೆಸಿದ್ದಾರೆ. ದಡದಹಳ್ಳಿಯ ತೋಟಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅರಣ್ಯ ಇಲಾಖೆ ಸಿಬ್ಬಂದಿ ಹುಲಿ ಚಲನವಲನ ಪತ್ತೆಗೆ ಟ್ರ್ಯಾಪ್ ಕ್ಯಾಮರಾ, ನೆಟ್​ವರ್ಕ್ ಕ್ಯಾಮರಾ, ಐಆರ್ ಕ್ಯಾಮರಾ ಅಳವಡಿಸಲಾಗಿದೆ. ಹಾಗೂ ಹುಲಿ ಸೆರೆಗೆ ಬೋನ್​​ ಇಡಲಾಗಿದೆ. ಅಲ್ಲದೆ ಹುಲಿ ಕಾಣಿಸಿಕೊಂಡರೆ ಸಹಾಯವಾಣಿ ಸಂಖ್ಯೆ 1926ಗೆ ಕರೆ ಮಾಡಿ ಎಂದು ಅಧಿಕಾರಿಗಳು ಸಾರ್ವಜನಿಕರಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ಅರಣ್ಯ ಇಲಾಖೆ ಸಿಬ್ಬಂದಿ ಹರಸಾಸಹ, 15 ದಿನವಾದರೂ ಸೆರೆ ಸಿಕ್ಕದ ಹುಲಿ

ಹುಲಿ ಕಾಣಿಸಿಕೊಂಡ ಬಗ್ಗೆ ಯಾರೂ ಸುಳ್ಳು ಸುದ್ದಿ ಹಬ್ಬಿಸಬಾರದು. ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆಗೆ ಸಹಕಾರ ನೀಡಬೇಕು ಎಂದು ಮೈಸೂರು ಅರಣ್ಯ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಹುಲಿ ದಾಳಿಗೆ ಓರ್ವ ಮಹಿಳೆ ಸಾವು

ನ.24ರಂದು ಹೆಡಿಯಾಲ ವಲಯ ಅರಣ್ಯ ವ್ಯಾಪ್ತಿಯಲ್ಲಿ ಬಳ್ಳೂರು ಹುಂಡಿ ಬಳಿ ದನ ಮೇಯಿಸಲು ಹೋಗಿದ್ದ ರತ್ನಮ್ಮ (55) ಎಂಬ ಮಹಿಳೆಯ ಮೇಲೆ ಹುಲಿ ದಾಳಿ ನಡೆಸಿ ಆಕೆಯನ್ನು ಕೊಂದು ಹಾಕಿತ್ತು. ಅಲ್ಲದೇ ದೇಹದ ಭಾಗವನ್ನೂ ತಿಂದು ಹಾಕಿತ್ತು. ಮರು ದಿನ ಅದೇ ಗ್ರಾಮದ ಹಸುವೊಂದರ ಮೇಲೆ ದಾಳಿ ಮಾಡಿ ಕೊಂದು ಹಾಕಿತ್ತು. ನಂತರ ಜನರಲ್ಲಿ ಆತಂಕ ಹೆಚ್ಚಾಗಿ ಅರಣ್ಯ ಸಿಬ್ಬಂದಿ ವಿರುದ್ಧ ಆಕ್ರೋಶ ಹೊರ ಹಾಕಿದ್ದರು.

ಪಿರಿಯಾಪಟ್ಟಣದಲ್ಲಿ ರೈತನ ಮೇಲೆ ಚಿರತೆ ದಾಳಿ

ಡಿಸೆಂಬರ್​ 11 ರಂದು ಪರಿಯಾಪಟ್ಟಣ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ರೈತ ರಾಜೇಶ್ ಎಂಬುವರ ಮೇಲೆ ಚಿರತೆ ದಾಳಿ ಮಾಡಿತ್ತು. ರಾಜೇಶ್​ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಚಿರತೆ ದಾಳಿ ನಡೆಸಿತ್ತು. ದಾಳಿಯಲ್ಲಿ ರಾಜೇಶ್​ ಅವರ ಕಿವಿ ಹಾಗೂ ತಲೆ ಭಾಗಕ್ಕೆ ಗಾಯಗಳಾಗಿತ್ತು. ಇವರನ್ನು ಪಿರಿಯಾಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಚಿರತೆ ದಾಳಿಯಿಂದ ಆಕ್ರೋಶಗೊಂಡಿರುವ ಜನರು, ಕೂಡಲೇ ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:44 am, Fri, 15 December 23

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್