AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಂಜಾನ್: ಪರೀಕ್ಷೆ ಮುಂದೂಡಿದ ಮೈಸೂರು ವಿವಿ, ರಜೆ ರದ್ದುಪಡಿಸಿದ ಮೃಗಾಲಯ

ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ಹಿನ್ನೆಲೆಯಲ್ಲಿ ಮೈಸೂರು ವಿಶ್ವವಿದ್ಯಾಲಯವು ಪರೀಕ್ಷೆಗಳನ್ನು ಮುಂದೂಡಿದೆ.

ರಂಜಾನ್: ಪರೀಕ್ಷೆ ಮುಂದೂಡಿದ ಮೈಸೂರು ವಿವಿ, ರಜೆ ರದ್ದುಪಡಿಸಿದ ಮೃಗಾಲಯ
ಮೈಸೂರು ಮೃಗಾಲಯ
TV9 Web
| Edited By: |

Updated on: May 01, 2022 | 11:26 AM

Share

ಮೈಸೂರು: ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ಹಿನ್ನೆಲೆಯಲ್ಲಿ ಮೈಸೂರು ವಿಶ್ವವಿದ್ಯಾಲಯವು ಪರೀಕ್ಷೆಗಳನ್ನು ಮುಂದೂಡಿದೆ. ಮೇ 2ಕ್ಕೆ ನಿಗದಿಯಾಗಿದ್ದ ಪರೀಕ್ಷೆಗಳು ಮೇ 7ರಂದು ನಡೆಯಲಿವೆ ಎಂದು ಮೈಸೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವರ ಕಚೇರಿಯ ಪ್ರಕಟಣೆಯು ತಿಳಿಸಿದೆ. ಕಾನೂನು ಪದವಿ ಸೇರಿದಂತೆ ಹಲವು ಪರೀಕ್ಷೆಗಳು ಮೇ 2ಕ್ಕೆ ನಿಗದಿಯಾಗಿದ್ದವು. ಸತತ ರಜೆಯ ಹಿನ್ನೆಲೆಯಲ್ಲಿ ಪ್ರವಾಸಿಗರು ಬರಬಹುದು ಎನ್ನುವ ನಿರೀಕ್ಷೆಯಿಂದ ಮೈಸೂರು ಮೃಗಾಲಯವು ವಾಡಿಕೆಯ ಮಂಗಳವಾರದ ರಜೆ ರದ್ದುಪಡಿಸಿದೆ. ರಂಜಾನ್ ಹಬ್ಬ ಮತ್ತು ಬಸವ ಜಯಂತಿಯ ಹಿನ್ನೆಲೆಯಲ್ಲಿ ಈ ಬಾರಿ ಮೃಗಾಲಯವು ಎಂದಿನಂತೆ ಕಾರ್ಯನಿರ್ವಹಿಸಲಿದೆ ಎಂದು ಪ್ರಕಟಣೆ ತಿಳಿಸಿದೆ. ಪ್ರವಾಸಿಗರ ಅನುಕೂಲಕ್ಕಾಗಿ ಮೃಗಾಲಯ ಮತ್ತು ಕಾರಂಜಿ ಕೆರೆ ತೆರೆದಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಇನ್ನಷ್ಟು ರಂಜಾನ್ ಬಗೆಗಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೋಮವಾರವೇ ರಂಜಾನ್ ಹಬ್ಬ ಆಚರಣೆಗೆ ನಿರ್ಧಾರ

ಬೆಂಗಳೂರು: ರಂಜಾನ್ ಹಬ್ಬ ಆಚರಣೆಗೆ ಮೂನ್ ಕಮಿಟಿ ತೀರ್ಮಾನಿಸಿದ್ದು, ಸೋಮವಾರವೇ ರಂಜಾನ್ ಹಬ್ಬ ಆಚರಣೆಗೆ ನಿರ್ಧಾರ ಕೈಗೊಳ್ಳಲಾಗಿದೆ. ಮಂಗಳವಾರ ಬದಲು ಸೋಮವಾರವೇ ರಂಜಾನ್ ಹಬ್ಬವಿದ್ದು, ಸೋಮವಾರವೇ ರಂಜಾನ್ ಹಬ್ಬದ ಪ್ರಯುಕ್ತ ರಾಜ್ಯ ಸರ್ಕಾರ ಸಾರ್ವತ್ರಿಕ ರಜೆ ಘೋಷಿಸಿ ಆದೇಶ ಹೊರಡಿಸಿದೆ.

ಕೊರೊನಾ (Coronavirus) ಕಾರಣದಿಂದ ಸರ್ಕಾರ (Government) ಎರಡು ವರ್ಷ ರಂಜಾನ್ ಹಬ್ಬಕ್ಕೆ ಕಠಿಣ ನಿಯಮಗಳನ್ನ ಜಾರಿಗೊಳಿಸಿತ್ತು. ಮಸೀದಿಯಲ್ಲಿ ನಮಾಜ್ ಮಾಡುವುದನ್ನು ನಿಷೇಧಿಸಿ ಟಫ್ ರೂಲ್ಸ್ ಜಾರಿಗೊಳಿಸಿತ್ತು. ಈ ಬಾರಿಯಾದರೂ ಯಾವುದೇ ಅಡಚಣೆಯಿಲ್ಲದೆ ಹಬ್ಬವನ್ನು ಆಚರಿಸಬಹುದು ಅಂತ ಯೋಚಿಸುತ್ತಿರುವಾಗ ಮತ್ತೆ ಕೊರೊನಾ ನಾಲ್ಕನೇ ಅಲೆ ಆತಂಕ ಶುರುವಾಗಿದೆ. ರಾಜ್ಯದಲ್ಲಿ ನಿಯಂತ್ರಣಲ್ಲಿದ್ದ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಈ ವರ್ಷವೂ ರಂಜಾನ್ ಹಬ್ಬಕ್ಕೆ ಟಫ್ ರೂಲ್ಸ್ ಜಾರಿಯಾಗುವ ಸಾಧ್ಯತೆಯಿದೆ.

ರಂಜಾನ್ ವೇಳೆ ಮಸೀದಿಯಲ್ಲಿ ಗುಂಪು ಗುಂಪಾಗಿ ಸಾಕಷ್ಟು ಜನ ಸೇರುವ ಹಿನ್ನೆಲೆ ಕೊರೊನಾ ಸೋಂಕು ಹರಡುವಿಕೆ ಬಗ್ಗೆ ಸರ್ಕಾರಕ್ಕೆ ಆತಂಕ ಮೂಡಿದೆ. ಧಾರ್ಮಿಕ ಕೇಂದ್ರಗಳಿಗೆ ಅನ್ವಯ ಆಗುವಂತೆ ಸರ್ಕಾರ ರೂಲ್ಸ್ ಜಾರಿಗೊಳಿಸಿದರೆ ಮುಸ್ಲಿಂ ಬಾಂಧವರಿಗೆ ಭಾರೀ ನಿರಾಸೆ ಆಗುತ್ತದೆ. ಮೇ 3ರಂದು ನಡೆಯುವ ರಂಜಾನ್ ಹಬ್ಬ ಆಚರಣೆಗೆ ಸಿದ್ಧತೆ ನಡೆಯುತ್ತಿದೆ. ಸೋಂಕು ಉಲ್ಬಣಗೊಂಡರೆ ಸರಳವಾಗಿ ಹಬ್ಬ ಆಚರಿಸಲು ಸರ್ಕಾರ ಸೂಚನೆ ನೀಡುವ ಸಾಧ್ಯತೆಯಿದೆ.

ಇದನ್ನೂ ಓದಿ: Eid Ul Fitr 2022 Special: ರಂಜಾನ್ ಹಬ್ಬಕ್ಕೆ ಇಲ್ಲಿದೆ ಬೆಸ್ಟ್ ಮೆನು

ಇದನ್ನೂ ಓದಿ: Ramadan Eid 2022 Decoration Ideas: ರಂಜಾನ್ ಹಬ್ಬಕ್ಕೆ ನಿಮ್ಮ ಮನೆಯನ್ನು ಮತ್ತಷ್ಟು ಸುಂದರ ಹಾಗೂ ಹಬ್ಬದ ಕಳೆ ತರಿಸಲು ಇಲ್ಲಿದೆ ಐಡಿಯಾ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್