ಮುಡಾ ಹಗರಣ: ಇಡಿ ವಿಚಾರಣೆಗೆ ಹಾಜರಾಗಿದ್ದ ಮೈಸೂರು ಪಾಲಿಕೆ ನೌಕರ ವಜಾ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದ ತನಿಖೆ ನಡೆಸುತ್ತಿರುವ ಇಡಿ ವಿಚಾರಣೆಗೆ ಹಾಜರಾಗಿದ್ದ ಪಾಲಿಕೆ ನೌಕರ ಬಿ.ಕೆ.ಕುಮಾರ್ ಅವರನ್ನು ವಜಾ ಮಾಡಲಾಗಿದೆ. ಕುಮಾರ್ ಮುಡಾ ಹಾಗೂ ಪಾಲಿಕೆಯಲ್ಲಿ ಏಕಕಾಲದಲ್ಲಿ ಕೆಲಸ ಮಾಡುತ್ತಿದ್ದರು.

ಮುಡಾ ಹಗರಣ: ಇಡಿ ವಿಚಾರಣೆಗೆ ಹಾಜರಾಗಿದ್ದ ಮೈಸೂರು ಪಾಲಿಕೆ ನೌಕರ ವಜಾ
ಪಾಲಿಕೆ ನೌಕರ ಕುಮಾರ್​
Follow us
ದಿಲೀಪ್​, ಚೌಡಹಳ್ಳಿ
| Updated By: ವಿವೇಕ ಬಿರಾದಾರ

Updated on: Nov 15, 2024 | 9:46 AM

ಮೈಸೂರು, ನವೆಂಬರ್​ 15: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED)ದ ವಿಚಾರಣೆಗೆ ಹಾಜರಾದ ಬೆನ್ನಲ್ಲೇ ಮೈಸೂರು ಪಾಲಿಕೆ ಗುತ್ತಿಗೆ ನೌಕರ ಬಿ.ಕೆ.ಕುಮಾರ್​ನನ್ನು ಕೆಲಸದಿಂದ ವಜಾ ಮಾಡಲಾಗಿದೆ. ಬಿ.ಕೆ.ಕುಮಾರ್​ನನ್ನು ವಜಾ ಮಾಡಿ ಮೈಸೂರು ಪಾಲಿಕೆ ಆಯುಕ್ತ ಅಸಾದ್ ಉರ್ ರೆಹಮಾನ್ ಶರೀಫ್ ಆದೇಶ ಹೊರಡಸಿದ್ದಾರೆ.

ಬಿ.ಕೆ.ಕುಮಾರ್ ಹೆಚ್ಚುವರಿ ಕೆಲಸಕ್ಕಾಗಿ ಮುಡಾಗೆ ನೇಮಕವಾಗಿ ಬಂದಿದ್ದನು. ಮುಡಾದಲ್ಲಿ ಕೆಲಸ ಮಾಡುತ್ತಾ ಪಾಲಿಕೆಯಿಂದಲೂ ಸಂಬಳ ಪಡೆಯುತ್ತಿದ್ದನು. ಕುಮಾರ್ ಏಕಕಾಲದಲ್ಲಿ ಎರಡು ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುತ್ತಿದ್ದನು. ನಿಯಮ ಉಲ್ಲಂಘಿಸಿ ಎರಡು ಕಡೆ ವೇತನ ಪಡೆಯುತ್ತಿದ್ದ ಹಿನ್ನೆಲೆಯಲ್ಲಿ ಕುಮಾರ್​ನನ್ನು ವಜಾ ಮಾಡಲಾಗಿದೆ.

ಮುಡಾ ಹರಗಣದಲ್ಲಿ ಕುಮಾರ್ ಪಾತ್ರ

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಬೇವಿನಕುಪ್ಪೆ ಗ್ರಾಮದ ಕುಮಾರ್ ಮುಡಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಅಕ್ರಮಗಳಲ್ಲಿ ಭಾಗಿಯಾಗಿದ್ದ ಎಂಬ ಆರೋಪ ಕೇಳಿಬಂದಿದೆ. ಹಿಂದಿನ ಆಯುಕ್ತರಿಗೆ ಖಾಲಿ ನಿವೇಶನಗಳ ಬಗ್ಗೆ ಮಾಹಿತಿ ಹಾಗೂ ಮಂಜೂರಾತಿ ಮಾಡಲು ಅಗತ್ಯವಿದ್ದ ದಾಖಲೆ ತಂದು ಕೊಡುತ್ತಿದ್ದನು ಎಂಬ ಆರೋಪ ಕುಮಾರ್ ಮೇಲಿದೆ.

ಇದನ್ನೂ ಓದಿ: ಸಿಎಂ ಪತ್ನಿ ಹೆಸರಿಗೆ ನಿವೇಶನ ಹಂಚಿಕೆ ಮಾಡಲಾಗಿದೆ ಎನ್ನಲಾದ ಲಿಸ್ಟ್​ ವೈರಲ್

ಕುಮಾರ್ ಮುಡಾ ಕಚೇರಿಯ ಎಲ್ಲ ವಿಭಾಗದಲ್ಲೂ ಪಾರುಪತ್ಯ ನಡೆಸುತ್ತಿದ್ದನು. ಬೇಕಾದ ದಾಖಲೆಗಳನ್ನು ಕ್ಷಣಮಾತ್ರದಲ್ಲಿ ಆಯುಕ್ತರ ಮುಂದೆ ತರುತ್ತಿದ್ದನು. ಹಿಂದಿನ ಆಯುಕ್ತರಾದ ನಟೇಶ್, ದಿನೇಶ್‌ಗೆ ಅಕ್ರಮದಲ್ಲಿ ಸಹಾಯ ಮಾಡಿದ್ದಾನೆ ಎಂಬ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಬಿ.ಕೆ.ಕುಮಾರ್​ನನ್ನು ಇಡಿ ವಿಚಾರಣೆ ಮಾಡಿದೆ.

ಸಿದ್ದರಾಮಯ್ಯ, ಪತ್ನಿ ಪಾರ್ವತಿ ವಿರುದ್ಧ ಕೇಳಿ ಬಂದ ಆರೋಪ

ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಹೆಸರಿನಲ್ಲಿದ್ದ ಕೆಸರೆ ಗ್ರಾಮದ ಸರ್ವೆ ನಂಬರ್ 464ರಲ್ಲಿ 3.16 ಎಕರೆ ಜಮೀನನ್ನು ದೇವನೂರು ಬಡಾವಣೆ ನಿರ್ಮಾಣಕ್ಕೆ ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ಈ ಜಾಗವನ್ನು ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ದಾನ ಪತ್ರದ ಮೂಲಕ ಅವರ ಸಹೋದರ ಕೊಟ್ಟಿದ್ದರು. ಇದು ಒಟ್ಟು 1,48,104 ಚದರ ಅಡಿ ಜಾಗ ಇತ್ತು.

ಅದರ ಬದಲಿಗೆ ಮುಡಾ 2021ರಲ್ಲಿ ಪಾರ್ವತಿ ಅವರಿಗೆ ಮೈಸೂರಿನ ವಿಜಯನಗರ ಬಡಾವಣೆಯಲ್ಲಿ 38,284 ಚದರ ಅಡಿ ಜಾಗ ಅಂದರೆ 14 ನಿವೇಶನ ಕೊಟ್ಟಿದ್ದಾರೆ ಇದು ಈಗ ಚರ್ಚೆಗೆ ಕಾರಣವಾಗಿದೆ. ವಿಜಯನಗರ ಬಡಾವಣೆಯಲ್ಲಿ 14 ನಿವೇಶನ ಪತ್ನಿ ಪಾರ್ವತಿ ಅವರಿಗೆ ಮಂಜೂರು ಆಗಲು, ಸಿದ್ದರಾಮಯ್ಯ ಅವರು ಪ್ರಭಾವ ಬೀರಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇಡಿ ತನಿಖೆ ಮಾಡುತ್ತಿರುವುದು ಸುಳ್ಳು ಕೇಸ್ ಎಂದ ಸಿಎಂ

ಇಡಿ ವಿಚಾರಣೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಜಾರಿ ನಿರ್ದೇಶನಾಲಯದವರು ಕಾನೂನು ಪ್ರಕಾರ ಏನು ಮಾಡಬೇಕೋ ಮಾಡಲಿ, ಬಿಡಲಿ, ನಾವು ಅಡ್ಡಿಯಾಗಲ್ಲ. ಆದರೆ, ತನಿಖೆ ಮಾಡುತ್ತಿರುವುದು ಸುಳ್ಳು ಕೇಸ್ ಎಂದು ಹೇಳಿದ್ದರು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ನಟ ವಿನೋದ್ ರಾಜ್ ಅವರು ತಾಯಿ ನೆನಪಲ್ಲಿ ಸ್ಮಾರಕ ನಿರ್ಮಾಣ ಮಾಡಿದ್ದಾರೆ. ಇದರ
ನಟ ವಿನೋದ್ ರಾಜ್ ಅವರು ತಾಯಿ ನೆನಪಲ್ಲಿ ಸ್ಮಾರಕ ನಿರ್ಮಾಣ ಮಾಡಿದ್ದಾರೆ. ಇದರ
ಗೌತಮಿ ಜೊತೆ ಆಡಲ್ಲ ಎಂದು ದೊಡ್ಡ ದಂಡ ತೆತ್ತಿದ ಮೋಕ್ಷಿತಾ
ಗೌತಮಿ ಜೊತೆ ಆಡಲ್ಲ ಎಂದು ದೊಡ್ಡ ದಂಡ ತೆತ್ತಿದ ಮೋಕ್ಷಿತಾ
ಮನೆಯಲ್ಲಿ ಬ್ರಹ್ಮ ಕಮಲ ಗಿಡ ಇದ್ದರೆ ಇದೆ ಅನೇಕ ಪ್ರಯೋಜನ!
ಮನೆಯಲ್ಲಿ ಬ್ರಹ್ಮ ಕಮಲ ಗಿಡ ಇದ್ದರೆ ಇದೆ ಅನೇಕ ಪ್ರಯೋಜನ!
Daily Horoscope: ಈ ರಾಶಿಯವರಿಗಿಂದು 5 ರಾಶಿಗಳ ಶುಭ ಫಲ
Daily Horoscope: ಈ ರಾಶಿಯವರಿಗಿಂದು 5 ರಾಶಿಗಳ ಶುಭ ಫಲ
ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ
ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ
ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?
ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ: ನಡ್ಡಾ ಭೇಟಿ ಬಳಿಕ ಅಶೋಕ್ ಸಂತಸದ ಮಾತು
ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ: ನಡ್ಡಾ ಭೇಟಿ ಬಳಿಕ ಅಶೋಕ್ ಸಂತಸದ ಮಾತು
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ