ನೀತಿ ಸಂಹಿತೆ ಜಾರಿ ಹಿನ್ನೆಲೆ ಶಸ್ತ್ರಾಸ್ತ್ರ ಬಳಕೆ ನಿಷೇಧ: ವಿನಾಯಿತಿ ನೀಡುವಂತೆ ಮೈಸೂರು ಪೊಲೀಸ್ ಕಮಿಷನರ್​ಗೆ ಪರವಾನಿಗೆದಾರರ ಮನವಿ

ಕರ್ನಾಟಕ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣೆ ಪ್ರಕ್ರಿಯೆ ಸಂಪೂರ್ಣವಾಗಿ ಮುಕ್ತಾಯಗೊಳ್ಳುವವರೆಗೆ ಶಸ್ತ್ರಾಸ್ತ್ರ, ಆಯುಧ ಮತ್ತು ಮದ್ದುಗುಂಡುಗಳೊಂದಿಗೆ ಸಂಚಾರ ಹಾಗೂ ಅವುಗಳನ್ನು ಬಳಕೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ. ಆದರೂ ಶಸ್ತ್ರಾಸ್ತ್ರ ಬಳಸಲು ವಿನಾಯತಿ ನೀಡುವಂತೆ ಮೈಸೂರಿನ ಪರವಾನಿಗೆದಾರರು ಮೈಸೂರು ಪೊಲೀಸ್ ಕಮಿಷನರ್​ ಅವರಿಗೆ ಮನವಿ ಮಾಡಿದ್ದಾರೆ.

ನೀತಿ ಸಂಹಿತೆ ಜಾರಿ ಹಿನ್ನೆಲೆ ಶಸ್ತ್ರಾಸ್ತ್ರ ಬಳಕೆ ನಿಷೇಧ: ವಿನಾಯಿತಿ ನೀಡುವಂತೆ ಮೈಸೂರು ಪೊಲೀಸ್ ಕಮಿಷನರ್​ಗೆ ಪರವಾನಿಗೆದಾರರ ಮನವಿ
ಮೈಸೂರು ಪೊಲೀಸ್ ಕಮಿಷನರ್​ ರಮೇಶ್ ಬಾನೋತ್
Follow us
ವಿವೇಕ ಬಿರಾದಾರ
|

Updated on:Apr 04, 2023 | 9:31 AM

ಮೈಸೂರು: ಕರ್ನಾಟಕ ಸಾರ್ವತ್ರಿಕ ಚುನಾವಣೆ (Karnataka Assembly Election) ಹಿನ್ನೆಲೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣೆ ಪ್ರಕ್ರಿಯೆ ಸಂಪೂರ್ಣವಾಗಿ ಮುಕ್ತಾಯಗೊಳ್ಳುವವರೆಗೆ ಶಸ್ತ್ರಾಸ್ತ್ರ, ಆಯುಧ ಮತ್ತು ಮದ್ದುಗುಂಡುಗಳೊಂದಿಗೆ ಸಂಚಾರ ಹಾಗೂ ಅವುಗಳನ್ನು ಬಳಕೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ. ಈ ಹಿನ್ನೆಲೆ ಮೈಸೂರಿನಲ್ಲಿ (Mysore) 42 ಜನ ಪರವಾನಿಗೆದಾರರು ಪಿಸ್ತೂಲ್​, ರಿವಾಲ್ವರ್​​​, ಬಂದೂಕನ್ನು ಇಟ್ಟುಕೊಳ್ಳಲು ವಿನಾಯಿತಿ ನೀಡಿ ಎಂದು ಮೈಸೂರು ಪೊಲೀಸ್ ಕಮಿಷನರ್​ (Police Commissioner) ರಮೇಶ್ ಬಾನೋತ್​ ಅವರಿಗೆ ಅರ್ಜಿ ಸಲ್ಲಿಸಿದ್ದಾರೆ.

ರಾಜಕಾರಣಿಗಳು, ಬ್ಯಾಂಕ್ ಮ್ಯಾನೇಜರ್​​, ಉದ್ಯಮಿಗಳು ಆತ್ಮರಕ್ಷಣೆ, ವ್ಯಾಪಾರ ವಹಿವಾಟು ದೃಷ್ಟಿಯಿಂದ ವಿನಾಯಿತಿ ನೀಡಿ ಎಂದು ಮನವಿ ಸಲ್ಲಿಸಿದ್ದಾರೆ. ಮೈಸೂರಿನ ದೇವರಾಜ ವಿಭಾಗದಿಂದ 13, ಕೃಷ್ಣರಾಜ ವಿಭಾಗದಿಂದ 8, ನರಸಿಂಹರಾಜ ವಿಭಾಗದಿಂದ 13, ವಿಜಯನಗರ ವಿಭಾಗದಿಂದ 8 ಜನರು ಸೇರಿ ಒಟ್ಟು 42 ಜನರು ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ಮತದಾರರಿಗೆ ಹಂಚಲು ತಂದಿದ್ದ 1.47 ಕೋಟಿ ರೂ. ಮೌಲ್ಯದ ಚಿನ್ನದ ಲೇಪನದ ಆಭರಣಗಳು ಜಪ್ತಿ

ಪರವಾನಗಿ ಪಡೆದ ಬಂದೂಕುಗಳನ್ನು ಜಮಾ ಮಾಡುವಂತೆ ಡಿಸಿ ಯಶವಂತ ಗುರುಕರ್​​​​ ಆದೇಶ

ಕಲಬುರಗಿ: ಪರವಾನಗಿ ಪಡೆದ ಶಸ್ತ್ರಾಸ್ತ್ರ, ಆಯುಧ, ಮದ್ದುಗುಂಡು ಮತ್ತು ಬಂದೂಕುಗಳನ್ನು ಸಂಬಂಧಪಟ್ಟ ಠಾಣೆಗಳಿಗೆ ಒಪ್ಪಿಸುವಂತೆ ಜಿಲ್ಲಾಧಿಕಾರಿ ಯಶವಂತ ಗುರುಕರ್​​​​ ಆದೇಶ ಹೊರಡಿಸಿದ್ದರು. ಅನುಮೋದಿತ ಶೆಡ್ಯೂಲ್ ಬ್ಯಾಂಕ್ ಭದ್ರತಾ ಸಿಬ್ಬಂದಿ ಹೊರತುಪಡಿಸಿ, ಉಳಿದವರು ತಮ್ಮ ಬಂದೂಕುಗಳನ್ನು ಠಾಣೆಗೆ ನೀಡಬೇಕು. ಚುನಾವಣೆ ಮುಗಿದ ನಂತರ ಠಾಣೆಯಲ್ಲಿನ ಶಸ್ತ್ರಾಸ್ತ್ರಗಳನ್ನು ಮರಳಿ ಪಡೆಯಬಹುದು ಎಂದು ಸೂಚನೆ ಹೊರಡಿಸಿದ್ದರು.

ಪರವಾನಿಗೆ ಶಸ್ತ್ರಾಸ್ತ್ರಗಳನ್ನು ಪೊಲೀಸ್​ ಠಾಣೆಗೆ ಒಪ್ಪಿಸುವಂತೆ ಉಡುಪಿ ಡಿಸಿ ಆದೇಶ

ಉಡುಪಿ: ಆತ್ಮ ರಕ್ಷಣೆ ಮತ್ತು ಬೆಳೆ ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಿಗೆ ಹೊಂದಿರುವ ಎಲ್ಲಾ ಅಧಿಕೃತ ಪರವಾನಿಗೆದಾರರು ತಮ್ಮ ಪರವಾನಿಗೆಯಲ್ಲಿ ಹೊಂದಿರುವ ಎಲ್ಲಾ ವಿಧದ ಶಸ್ತ್ರಾಸ್ತ್ರಗಳನ್ನು ತಮ್ಮ ವಿಳಾಸ ವ್ಯಾಪ್ತಿಯ ಪೊಲೀಸ್ ಠಾಣೆಗೆ ಒಪ್ಪಿಸಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದರು.

ಆತ್ಮ ರಕ್ಷಣೆ ಮತ್ತು ಬೆಳೆ ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಿಗೆ ಹೊಂದಿರುವ ಎಲ್ಲಾ ಅಧಿಕೃತ ಪರವಾನಿಗೆದಾರರು ತಮ್ಮ ಪರವಾನಿಗೆಯಲ್ಲಿ ಹೊಂದಿರುವ ಎಲ್ಲಾ ವಿಧದ ಶಸ್ತ್ರಾಸ್ತ್ರಗಳನ್ನು ತಮ್ಮ ವಿಳಾಸ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ಅಥವಾ ಅಧಿಕೃತವಾಗಿ ಪರವಾನಿಗೆ ಹೊಂದಿರುವ ಡೀಲರ್ ಶಾಪ್‌ಗಳಲ್ಲಿ ಕಡ್ಡಾಯವಾಗಿ ವಿಳಂಬ ಮಾಡದೇ ಠೇವಣಿ ಮಾಡಿ, ರಶೀದಿ ಪಡೆಯಬೇಕು ಎಂದು ಸೂಚಿಸಿದ್ದರು.

ಚುನಾವಣಾ ಫಲಿತಾಂಶ ಘೋಷಣೆಯಾದ ದಿನಾಂಕದಿಂದ ಒಂದು ವಾರದ ನಂತರ ಶಸ್ತ್ರಾಸ್ತ್ರ ಠೇವಣಿ ಪಡೆದ ಠಾಣಾಧಿಕಾರಿಗಳಿಂದ ಅಥವಾ ಡೀಲರ್‌ಗಳಿಂದ ಶಸ್ತ್ರಾಸ್ತ್ರಗಳನ್ನು ಮರು ಪಡೆದುಕೊಳ್ಳಬಹುದು ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:31 am, Tue, 4 April 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್