ಈ ಬಾರಿ ದಸರಾ ಸಮಯದಲ್ಲಿ ಝಗಮಗಿಸಲಿದೆ ಮೈಸೂರು, 135 ಕಿ.ಮೀ ರಸ್ತೆಯ 119 ವೃತ್ತಗಳಲ್ಲಿ ದೀಪಾಲಂಕಾರಕ್ಕೆ ಸಿದ್ಧತೆ

ಮೈಸೂರಿನ 119 ವೃತ್ತಗಳಲ್ಲಿ ಅಂದ್ರೆ ಬರೋಬ್ಬರಿ 135 ಕಿ.ಮೀ ರಸ್ತೆಗೆ ವಿದ್ಯುತ್ ದೀಪಾಲಂಕಾರ ಮಾಡಲು ಚಿಂತನೆ ನಡೆದಿದೆ. ಕೆ.ಆರ್.ವೃತ್ತ, ಚಾಮರಾಜ ವೃತ್ತ, ರಾಮಸ್ವಾಮಿ ವೃತ್ತ, ಗನ್​ಹೌಸ್ ವೃತ್ತ, ಎಲ್​ಐಸಿ ವೃತ್ತ ಸೇರಿ ನಗರದ ಹಲವು ಕಡೆ ದೀಪಾಲಂಕಾರ ಮಾಡಲಾಗುತ್ತೆ. ಮೈಸೂರಿನ ಸರ್ಕಾರಿ ಕಟ್ಟಡಗಳಿಗೂ ವಿಶೇಷ ದೀಪಾಲಂಕಾರ ಮಾಡಲಾಗುತ್ತೆ.

ಈ ಬಾರಿ ದಸರಾ ಸಮಯದಲ್ಲಿ ಝಗಮಗಿಸಲಿದೆ ಮೈಸೂರು, 135 ಕಿ.ಮೀ ರಸ್ತೆಯ 119 ವೃತ್ತಗಳಲ್ಲಿ ದೀಪಾಲಂಕಾರಕ್ಕೆ ಸಿದ್ಧತೆ
ಮೈಸೂರು ದಸರಾ
Follow us
| Updated By: ಆಯೇಷಾ ಬಾನು

Updated on: Aug 22, 2023 | 10:21 AM

ಮೈಸೂರು, ಆ.22: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2023ಕ್ಕೆ(Mysore Dasara 2023) ಅರಮನೆ ನಗರಿಯಲ್ಲಿ ಭರ್ಜರಿ ಸಿದ್ಧತೆಗಳು ಶುರುವಾಗಿವೆ. ಮೈಸೂರು ದಸರಾ ಮಹೋತ್ಸವವನ್ನು ಅರ್ಥಪೂರ್ಣ, ಅದ್ದೂರಿಯಾಗಿ ಆಚರಿಸಬೇಕು ಮತ್ತು ದಸರಾ ಜನರ ಉತ್ಸವವಾಗಬೇಕು ಎಂದು ಈ ಹಿಂದೆ ಸಿಎಂ ಸಿದ್ದರಾಮಯ್ಯ(Siddaramaiah) ಹೇಳಿದ್ದರು. ಅದರಂತೆಯೇ ಈ ಬಾರಿಯೂ ವಿದ್ಯುತ್ ದೀಪಾಲಂಕಾರಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಮೈಸೂರಿನ 119 ವೃತ್ತಗಳಲ್ಲಿ ಝಗಮಗಿಸುವ ವಿದ್ಯುತ್ ದೀಪಾಲಂಕಾರಕ್ಕೆ ತಯಾರಿ ನಡೆದಿದೆ.

ಮೈಸೂರಿನ 119 ವೃತ್ತಗಳಲ್ಲಿ ಅಂದ್ರೆ ಬರೋಬ್ಬರಿ 135 ಕಿ.ಮೀ ರಸ್ತೆಗೆ ವಿದ್ಯುತ್ ದೀಪಾಲಂಕಾರ ಮಾಡಲು ಚಿಂತನೆ ನಡೆದಿದೆ. ಕೆ.ಆರ್.ವೃತ್ತ, ಚಾಮರಾಜ ವೃತ್ತ, ರಾಮಸ್ವಾಮಿ ವೃತ್ತ, ಗನ್​ಹೌಸ್ ವೃತ್ತ, ಎಲ್​ಐಸಿ ವೃತ್ತ ಸೇರಿ ನಗರದ ಹಲವು ಕಡೆ ದೀಪಾಲಂಕಾರ ಮಾಡಲಾಗುತ್ತೆ. ಮೈಸೂರಿನ ಸರ್ಕಾರಿ ಕಟ್ಟಡಗಳಿಗೂ ವಿಶೇಷ ದೀಪಾಲಂಕಾರ ಮಾಡಲಾಗುತ್ತೆ. 6.03 ಕೋಟಿ ರೂ. ಅಲ್ಪಾವಧಿ ಟೆಂಡರ್ ಮೂಲಕ ಚೆಸ್ಕಾಂನಿಂದ ಆಕರ್ಷಕ ವಿದ್ಯುತ್ ದೀಪಾಲಂಕಾರಕ್ಕೆ ಸಿದ್ದತೆ ನಡೆಯುತ್ತಿದೆ.

ಇದನ್ನೂ ಓದಿ:Mysore Dasara 2023: ದಸರಾ ಗಜಪಡೆ ಸ್ವಾಗತಕ್ಕೆ ಸಜ್ಜಾಗುತ್ತಿದೆ ಅರಮನೆ ನಗರಿ, ಜಂಬೂಸವಾರಿಗೆ ಮಿಸ್ ಆಗಲಿವೆ ಚೈತ್ರಾ-ವಿಕ್ರಮ ಆನೆ 

ಅಕ್ಟೋಬರ್​ 15ರ ಬೆಳಿಗ್ಗೆ 10.15 ರಿಂದ 10.30 ಕ್ಕೆ ಸಲ್ಲುವ ಮಹೂರ್ತದಲ್ಲಿ ಮೈಸೂರು ದಸರಾ ಉದ್ಘಾಟನೆ ನೆರವೇರಲಿದ್ದು, ಪಂಜಿನ ಕವಾಯತು ವಿಜಯದಶಮಿ ದಿನದಂದು ನಡೆಯಲಿದೆ. ಈ ಬಾರಿ ದೀಪಾಲಂಕಾರ ದಸರಾ ಉದ್ಘಾಟನೆಯಾದ ದಿನದಿಂದ ದಸರಾ ಮುಗಿಯುವವರೆಗೂ ಹಾಗೂ ನಂತರ ಒಂದು ವಾರದವವರೆಗೆ ದೀಪಾಲಂಕಾರ ಇರಬೇಕು ಎಂದು ಸಿಎಂ ಸೂಚಿಸಿದ್ದಾರೆ.

ಏರ್ ಶೋ ಆಯೋಜನಗೆ ಚಿಂತನೆ

ಪ್ರಸಕ್ತ ವರ್ಷ ದಸರಾ ಅಂಗವಾಗಿ ಏರ್ ಶೋ ಆಯೋಜಿಸಲು ಚಿಂತನೆ ನಡೆಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು. ಈ ವಿಚಾರವಾಗಿ ರಕ್ಷಣಾ ಸಚಿವರ ಜೊತೆ ಚರ್ಚೆ ಮಾಡುತ್ತೇವೆ. ಹಿಂದೆ ನಾನು ಮುಖ್ಯಮಂತ್ರಿ ಆಗಿದ್ದಾಗ ದಸರಾ ವೇಳೆ ಏರ್ ಶೋ ಆಯೋಜಿಸಿದ್ದೆವು ಎಂದು ಅವರು ಹೇಳಿದರು. ಮೈಸೂರು ದಸರಾ ಮಹೋತ್ಸವದಲ್ಲಿ ಅನಗತ್ಯ ಖರ್ಚು ಇರಬಾರದು. ಶಕ್ತಿ ಯೋಜನೆ ಜಾರಿಯಾಗಿರುವ ಕಾರಣ ಮಹಿಳೆಯರು ಹೆಚ್ಚು ಬರುವ ಸಾಧ್ಯತೆ ಇದೆ ಎಂದು ಅವರು ಅಭಿಪ್ರಾಯಪಟ್ಟರು.

ಮೈಸೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ತಾಜಾ ಸುದ್ದಿ
ದರ್ಶನ್​ಗೆ ಲಕ್ಷ ಲಕ್ಷ ಹಣ ಕೊಟ್ಟಿದ್ದಕ್ಕೆ ಕಾರಣ ನೀಡಿದ ಮಾಜಿ ಮೇಯರ್
ದರ್ಶನ್​ಗೆ ಲಕ್ಷ ಲಕ್ಷ ಹಣ ಕೊಟ್ಟಿದ್ದಕ್ಕೆ ಕಾರಣ ನೀಡಿದ ಮಾಜಿ ಮೇಯರ್
ಕ್ಲಿಕ್ ಮಾಡುತ್ತಿದ್ದಂತೆ ಇನ್​ಸ್ಟಂಟ್ ಫೋಟೊ ಪ್ರಿಂಟ್
ಕ್ಲಿಕ್ ಮಾಡುತ್ತಿದ್ದಂತೆ ಇನ್​ಸ್ಟಂಟ್ ಫೋಟೊ ಪ್ರಿಂಟ್
Nithya Bhavishya: ಈ ರಾಶಿಯವರು ಹಣ ಕಳೆದುಕೊಂಡು ಚಿಂತಿತರಾಗುವ ಸಾಧ್ಯತೆ
Nithya Bhavishya: ಈ ರಾಶಿಯವರು ಹಣ ಕಳೆದುಕೊಂಡು ಚಿಂತಿತರಾಗುವ ಸಾಧ್ಯತೆ
Daily Devotional: ಸಾವಿನ ಮನೆಯಲ್ಲಿ ಈ ಕೆಲಸ ಯಾವತ್ತೂ ಮಾಡಬೇಡಿ
Daily Devotional: ಸಾವಿನ ಮನೆಯಲ್ಲಿ ಈ ಕೆಲಸ ಯಾವತ್ತೂ ಮಾಡಬೇಡಿ
ತುಮಕೂರಿನಲ್ಲಿ ವಿದ್ಯುತ್​ ಟ್ರಾನ್ಸ್​ಫಾರ್ಮರ್ ಏರಿ ​​ವ್ಯಕ್ತಿಯ ಹುಚ್ಚಾಟ
ತುಮಕೂರಿನಲ್ಲಿ ವಿದ್ಯುತ್​ ಟ್ರಾನ್ಸ್​ಫಾರ್ಮರ್ ಏರಿ ​​ವ್ಯಕ್ತಿಯ ಹುಚ್ಚಾಟ
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ