ಮೈಸೂರಿನಲ್ಲಿ ಸೆರೆ ಸಿಕ್ಕಿದ್ದ 4 ಹುಲಿ ಮರಿಗಳ ನಿಗೂಢ ಸಾವು

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಗೌಡನಕಟ್ಟೆಯಲ್ಲಿ ತಾಯಿಯೊಂದಿಗೆ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ತಾಯಿ ಹುಲಿಯನ್ನು ಸೆರೆ ಹಿಡಿದ ಬಳಿಕ ಮರಿಗಳು ಆಹಾರವಿಲ್ಲದೆ, ಆಘಾತದಿಂದ ಅಸ್ವಸ್ಥಗೊಂಡಿದ್ದವು. ಚಿಕಿತ್ಸೆ ನೀಡುತ್ತಿದ್ದರೂ, ಒಂದೊಂದಾಗಿ ಪ್ರಾಣ ಕಳೆದುಕೊಂಡಿವೆ. ಮರಿಗಳ ಸಾವಿಗೆ ನಿಖರ ಕಾರಣ ತಿಳಿಯಲು ಪಶುವೈದ್ಯರು ಮರಣೋತ್ತರ ಪರೀಕ್ಷೆ ನಡೆಸುತ್ತಿದ್ದಾರೆ.

ಮೈಸೂರಿನಲ್ಲಿ ಸೆರೆ ಸಿಕ್ಕಿದ್ದ 4 ಹುಲಿ ಮರಿಗಳ ನಿಗೂಢ ಸಾವು
ಮೈಸೂರಿನಲ್ಲಿ ಸೆರೆ ಸಿಕ್ಕಿದ್ದ 4 ಹುಲಿ ಮರಿಗಳು ಸಾವು
Edited By:

Updated on: Dec 10, 2025 | 8:44 AM

ಮೈಸೂರು, ಡಿಸೆಂಬರ್ 10: ಮೈಸೂರು (Mysore) ಜಿಲ್ಲೆಯ ಹುಣಸೂರು ತಾಲೂಕಿನ ಗೌಡನಕಟ್ಟೆ ಗ್ರಾಮದಲ್ಲಿ ನ.29 ರಂದು ತಾಯಿಯೊಂದಿಗೆ 4 ಹುಲಿ ಮರಿಗಳು ಸೆರೆ ಸಿಕ್ಕಿದ್ದವು. ಆಹಾರ ಸೇವಿಸದೆ ಅಸ್ವಸ್ಥಗೊಂಡಿದ್ದ ಹುಲಿಮರಿಗಳೀಗ ಮೃತಪಟ್ಟಿವೆಯೆಂದು ತಿಳಿದುಬಂದಿದೆ. ಮರಿಗಳ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಪಶುವೈದ್ಯರು ಮೃತ ಹುಲಿ ಮರಿಗಳ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.

ತಾಯಿಯೊಂದಿಗೆ ಸೆರೆಸಿಕ್ಕಿದ್ದ ಮರಿಗಳು

ನವೆಂಬರ್ 28ರಂದು ಈ ನಾಲ್ಕು ಮರಿಗಳ ಜೊತೆಗೆ ತಾಯಿ ಹುಲಿಯೂ ಕಾಣಿಸಿಕೊಂಡಿದ್ದು, ನವೆಂಬರ್ 29 ಮತ್ತು 30ರಂದು ಗೌಡನಕಟ್ಟೆಯ ಪ್ರಕಾಶ್‌ ಅವರ ಜೋಳದ ಹೊಲದ ಬಳಿ ಕಾಣಿಸಿಕೊಂಡಿದ್ದ ಹುಲಿ ಮರಿಗಳನ್ನು ಸ್ಥಳೀಯರು ಮತ್ತು ಅರಣ್ಯ ಸಿಬ್ಬಂದಿ ಪತ್ತೆ ಮಾಡಿದ್ದರು.  ಮಧ್ಯರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ತಾಯಿ ಹುಲಿಯನ್ನು ಸೆರೆ ಹಿಡಿದು ಪುನರ್ವಸತಿ ಕೇಂದ್ರಕ್ಕೆ ರವಾನಿಸಲಾಗಿತ್ತು.

ಪಶುವೈದ್ಯರಿಂದ ನಾಲ್ಕೂ ಹುಲಿ ಮರಿಗಳ ಮರಣೋತ್ತರ ಪರೀಕ್ಷೆ

ತಾಯಿ ಹುಲಿ ಸೆರೆ ಸಿಕ್ಕಿದ ಬಳಿಕ ಎರಡು ದಿನಗಳ ತಾಯಿಯಿಂದ ದೂರವಿದ್ದ ಹುಲಿಮರಿಗಳು, ಆಹಾರವಿಲ್ಲದೆ, ಜನರ ಕಿರುಚಾಟ ಮತ್ತು ಓಡಾಟದಿಂದ ಗಾಬರಿಯಿಂದ ನಿತ್ರಾಣಗೊಂಡಿದ್ದವು. ನಂತರ ಅವುಗಳನ್ನು ಕೂಡ ಕೂರ್ಗಳ್ಳಿ ಪುನರ್ವಸತಿ ಕೇಂದ್ರಕ್ಕೆ ಕಳುಹಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಗಾಬರಿಯಿಂದ ಮತ್ತು ಆಹಾರ ಸೇವಿಸದೆ ಅಸ್ವಸ್ಥಗೊಂಡ ಕಾರಣ ಕಳೆದ ನಾಲ್ಕು ದಿನಗಳ ಒಳಗೆ ಒಂದಾದ ಮೇಲೆ ಒಂದು ಮರಿಗಳು ಪ್ರಾಣ ಕಳೆದುಕೊಂಡಿವೆ ಎಂದು ಹೇಳಲಾಗುತ್ತಿದೆ. ಪಶುವೈದ್ಯರು ನಾಲ್ಕೂ ಹುಲಿ ಮರಿಗಳ ಮರಣೋತ್ತರ ಪರೀಕ್ಷೆ ನಡೆಸುತ್ತಿದ್ದು, ಮರಿಗಳ ಸಾವಿಗೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ತಾಯಿ ಹುಲಿ ಮಾತ್ರ ಸಧ್ಯಕ್ಕೆ ಆರೋಗ್ಯವಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
Follow Us