ಪಿರಿಯಾಪಟ್ಟಣ: ಖಾಸಗಿ ಬಸ್–ಲಾರಿ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೀರನಹಳ್ಳಿ ಗೇಟ್ ಬಳಿ ಖಾಸಗಿ ಸ್ಲೀಪರ್ ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಮೃತಪಟ್ಟಿದ್ದಾರೆ. 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಪಿರಿಯಾಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಮುಂಜಾನೆ 3.30ರ ಸುಮಾರಿಗೆ ಅಪಘಾತ ಸಂಭವಿಸಿದೆ.

ಪಿರಿಯಾಪಟ್ಟಣ: ಖಾಸಗಿ ಬಸ್–ಲಾರಿ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ
ಅಪಘಾತದ ತೀವ್ರತೆಗೆ ಬಸ್​​ ಹಾಗೂ ಲಾರಿ ಮುಂಭಾಗ ನುಜ್ಜುಗುಜ್ಜಾಗಿರುವುದು
Image Credit source: tv9
Edited By:

Updated on: Oct 16, 2026 | 9:12 AM

ಮೈಸೂರು, ಅಕ್ಟೋಬರ್ 16: ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೀರನಹಳ್ಳಿ ಗೇಟ್ ಬಳಿ ಖಾಸಗಿ ಸ್ಲೀಪರ್ ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ಶುಕ್ರವಾರ ಮುಂಜಾನೆ ನಾಲ್ವರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಮುಂಜಾನೆ ಸುಮಾರು 3.30ರ ವೇಳೆಗೆ ಈ ದುರ್ಘಟನೆ ನಡೆದಿದೆ. ಮೈಸೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ಗೆ, ಮಡಿಕೇರಿ ಕಡೆಯಿಂದ ಮೈಸೂರು ಕಡೆಗೆ ಬರುತ್ತಿದ್ದ ಲಾರಿ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಗಾಯಾಳುಗಳನ್ನು ಪಿರಿಯಾಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

(ಮಾಹಿತಿ ಅಪ್​​ಡೇಟ್ ಆಗಲಿದೆ)

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:12 am, Fri, 16 October 26

ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
Loading...
Unable to load recommendations.
Follow Us