AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ಇರಿಸಲು ನಿರ್ಧಾರ: ರಾಜರ್ಶಿಯ ಬಗ್ಗೆ ನೀವು ತಿಳಿಯಬೇಕಾದ 5 ಅಂಶಗಳಿವು

ಮೈಸೂರು ಸಂಸ್ಥಾನದಲ್ಲಿ ಹಲವು ಕ್ರಾಂತಿಕಾರಕ ಸುಧಾರಣೆಗಳನ್ನು ತಂದಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಬಗ್ಗೆ ಕರ್ನಾಟಕದಲ್ಲಿ ಇಂದಿಗೂ ಕೃತಜ್ಞತೆ ಇದೆ. ಸರ್ಕಾರದ ಈ ನಿರ್ಧಾರವನ್ನು ಜನರು ಖುಷಿಯಿಂದ ಸ್ವಾಗತಿಸಿದ್ದಾರೆ.

ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ಇರಿಸಲು ನಿರ್ಧಾರ: ರಾಜರ್ಶಿಯ ಬಗ್ಗೆ ನೀವು ತಿಳಿಯಬೇಕಾದ 5 ಅಂಶಗಳಿವು
ಮೈಸೂರು ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್
TV9 Web
| Edited By: |

Updated on: Jul 24, 2022 | 8:25 AM

Share

ಬೆಂಗಳೂರು: ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ (Maharaja Nalwadi Krishna Raja Wadiyar) ಅವರ ಹೆಸರು ನಾಮಕರಣ ಮಾಡಲು ಕರ್ನಾಟಕ ಸಚಿವ ಸಂಪುಟ ತೀರ್ಮಾನ ತೆಗೆದುಕೊಂಡಿದೆ. ಈ ವಿಷಯವನ್ನು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು. ಮೈಸೂರು ಸಂಸ್ಥಾನದಲ್ಲಿ ಹಲವು ಕ್ರಾಂತಿಕಾರಕ ಸುಧಾರಣೆಗಳನ್ನು ತಂದಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಬಗ್ಗೆ ಕರ್ನಾಟಕದಲ್ಲಿ ಇಂದಿಗೂ ಕೃತಜ್ಞತೆ ಇದೆ. ಇದೇ ಕಾರಣಕ್ಕೆ ಸರ್ಕಾರದ ಈ ನಿರ್ಧಾರವನ್ನು ಜನರು ಖುಷಿಯಿಂದ ಸ್ವಾಗತಿಸಿದ್ದಾರೆ.

ರಾಜ್ಯ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ, ‘ಸಚಿವ ಸಂಪುಟ ನಿರ್ಧಾರವನ್ನು ನಾನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದೂರದೃಷ್ಟಿ, ದಕ್ಷ ಆಡಳಿತ ಮತ್ತು ಸಾಮಾಜಿಕ ಕಳಕಳಿ ನಮಗೆ ಪ್ರೇರಣೆ’ ಎಂದು ಹೇಳಿದ್ದಾರೆ.

ನಾಲ್ವಡಿ ಕೃಷ್ಣರಾಜ ಒಡೆಯರ್ ಬಗ್ಗೆ ನೀವು ತಿಳಿಯಬೇಕಾದ ಐದು ಮುಖ್ಯ ಅಂಶಗಳಿವು…

  1. ಮೈಸೂರು ಸಂಸ್ಥಾನದ 24ನೇ ಮಹಾರಾಜರಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಆಳ್ವಿಕೆ ನಡೆಸಿದರು.
  2. 1894ರಿಂದ 1940ರವರೆಗೆ ಅವರು ಮೈಸೂರು ಸಂಸ್ಥಾನವನ್ನು ಆಳಿದರು.
  3. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಡಳಿತ ವೈಖರಿ ಮತ್ತು ಜನಪ್ರೀತಿ ಕಂಡ ಮಹಾತ್ಮ ಗಾಂಧಿ ಅವರು ‘ರಾಜರ್ಶಿ’ ಎಂದು ಗೌರವಿಸಿದ್ದರು. ಋಷಿ ಸದೃಶ ಜೀವನ ನಡೆಸುತ್ತಿರುವ ರಾಜ ಎಂದು ಇದರ ಅರ್ಥ.
  4. ಮೃತಪಟ್ಟಾಗ ನಾಲ್ವಡಿ ಅವರ ಬಳಿ 4 ಕೋಟಿ ಡಾಲರ್​ ಮೊತ್ತದಷ್ಟು ಸಂಪತ್ತು ಇತ್ತು. ಅದನ್ನು ಇಂದಿನ ರೂಪಾಯಿ-ಡಾಲರ್​ ವಿನಿಮಯ ಮೊತ್ತಕ್ಕೆ ಲೆಕ್ಕ ಹಾಕಿದರೆ 7 ಶತಕೋಟಿ ಡಾಲರ್ ಮೊತ್ತವಾಗುತ್ತದೆ.
  5. ನಾಲ್ವಡಿ ಎಂದರೆ ನಾಲ್ಕನೆಯವರು ಎಂದು ಅರ್ಥ. ಇವರಿಗೆ ಮೊದಲು ಕೃಷ್ಣರಾಜ ಹೆಸರಿನ ಮೂವರು ಮೈಸೂರಿನ ರಾಜರಾಗಿದ್ದರು.
  6. ಮೈಸೂರು ಮತ್ತು ಮಂಡ್ಯ ಜಿಲ್ಲೆಯ ಸಾವಿರಾರು ಎಕರೆ ಪ್ರದೇಶಕ್ಕೆ ನೀರುಣಿಸುವ ಕೃಷ್ಣರಾಜ ಸಾಗರ ಜಲಾಶಯ (Krishnaraja Sagara Dam – KRS) ನಾಲ್ವಡಿ ಅವರ ದೂರದೃಷ್ಟಿಯ ಫಲ. ಜಲಾಶಯ ನಿರ್ಮಾಣಕ್ಕೆ ಹಣದ ಕೊರತೆ ಎದುರಾದಾಗ ಮಹಾರಾಜರು ತಮ್ಮ ಖಾಸಗಿ ಚಿನ್ನವನ್ನು ಮಾರಿ ಹಣ ಹೊಂದಿಸಿದ್ದರು.
  7. ಸಮಾನತೆಯ ಆಶಯಗಳನ್ನು ಆಡಳಿತದಲ್ಲಿ ತರಲು ಇಚ್ಛಿಸಿದ್ದ ಮಹಾರಾಜರು ದಲಿತರಿಗೆ ಮೀಸಲಾತಿ ನೀಡುವ ಪ್ರಯತ್ನಕ್ಕೆ ಮುನ್ನುಡಿ ಬರೆದರು.
  8. ಕನ್ನಡ ಸಾಹಿತ್ಯ ಪರಿಷತ್ತು, ಮೈಸೂರು ಬ್ಯಾಂಕ್ ಸೇರಿದಂತೆ ಹಲವು ಪ್ರಮುಖ ಸಾಂಸ್ಕೃತಿಕ ಮತ್ತು ಆರ್ಥಿಕ ಸಂಸ್ಥೆಗಳ ಬೆಳವಣಿಗೆಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?