ಮೈಸೂರಿನಲ್ಲಿ ಇನ್ನೋರ್ವ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ; ಪ್ರಕರಣ ದಾಖಲು, ಆರೋಪಿ ಬಂಧನ

ವಿದ್ಯಾರ್ಥಿನಿ ಒಬ್ಬಳೇ ಇದ್ದಾಗ ಹಲ್ಲೆ ನಡೆಸಿ ಅತ್ಯಾಚಾರಕ್ಕೆ ಯತ್ನಿಸಿಲಾಗಿತ್ತು ಎಂಬ ಆರೋಪದಡಿ ಪ್ರಕರಣ ದಾಖಲಾಗಿದೆ.

ಮೈಸೂರಿನಲ್ಲಿ ಇನ್ನೋರ್ವ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ; ಪ್ರಕರಣ ದಾಖಲು, ಆರೋಪಿ ಬಂಧನ
ಪ್ರಾತಿನಿಧಿಕ ಚಿತ್ರ
Follow us
| Updated By: guruganesh bhat

Updated on:Sep 03, 2021 | 10:21 PM

ಮೈಸೂರು: ಸಾಮೂಹಿಕ ಅತ್ಯಾಚಾರ ಪ್ರಕರಣದ ಆಘಾತದಿಂದ ರಾಜ್ಯದ ಜನರು ಇನ್ನೂ ಹೊರಬರದ ಹೊತ್ತಲ್ಲೇ ಮೈಸೂರಿನಲ್ಲಿ ಇನ್ನೋರ್ವ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆಗಿರುವ ಆರೋಪ ಕೇಳಿಬಂದಿದೆ. ಮೈಸೂರಿನ ಆರ್.ಎಸ್.ನಾಯ್ಡು ನಗರದ ಹೋಲಿ ಕ್ರಾಸ್ ಸ್ಡಡಿ ಹೌಸ್​​ನಲ್ಲಿ ಕಾಲೇಜು ವಿದ್ಯಾರ್ಥಿನಿಯೋರ್ವಳ ಮೇಲೆ ಹಲ್ಲೆ ಮತ್ತು ಅತ್ಯಾಚಾರ ಯತ್ನ ನಡೆದಿದೆ ಎಂಬ ಮಾಹಿತಿ ವರದಿಯಾಗಿದ್ದು, ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.  ಮೈಸೂರಿನಲ್ಲಿ ವಿದ್ಯಾರ್ಥಿನಿ‌ ಮೇಲೆ ನಡೆದ ರೇಪ್ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಈಕುರಿತು ಮೈಸೂರು ಪೊಲೀಸ್ ಆಯುಕ್ತ ಚಂದ್ರಗುಪ್ತ ಅಧಿಕೃತ ಮಾಹಿತಿ ನೀಡಿದ್ದಾರೆ. 

ಘಟನೆ ನಡೆದ ಎರಡು ಗಂಟೆಯೊಳಗೆ ಆರೋಪಿಯನ್ನು ಪೊಲೀಸರು  ಬಂಧಿಸಿದ್ದಾರೆ. ವಿದ್ಯಾರ್ಥಿನಿ ಒಬ್ಬಳೇ ಇದ್ದಾಗ ಹಲ್ಲೆ ನಡೆಸಿ ಅತ್ಯಾಚಾರಕ್ಕೆ ಯತ್ನಿಸಿಲಾಗಿತ್ತು ಎಂಬ ಆರೋಪದಡಿ ಪ್ರಕರಣ ದಾಖಲಾಗಿದೆ. ಸ್ಟಡಿಹೌಸ್​ನಲ್ಲಿ ಆಂಧ್ರ ಮೂಲದ 7 ವಿದ್ಯಾರ್ಥಿನಿಯರಿದ್ದರು. ಘಟನೆ ವೇಳೆ ಉಳಿದ ವಿದ್ಯಾರ್ಥಿನಿಯರು ತರಗತಿಗೆ ತೆರಳಿದ್ದರು. ಇದನ್ನು ಗಮನಿಸಿಯೇ ಸ್ಟಡಿಹೌಸ್ ಒಳಗೆ ನುಗ್ಗಿದ್ದ ಆರೋಪಿ, ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಹಲ್ಲೆಗೈದು ಪರಾರಿಯಾಗಿದ್ದಾನೆ ಎಂದು ಪ್ರಕರಣ ದಾಖಲಾಗಿದೆ. ಗಾಯಾಳು ವಿದ್ಯಾರ್ಥಿನಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮೈಸೂರಿನಲ್ಲಿ ಯುವತಿ ಮೇಲೆ ಹಲ್ಲೆ ಅತ್ಯಾಚಾರ ಯತ್ನ ಆರೋಪ ಪ್ರಕರಣದಲ್ಲಿ ಯುವತಿ ಮೇಲೆಯೂ ಕೆಲವು ಅನುಮಾನಗಳು ಸಾರ್ವಜನಿಕ ವಲಯದಲ್ಲಿ ಮೂಡಿದೆ. ಅಪರಿಚಿತನಿಂದ ಕೃತ್ಯ ನಡೆದಿದೆ ಎಂದು ಯುವತಿ ಮೊದಲು ಯುವತಿ ಹೇಳಿಕೆ ನೀಡಿದ್ದಳು. ಆದರೆ ಆರೋಪಿ ಯುವಕನನ್ನು ಬಂಧಿಸಿದ ನಂತರ ಆತನ ಪರಿಚಯ ಇದೆ ಎಂದ ಯುವತಿಯೇ ಒಪ್ಪಿಕೊಂಡಿದ್ದಾಳೆ. ಘಟನೆ ನಡೆಯುವ ಮುನ್ನ ಯುವತಿ ಮತ್ತು ಯುವಕ ನಿರಂತರ ಸಂಪರ್ಕದಲ್ಲಿದ್ದರು. ಅಲ್ಲದೇ, ದೂರು ನೀಡಿದ ನಂತರವೂ ಯುವಕನಿಗೆ ಯುವತಿ ಮೆಸೇಜ್ ಮೂಲಕ ಸಂಪರ್ಕಿಸಿದ್ದಳು ಎಂದು ತಿಳಿದುಬಂದಿದೆ.

ಇದನ್ನೂ ಓದಿ: 

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ; ಕದ್ದ ಮೊಬೈಲ್​ನಿಂದ ಸಿಕ್ಕಿಬಿದ್ದ ಆರೋಪಿಗಳು

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ಆರೋಪಿಗಳು ಪೊಲೀಸರ ಬಲೆಗೆ ಬೀಳಲು ಈ ಸುಳಿವುಗಳೇ ಮುಖ್ಯ ಕಾರಣ (Mysuru Another student accused of assault and rape)

Published On - 8:06 pm, Fri, 3 September 21

ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ