ಮೈಸೂರು: ಸಾಮೂಹಿಕ ಅತ್ಯಾಚಾರ ಪ್ರಕರಣದ ಆಘಾತದಿಂದ ರಾಜ್ಯದ ಜನರು ಇನ್ನೂ ಹೊರಬರದ ಹೊತ್ತಲ್ಲೇ ಮೈಸೂರಿನಲ್ಲಿ ಇನ್ನೋರ್ವ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆಗಿರುವ ಆರೋಪ ಕೇಳಿಬಂದಿದೆ. ಮೈಸೂರಿನ ಆರ್.ಎಸ್.ನಾಯ್ಡು ನಗರದ ಹೋಲಿ ಕ್ರಾಸ್ ಸ್ಡಡಿ ಹೌಸ್ನಲ್ಲಿ ಕಾಲೇಜು ವಿದ್ಯಾರ್ಥಿನಿಯೋರ್ವಳ ಮೇಲೆ ಹಲ್ಲೆ ಮತ್ತು ಅತ್ಯಾಚಾರ ಯತ್ನ ನಡೆದಿದೆ ಎಂಬ ಮಾಹಿತಿ ವರದಿಯಾಗಿದ್ದು, ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ರೇಪ್ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಈಕುರಿತು ಮೈಸೂರು ಪೊಲೀಸ್ ಆಯುಕ್ತ ಚಂದ್ರಗುಪ್ತ ಅಧಿಕೃತ ಮಾಹಿತಿ ನೀಡಿದ್ದಾರೆ.
ಘಟನೆ ನಡೆದ ಎರಡು ಗಂಟೆಯೊಳಗೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿನಿ ಒಬ್ಬಳೇ ಇದ್ದಾಗ ಹಲ್ಲೆ ನಡೆಸಿ ಅತ್ಯಾಚಾರಕ್ಕೆ ಯತ್ನಿಸಿಲಾಗಿತ್ತು ಎಂಬ ಆರೋಪದಡಿ ಪ್ರಕರಣ ದಾಖಲಾಗಿದೆ. ಸ್ಟಡಿಹೌಸ್ನಲ್ಲಿ ಆಂಧ್ರ ಮೂಲದ 7 ವಿದ್ಯಾರ್ಥಿನಿಯರಿದ್ದರು. ಘಟನೆ ವೇಳೆ ಉಳಿದ ವಿದ್ಯಾರ್ಥಿನಿಯರು ತರಗತಿಗೆ ತೆರಳಿದ್ದರು. ಇದನ್ನು ಗಮನಿಸಿಯೇ ಸ್ಟಡಿಹೌಸ್ ಒಳಗೆ ನುಗ್ಗಿದ್ದ ಆರೋಪಿ, ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಹಲ್ಲೆಗೈದು ಪರಾರಿಯಾಗಿದ್ದಾನೆ ಎಂದು ಪ್ರಕರಣ ದಾಖಲಾಗಿದೆ. ಗಾಯಾಳು ವಿದ್ಯಾರ್ಥಿನಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮೈಸೂರಿನಲ್ಲಿ ಯುವತಿ ಮೇಲೆ ಹಲ್ಲೆ ಅತ್ಯಾಚಾರ ಯತ್ನ ಆರೋಪ ಪ್ರಕರಣದಲ್ಲಿ ಯುವತಿ ಮೇಲೆಯೂ ಕೆಲವು ಅನುಮಾನಗಳು ಸಾರ್ವಜನಿಕ ವಲಯದಲ್ಲಿ ಮೂಡಿದೆ. ಅಪರಿಚಿತನಿಂದ ಕೃತ್ಯ ನಡೆದಿದೆ ಎಂದು ಯುವತಿ ಮೊದಲು ಯುವತಿ ಹೇಳಿಕೆ ನೀಡಿದ್ದಳು. ಆದರೆ ಆರೋಪಿ ಯುವಕನನ್ನು ಬಂಧಿಸಿದ ನಂತರ ಆತನ ಪರಿಚಯ ಇದೆ ಎಂದ ಯುವತಿಯೇ ಒಪ್ಪಿಕೊಂಡಿದ್ದಾಳೆ. ಘಟನೆ ನಡೆಯುವ ಮುನ್ನ ಯುವತಿ ಮತ್ತು ಯುವಕ ನಿರಂತರ ಸಂಪರ್ಕದಲ್ಲಿದ್ದರು. ಅಲ್ಲದೇ, ದೂರು ನೀಡಿದ ನಂತರವೂ ಯುವಕನಿಗೆ ಯುವತಿ ಮೆಸೇಜ್ ಮೂಲಕ ಸಂಪರ್ಕಿಸಿದ್ದಳು ಎಂದು ತಿಳಿದುಬಂದಿದೆ.
ಇದನ್ನೂ ಓದಿ:
ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ; ಕದ್ದ ಮೊಬೈಲ್ನಿಂದ ಸಿಕ್ಕಿಬಿದ್ದ ಆರೋಪಿಗಳು
ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ಆರೋಪಿಗಳು ಪೊಲೀಸರ ಬಲೆಗೆ ಬೀಳಲು ಈ ಸುಳಿವುಗಳೇ ಮುಖ್ಯ ಕಾರಣ
(Mysuru Another student accused of assault and rape)
Published On - 8:06 pm, Fri, 3 September 21