AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಪ್ಯಾಲೆಸ್ ಮುಂಭಾಗ ಸ್ಫೋಟ: ಸಾವಿನ ಸಂಖ್ಯೆ 2ಕ್ಕೆ ಏರಿಕೆ, ಪ್ರಕರಣದ ಸುತ್ತ ಅನುಮಾದ ಹುತ್ತ

Mysuru balloon gas cylinder Blast: ನಿನ್ನೆ(ಡಿಸೆಂಬರ್ 25) ಕ್ರಿಸ್ಮಸ್ ಹಾಲಿಡೇ ದಿನವೇ ಮೈಸೂರು ಅರಮನೆ ಮುಂಭಾಗದಲ್ಲಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಈಗಾಗಲೇ ಓರ್ವ ಸಾವನ್ನಪ್ಪಿದ್ದು, ಗಾಯಗೊಂಡಿದ್ದ ಮಹಿಳೆಯೋರ್ವಳು ಸಹ ಮೃತಪಟ್ಟಿದ್ದಾಳೆ. ಇದರೊಂದಿಗೆ ಸಾವಿನ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ. ಇನ್ನು ಈ ಪ್ರಕರಣದ ಸುತ್ತ ಹಲವು ಅನುಮಾಗಳು ವ್ಯಕ್ತವಾಗಿದ್ದು, ಪೊಲೀಸರು ಬೇರೆ ಬೇರೆ ಆಯಾಮಗಳಲ್ಲಿ ತನಿಖೆ ನಡೆಸಿದ್ದಾರೆ.

ಮೈಸೂರು ಪ್ಯಾಲೆಸ್ ಮುಂಭಾಗ ಸ್ಫೋಟ: ಸಾವಿನ ಸಂಖ್ಯೆ 2ಕ್ಕೆ ಏರಿಕೆ, ಪ್ರಕರಣದ ಸುತ್ತ ಅನುಮಾದ ಹುತ್ತ
Mysuru Manjula
ರಾಮ್​, ಮೈಸೂರು
| Edited By: |

Updated on:Dec 26, 2025 | 5:12 PM

Share

ಮೈಸೂರು, (ಡಿಸೆಂಬರ್ 26): ಮೈಸೂರು ಅರಮನೆ ಮುಂಭಾಗದಲ್ಲಿ ಸಂಭವಿಸಿದ್ದ ಸ್ಫೋಟದಲ್ಲಿ (Mysuru balloon gas cylinder Blast) ಗಾಯಗೊಂಡಿದ್ದ ಮಹಿಳೆ (Woman) ಸಾವನ್ನಪ್ಪಿದ್ದಾರೆ. ನಿನ್ನೆ(ಡಿಸೆಂಬರ್ 25) ಅರಮನೆ (Mysuru Palace) ಜಯಮಾರ್ತಂಡ ದ್ವಾರದ ಬಳಿ ಸಲೀಂ ಎಂಬಾತ ಬಲೂನ್ ಮಾರುತ್ತಿದ್ದ ಈ ವೇಳೆ ಸಿಲಿಂಡರ್ ಸ್ಪೋಟವಾಗಿತ್ತು. ಸ್ಫೋಟದ ತೀವ್ರತೆಗೆ ಉತ್ತರ ಪ್ರದೇಶ ಮೂಲದ 40 ವರ್ಷದ ಸಲೀಂ ಸ್ಥಳದಲ್ಲೇ ಮೃತಪಟ್ಟಿದ್ದರೆ, ಮೈಸೂರು ಜಿಲ್ಲೆಯ ನಂಜನಗೂಡು ಮೂಲದ ಮಂಜುಳಾ ಗಂಭೀರಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು K.R.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು (ಡಿಸೆಂಬರ್ 26) ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ.

ನಿನ್ನೆ(ಡಿಸೆಂಬರ್ 25)  ನಿನ್ನೆ ರಾತ್ರಿ ರಾತ್ರಿ 8.30ರ ಸುಮಾರಿಗೆ ಮೈಸೂರು ಅರಮನೆ (Mysuru Palace) ಜಯಮಾರ್ತಂಡ ದ್ವಾರದ ಬಳಿ ಉತ್ತರ ಪ್ರದೇಶ ಮೂಲದ ಸಲೀಂ ಎಂಬಾತ ಬಲೂನ್ ಮಾರುತ್ತಿದ್ದ ಈ ವೇಳೆ ಸಿಲಿಂಡರ್ ಸ್ಪೋಟವಾಗಿತ್ತು. ಪರಿಣಾಮ 40 ವರ್ಷದ ಸಲೀಂ ಸ್ಥಳದಲ್ಲೇ ಮೃತಪಟ್ಟಿದ್ದರೆ, ನಾಲ್ವರಿಗೆ ಗಾಯಗಳಾಗಿದ್ದವು. ಅದರಲ್ಲೂ ಮೈಸೂರು ಜಿಲ್ಲೆಯ ನಂಜನಗೂಡು ಮೂಲದ ಮಂಜುಳಾ ಎನ್ನುವರಿಗೆ ಗಂಭೀರ ಗಾಯಗಳಾಗಿದ್ದವು. ಇನ್ನು ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿದೆ. ಬೆಂಗಳೂರು ಮೂಲದ ಲಕ್ಷ್ಮಿ ತಲೆಗೆ ಗಂಭೀರ ಗಾಯವಾಗಿದ್ದರೆ, ಕೊಲ್ಕತ್ತಾ ಮೂಲದ ಶಾಹಿನಾ ಶಬ್ಬಿರ್ ಕಾಲಿಗೆ ಗಾಯವಾಗಿದೆ. ಹಾಗೇ ರಾಣೆಬೆನ್ನೂರು ಮೂಲದ ಕೊಟ್ಟ್ರೇಶಿ ಕಾಲಿಗೆ ಗಾಯವಾಗಿದ್ದು, ಸದ್ಯ ಗಾಯಾಳುಗಳಿಗೆ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಇದನ್ನೂ ಓದಿ: ಮೈಸೂರು ಅರಮನೆ ಮುಂಭಾಗ ಭಾರೀ ಸ್ಫೋಟ, ಓರ್ವ ಸಾವು, ಹಲವರಿಗೆ ಗಂಭೀರ ಗಾಯ

ಪ್ರಕರಣದ ಸುತ್ತ ಅನುಮಾನದ ಹುತ್ತ

ಸ್ಫೋಟವಾದ ಕೂಡಲೇ ಸ್ಥಳಕ್ಕೆ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಡಿಸಿಪಿಗಳಾದ ಬಿಂದುಮಣಿ ಸುಂದರ್ ರಾಜ್ ಅಗ್ನಿಶಾಮಕದ ದಳದ ಸಿಬ್ಬಂದಿ ದೌಡಾಯಿಸಿ ಪರಿಶೀಲನೆ ನಡೆಸಿದ್ದರು. ಸ್ಪೋಟ ಪತ್ತೆ ದಳ ಶ್ವಾನದಳ ಸಹಾ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದು,  ಇನ್ನು ಈ ಪ್ರಕರಣದಲ್ಲಿ ಹಲವು ಅನುಮಾನಗಳು ವ್ಯಕ್ತವಾಗಿವೆ.  ಯಾಕಂದ್ರೆ ಮೃತ ಸಲೀಂ ಕಳೆದ 15 ದಿನ ಹಿಂದಷ್ಟೇ ಮೈಸೂರಿಗೆ ಬಲೂನ್ ಮಾರಲು ಬಂದಿದ್ದ. ಆದ್ರೆ, ಆತ ಮೈಸೂರಿನ ಲಾಡ್ಜ್​​ವೊಂದರಲ್ಲಿ ತಂಗಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ.

ಓರ್ವ ಬಲೂನ್ ಮಾರುವವ ಕಳೆದ 15 ದಿನಗಳಿಂದ ಲಾಡ್ಜ್​​ ನಲ್ಲಿ ಇರುವಷ್ಟು ಆರ್ಥಿಕವಾಗಿ ಸಬಲನಾಗಿರುತ್ತಾನೆಯೇ ಎನ್ನುವ ಪ್ರಶ್ನೆ ಉದ್ಭವವಾಗುತ್ತೆ. ಬಲೂನ್​​ ಮಾರಾಟದಿಂದ ಹೊಟ್ಟೆ ತುಂಬಿದರೆ ಸಾಕು ಎನ್ನುತ್ತಾರೆ. ಇಂತದರಲ್ಲಿ ಈ ಸಲೀಂ ಲಾಡ್ಜ್​​ನಲ್ಲಿ ತಂಗಿ ಬಲೂನ್ ವ್ಯಾಪಾರ ಮಾಡುತ್ತಿದ್ದ ಎನ್ನುವುದರ  ಹಿಂದೆ ಅನುಮಾನಗಳು ವ್ಯಕ್ತವಾಗಿವೆ. ಹೀಗಾಗಿ ಪೊಲೀಸರು ಮಾತ್ರವಲ್ಲದೇ ಎನ್​ಐಎ ಸಹ ಈ ಕೇಸಿನಲ್ಲಿ ಪ್ರವೇಶ ಮಾಡಿದ್ದು, ಬೇರೆ ಬೇರೆ ಆಯಾಮಗಳಲ್ಲಿ ತನಿಖೆ ನಡೆಸಿದೆ.

ಈ ಬಗ್ಗೆ ನಜರ್ ಬಾದ್ ಪೊಲೀಸ್​ ಠಾಣೆಯಲ್ಲಿ  ಪ್ರಕರಣ ದಾಖಲಾಗಿದ್ದು, ಮೃತ ಸಲೀಂ ಜೊತೆಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ. ಹಾಗೇ ಎಎನ್​ಐ ಸಹ ತನಿಖೆ ನಡೆಸಲಿದೆ ಎಂದು ತಿಳಿದುಬಂದಿದ್ದು, ತನಿಖೆಯ ನಂತರ ಸ್ಫೋಟಕ್ಕೆ ನಿಖರ ಕಾರಣ ತಿಳಿದುಬರಲಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 4:49 pm, Fri, 26 December 25

Follow Us
ಬಂಗಾಳ ಅಂತಿಮ ಸಮರದಲ್ಲಿ ಆರಂಭಿಕ ವಿಘ್ನ
ಬಂಗಾಳ ಅಂತಿಮ ಸಮರದಲ್ಲಿ ಆರಂಭಿಕ ವಿಘ್ನ
ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ
ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ
ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್​ ಪ್ಲೇ!
ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್​ ಪ್ಲೇ!
ಹಾಸನ ಹಲವು ಅವಾಂತರ ಸೃಷ್ಟಿಸಿದ ಮಳೆ: ಧರೆಗುರುಳಿದ ವಿದ್ಯುತ್​ ಕಂಬ, ಮರಗಳು
ಹಾಸನ ಹಲವು ಅವಾಂತರ ಸೃಷ್ಟಿಸಿದ ಮಳೆ: ಧರೆಗುರುಳಿದ ವಿದ್ಯುತ್​ ಕಂಬ, ಮರಗಳು
ಐವಿ ಡ್ರಿಪ್​ ಹಾಕಿಸಿಕೊಂಡು ಕೆಲಸಕ್ಕೆ ಹಾಜರಾದ ಅಂಗನವಾಡಿ ಕಾರ್ಯಕರ್ತೆ
ಐವಿ ಡ್ರಿಪ್​ ಹಾಕಿಸಿಕೊಂಡು ಕೆಲಸಕ್ಕೆ ಹಾಜರಾದ ಅಂಗನವಾಡಿ ಕಾರ್ಯಕರ್ತೆ
‘ಮಗನೇ ಈಗಲೂ ನನಗೆ ಸಿನಿಮಾ ಅರ್ಥ ಆಗಿಲ್ಲ ಅಂತಿದ್ರು’; ವಿನೋದ್
‘ಮಗನೇ ಈಗಲೂ ನನಗೆ ಸಿನಿಮಾ ಅರ್ಥ ಆಗಿಲ್ಲ ಅಂತಿದ್ರು’; ವಿನೋದ್
ದೇವಾಲಯದಲ್ಲಿ ಪ್ರಸಾದ ಬೇಡ ಅನ್ನೋದು ಘೋರ ಪಾಪ! ಯಾಕೆ ಗೊತ್ತಾ?
ದೇವಾಲಯದಲ್ಲಿ ಪ್ರಸಾದ ಬೇಡ ಅನ್ನೋದು ಘೋರ ಪಾಪ! ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೇಮ ವ್ಯವಹಾರಗಳಿಗೆ ಮನ್ನಣೆ
ಇಂದು ಈ ರಾಶಿಯವರಿಗೆ ಪ್ರೇಮ ವ್ಯವಹಾರಗಳಿಗೆ ಮನ್ನಣೆ
‘ಯಾವುದೇ ಗಿಮಿಕ್ ಇಲ್ಲದೇ ಗೆದ್ದ ಸಿನಿಮಾ ನಮ್ಮದು’: ನಟ ವಿನೋದ್ ಪ್ರಭಾಕರ್
‘ಯಾವುದೇ ಗಿಮಿಕ್ ಇಲ್ಲದೇ ಗೆದ್ದ ಸಿನಿಮಾ ನಮ್ಮದು’: ನಟ ವಿನೋದ್ ಪ್ರಭಾಕರ್
ಕುಲ್ಗಾಮ್​ನಲ್ಲಿ ಭೀಕರ ಅಪಘಾತ; ಕಾರು ಗುದ್ದಿದ ರಭಸಕ್ಕೆ ವಿದ್ಯಾರ್ಥಿನಿ ಸಾವು
ಕುಲ್ಗಾಮ್​ನಲ್ಲಿ ಭೀಕರ ಅಪಘಾತ; ಕಾರು ಗುದ್ದಿದ ರಭಸಕ್ಕೆ ವಿದ್ಯಾರ್ಥಿನಿ ಸಾವು