AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಸ್ಫೋಟ ಪ್ರಕರಣ: ಮುಂದುವರೆದ ಸಾವಿನ ಸರಣಿ, ಮರ್ತೋವ ಮಹಿಳೆ ಸಾವು

ಮೈಸೂರು ಅರಮನೆ ಬಳಿ ನಡೆದ ಹೀಲಿಯಂ ಸಿಲಿಂಡರ್ ಸ್ಫೋಟ ದುರಂತದಲ್ಲಿ ಮೃತರ ಸಂಖ್ಯೆ 3ಕ್ಕೇರಿದೆ. ಕುಟುಂಬದವರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬೆಂಗಳೂರು ಮೂಲದ ಮಹಿಳೆ ಚಿಕಿತ್ಸೆ ಫಲಿಸದೆ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇಂದು ಮಧ್ಯಾಹ್ನ ಕೂಡ ಓರ್ವ ಮಹಿಳೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರು.

ಮೈಸೂರು ಸ್ಫೋಟ ಪ್ರಕರಣ: ಮುಂದುವರೆದ ಸಾವಿನ ಸರಣಿ, ಮರ್ತೋವ ಮಹಿಳೆ ಸಾವು
ಮೈಸೂರು ಸ್ಫೋಟ ಪ್ರಕರಣ
ರಾಮ್​, ಮೈಸೂರು
| Edited By: |

Updated on: Dec 26, 2025 | 10:31 PM

Share

ಮೈಸೂರು, ಡಿಸೆಂಬರ್​ 26: ಮೈಸೂರು ಅರಮನೆ ಬಳಿ ಹೀಲಿಯಂ​ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ (cylinder Blast case) ಸಂಬಂಧಿಸಿದಂತೆ ಇದೀಗ ಮೃತರ ಸಂಖ್ಯೆ 3ಕ್ಕೆ ಏರಿಕೆ ಆಗಿದೆ. ಮೈಸೂರಿನ ಕೆ.ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಂಗಳೂರು ಮೂಲದ ಲಕ್ಷ್ಮೀ ಎನ್ನುವವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ (death). ಲಕ್ಷ್ಮೀ ಕುಟುಂಬದವರ ಜೊತೆಗೆ ಮೈಸೂರು ಪ್ರವಾಸಕ್ಕೆ ಬಂದಿದ್ದ ವೇಳೆ ದುರಂತ ಸಂಭವಿಸಿತ್ತು. ಇನ್ನು ಲಕ್ಷ್ಮೀ ಅವರ ಮಗಳು ಡಿಂಪಲ್​​ ದುರಂತದಿಂದ ಬಚಾವ್‌ ಆಗಿದ್ದಾರೆ. ಸದ್ಯ ತಾಯಿ ಮೃತಪಟ್ಟ ಹಿನ್ನೆಲೆ ಪುತ್ರಿ ಕಣ್ಣೀರು ಹಾಕಿದ್ದಾಳೆ.

ಮೈಸೂರು ಅರಮನೆ ಎದುರಲ್ಲೇ ಘೋರ ದುರಂತ

ಕ್ರಿಸ್‌ಮಸ್‌ ರಜೆ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ವ್ಯಾಪಾರ ಕೂಡಾ ಜೋರಾಗಿತ್ತು. ಅದ್ರಂತೆ ಗುರುವಾರ ರಾತ್ರಿ 8.30 ರ ಹೊತ್ತಲ್ಲಿ ಉತ್ತರ ಪ್ರದೇಶ ಮೂಲದ ಸಲೀಂ, ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಹೀಲಿಯಂ ಬಲೂನ್‌ ಮಾರಾಟ ಮಾಡುತ್ತಿದ್ದ. ಬಲೂನ್‌ಗೆ ಗ್ಯಾಸ್‌ ತುಂಬಿಸುತ್ತಿದ್ದ ವೇಳೆ ಏಕಾಏಕಿ ಸಿಲಿಂಡರ್‌ ಸ್ಫೋಟವಾಗಿದ್ದು, ಸಲೀಂ ಅಲ್ಲೇ ಪ್ರಾಣ ಬಿಟ್ಟಿದ್ದ. ನಾಲ್ಕೈದು ಜನ ಗಾಯಗೊಂಡು ಆಸ್ಪತ್ರೆ ಸೇರಿದ್ದರು.

ಇದನ್ನೂ ಓದಿ: ಮೈಸೂರು ಪ್ಯಾಲೆಸ್ ಮುಂಭಾಗ ಸ್ಫೋಟ: ಸಾವಿನ ಸಂಖ್ಯೆ 2ಕ್ಕೆ ಏರಿಕೆ, ಪ್ರಕರಣದ ಸುತ್ತ ಅನುಮಾದ ಹುತ್ತ

ಸ್ಫೋಟದ ತೀವ್ರತೆಗೆ ಸಲೀಂ ಸ್ಥಳದಲ್ಲೇ ಪ್ರಾಣ ಬಿಟ್ಟರೆ, ನಂಜನಗೂಡಿನ ಮಂಜುಳ ಇಂದು ಆಸ್ಪತ್ರೆಯಲ್ಲಿ ಉಸಿರು ನಿಲ್ಲಿಸಿದ್ದಾರೆ. ಮೈಸೂರಿನಲ್ಲಿ ಹೂವು ಮಾರಾಟ ಮಾಡುತ್ತಿದ್ದ ಮಂಜುಳ ವ್ಯಾಪಾರ ಮುಗಿಸಿಕೊಂಡು ಬಸ್‌ ಹತ್ತಲು ಹೋಗುತ್ತಿದ್ದರು. ಹೀಗೆ ಹೋಗುವಾಗಲೇ ಸಿಲಿಂಡ್ ಸ್ಫೋಟಕ್ಕೆ ಬಲಿ ಆಗಿದ್ದಾರೆ.

ಸ್ಫೋಟದ ಹಿಂದೆ ಬಿದ್ದ ಎನ್‌ಐಎ!

ಸ್ಫೋಟಕ್ಕೆ ಬಲಿ ಆಗಿರುವ ಸಲೀಂ 15 ದಿನಗಳ ಹಿಂದಷ್ಟೇ ಮೈಸೂರಿಗೆ ಬಂದಿದ್ದ. ಲಷ್ಕರ್ ಮೊಹಲ್ಲಾದ ಷರೀಫ್ ಲಾಡ್ಜ್‌ನಲ್ಲಿ ಉಳಿದುಕೊಂಡಿದ್ದ. ಮೂರು ಜನ ಸ್ನೇಹಿತರು ಜತೆಗೆ ಬಲೂನ್‌ ಮಾರಾಟ ಮಾಡುತ್ತಿದ್ದರು. ಆದರೆ ಗುರುವಾರ ರಾತ್ರಿ ಸಲೀಂ ಒಬ್ಬನೇ ಬಂದು ಮಾರಾಟ ಮಾಡಿರೋದು ಹತ್ತಾರು ಅನುಮಾನ ಮೂಡಿಸಿದೆ. ಕ್ರಿಸ್‌ಮಸ್‌ ಹೊತ್ತಲ್ಲೇ ದುರಂತ ಆಗಿರೋದ್ರಿಂದ ಎನ್‌ಐಎ ಕೂಡಾ ಮಾಹಿತಿ ಪಡೆದಿದೆ. ಇನ್ನು ಸಲೀಂ ಜತೆಗಿದ್ದ ಇಬ್ಬರನ್ನ ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಸಿದ್ದಾರೆ. ಆಸ್ಪತ್ರೆಗೆ ಸಂಸದ ಯದುವೀರ್‌, ಸಚಿವ ಮಹಾದೇವಪ್ಪ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್