AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಕೋರ್ಟ್, ಕಚೇರಿಗಳಿಗೇ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದ ಮೈಸೂರಿನ ‘ಹುಸಿ ಬಾಂಬ್’ ಕಿಂಗ್‌ಪಿನ್!

ಮೈಸೂರಿನಲ್ಲಿ ಬಂಧಿತನಾದ ಹುಸಿ ಬಾಂಬ್ ಬೆದರಿಕೆ ಆರೋಪಿ ಶ್ರೀನಿವಾಸ್ ಲೂಯಿಸ್, ಪಾಕಿಸ್ತಾನದ ಸರ್ಕಾರಿ ಕಚೇರಿ ಮತ್ತು ಕೋರ್ಟ್‌ಗಳಿಗೂ ಬೆದರಿಕೆ ಇಮೇಲ್ ಕಳುಹಿಸಿರುವುದು ದೆಹಲಿ ಪೊಲೀಸರ ವಿಚಾರಣೆಯಲ್ಲಿ ಪತ್ತೆಯಾಗಿದೆ. ಡಾರ್ಕ್ ವೆಬ್ ಮತ್ತು 50ಕ್ಕೂ ಹೆಚ್ಚು ಇಮೇಲ್ ಐಡಿಗಳನ್ನು ಬಳಸಿ ಅಂತರಾಷ್ಟ್ರೀಯ ಮಟ್ಟದಲ್ಲಿ ಈತ ಆತಂಕ ಸೃಷ್ಟಿಸಿದ್ದ.

ಪಾಕಿಸ್ತಾನದ ಕೋರ್ಟ್, ಕಚೇರಿಗಳಿಗೇ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದ ಮೈಸೂರಿನ ‘ಹುಸಿ ಬಾಂಬ್’ ಕಿಂಗ್‌ಪಿನ್!
ಶ್ರೀನಿವಾಸ್ ಲೂಯಿಸ್Image Credit source: tv9
ರಾಮ್​, ಮೈಸೂರು
| Edited By: |

Updated on: Apr 07, 2026 | 8:57 AM

Share

ಮೈಸೂರು, ಏಪ್ರಿಲ್ 7: ದೇಶಾದ್ಯಂತ ಶಾಲೆಗಳು, ನ್ಯಾಯಾಲಯಗಳು ಮತ್ತು ಸರ್ಕಾರಿ ಕಚೇರಿಗಳಿಗೆ ಹುಸಿ ಬಾಂಬ್ ಬೆದರಿಕೆ (Hoax Bomb Threat) ಇಮೇಲ್ ಕಳುಹಿಸಿ ಆತಂಕ ಸೃಷ್ಟಿಸಿದ್ದ ಮೈಸೂರಿನ (Mysuru) ಶ್ರೀನಿವಾಸ್ ಲೂಯಿಸ್ (SrinivasLouis) (47), ಅಂತರಾಷ್ಟ್ರೀಯ ಮಟ್ಟದಲ್ಲೂ ಇಂತಹ ಕಿಡಿಗೇಡಿತನ ಮಾಡಿರುವುದು ದೆಹಲಿ ಪೊಲೀಸರ ವಿಚಾರಣೆ ವೇಳೆ ಬಹಿರಂಗವಾಗಿದೆ. ಈತ ಪಾಕಿಸ್ತಾನದ ನ್ಯಾಯಾಲಯಗಳು, ಶಾಲಾ-ಕಾಲೇಜುಗಳು ಮತ್ತು ಅಲ್ಲಿನ ಸರ್ಕಾರಿ ಕಚೇರಿಗಳಿಗೂ ಹುಸಿ ಬಾಂಬ್ ಬೆದರಿಕೆ ಸಂದೇಶ ರವಾನಿಸಿದ್ದ ಎಂಬುದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

ಡಾರ್ಕ್ ವೆಬ್ ಮೂಲಕ ಸಂಚು

ತಾಂತ್ರಿಕವಾಗಿ ಅತ್ಯಂತ ಚಾಣಾಕ್ಷನಾಗಿರುವ ಶ್ರೀನಿವಾಸ್, ಪೊಲೀಸರಿಗೆ ಸಿಕ್ಕಿಬೀಳದಂತೆ ತನ್ನ ಐಪಿ (IP) ವಿಳಾಸವನ್ನು ಮರೆಮಾಚಲು ‘ಡಾರ್ಕ್ ವೆಬ್’ ಮತ್ತು ವಿಪಿಎನ್ ತಂತ್ರಜ್ಞಾನ ಬಳಸುತ್ತಿದ್ದ. ಪಾಕಿಸ್ತಾನದ ಪ್ರಮುಖ ಸ್ಥಳಗಳನ್ನು ಪತ್ತೆ ಹಚ್ಚಲು ಗೂಗಲ್ ಮ್ಯಾಪ್ ಬಳಸುತ್ತಿದ್ದ ಈತ, ವಾಯ್ಸ್ ಓವರ್ ಇಂಟರ್ನೆಟ್ ಪ್ರೋಟೋಕಾಲ್ (VoIP) ಮೂಲಕವೂ ಕರೆಗಳನ್ನು ಮಾಡುತ್ತಿದ್ದ. ಸುಮಾರು 50ಕ್ಕೂ ಹೆಚ್ಚು ನಕಲಿ ಇಮೇಲ್ ಐಡಿಗಳನ್ನು ಸೃಷ್ಟಿಸಿ ಈ ಕೃತ್ಯ ಎಸಗಿದ್ದ.

FSLಗೆ ಲ್ಯಾಪ್‌ಟಾಪ್ ರವಾನೆ

ಮಾರ್ಚ್ 27ರಂದು ಮೈಸೂರಿನಲ್ಲಿ ದೆಹಲಿ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ ಈತನಿಂದ ಮೊಬೈಲ್, ಲ್ಯಾಪ್‌ಟಾಪ್ ಮತ್ತು ಹಲವು ಸಿಮ್ ಕಾರ್ಡ್‌ಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಇವುಗಳಲ್ಲಿರುವ ಮಾಹಿತಿಯನ್ನು ಸಂಪೂರ್ಣವಾಗಿ ಪರಿಶೋಧಿಸಲು ಪೊಲೀಸರು ಈ ಡಿಜಿಟಲ್ ಪುರಾವೆಗಳನ್ನು ಎಫ್‌ಎಸ್‌ಎಲ್ (FSL) ಪರೀಕ್ಷೆಗೆ ರವಾನಿಸಿದ್ದಾರೆ. ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಇಮೇಲ್ ಕಳುಹಿಸುತ್ತಿದ್ದ ಈತ, ದೇಶದ ಹಲವು ರಾಜ್ಯಗಳ ವಿಧಾನಸಭೆಗಳಿಗೂ ಬೆದರಿಕೆ ಹಾಕಿದ್ದ.

ಇದನ್ನೂ ಓದಿ: ದೆಹಲಿ ಪೊಲೀಸರ ಕಾರ್ಯಾಚರಣೆ: ಶಾಲೆಗಳು, ಕೋರ್ಟ್​ಗಳಿಗೆ ಬಾಂಬ್ ಬೆದರಿಕೆ ಹಾಕುತ್ತಿದ್ದ ಆರೋಪಿ ಮೈಸೂರಿನಲ್ಲಿ ಅರೆಸ್ಟ್

ಸದ್ಯ ದೆಹಲಿ ಪೊಲೀಸರ ಕಸ್ಟಡಿಯಲ್ಲಿರುವ ಶ್ರೀನಿವಾಸ್‌ನನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದ್ದು, ಈತನ ಹಿಂದೆ ಯಾವುದಾದರೂ ಸಂಘಟನೆಗಳಿವೆಯೇ ಅಥವಾ ಕೇವಲ ಕುಚೇಷ್ಟೆಗಾಗಿ ಇಷ್ಟೆಲ್ಲಾ ಮಾಡಿದ್ದಾನೆಯೇ ಎಂಬ ನಿಟ್ಟಿನಲ್ಲಿ ತನಿಖೆ ಮುಂದುವರಿದಿದೆ.

ಯಾರು ಈ ಶ್ರೀನಿವಾಸ್?

ಹುಸಿ ಬಾಂಬ್ ಬೆದರಿಕೆ ಪ್ರಕರಣದಲ್ಲಿ ದೆಹಲಿ ಪೊಲೀಸ್ ಕಸ್ಟಡಿಯಲ್ಲಿರುವ ಶ್ರೀನಿವಾಸ್ ಲೂಯಿಸ್, ಮೈಸೂರಿನ ಪ್ರತಿಷ್ಠಿತ ಬೃಂದಾವನ ಬಡಾವಣೆ ಎರಡನೇ ಹಂತದ 6ನೇ ಕ್ರಾಸ್‌ ನಿವಾಸಿ. ಇಲ್ಲಿದ್ದುಕೊಂಡೇ ಬಾಂಬ್ ಬೆದರಿಕೆ ಸಂದೇಶ ಕಳುಹಿಸುವ ಕೃತ್ಯಗಳನ್ನು ಎಸಗುತ್ತಿದ್ದ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಂಗ್​ಸ್ಟರ್ ಸಂದೀಪ್​ಗೆ ಡ್ರಮ್ ಬಾರಿಸಿ ಸ್ವಾಗತ ಕೋರಿದ ಗ್ರಾಮಸ್ಥರು
ಗ್ಯಾಂಗ್​ಸ್ಟರ್ ಸಂದೀಪ್​ಗೆ ಡ್ರಮ್ ಬಾರಿಸಿ ಸ್ವಾಗತ ಕೋರಿದ ಗ್ರಾಮಸ್ಥರು
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ