AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ತಂದೆಗೆ ಕಾಲ್ ಮಾಡಿಸಿ, 3 ಲಕ್ಷ ರೂ. ಹಣ ಕೊಡುವಂತೆ ಒತ್ತಾಯಿಸಿದರು: ಯುವತಿಯ ಸ್ನೇಹಿತ ಪೊಲೀಸರಿಗೆ ನೀಡಿದ ಹೇಳಿಕೆ ಟಿವಿ9ಗೆ ಲಭ್ಯ

ಜೆಎಸ್‌ಎಸ್ ಆಯುರ್ವೇದಿಕ್ ಕಾಲೇಜಿನ ಮುಂದೆ ವಾಟರ್ ಟ್ಯಾಂಕ್ ಬಳಿ ಕಚ್ಚಾ ರಸ್ತೆಯಲ್ಲಿ ನಾವಿಬ್ಬರೂ ಹೋಗಿದ್ದೆವು. ನಾನು ಯಾವಾಗಲೂ ಜಾಗಿಂಗ್‌ಗೆ ಹೋಗುವ ಸ್ಥಳ ಅದಾಗಿತ್ತು. ಅಲ್ಲಿ ಹೋಗಿ ಬೈಕ್ ನಿಲ್ಲಿಸಿದಾಗ 25 ರಿಂದ‌ 30 ವರ್ಷದ ಸುಮಾರು 6 ಮಂದಿ ಬಂದರು. ಬಲ ಭಾಗದಿಂದ ಏಕಾಏಕಿ ಬಂದು ದೊಣ್ಣೆಯಿಂದ ಹಲ್ಲೆ ಮಾಡಿದರು.

ನನ್ನ ತಂದೆಗೆ ಕಾಲ್ ಮಾಡಿಸಿ, 3 ಲಕ್ಷ ರೂ. ಹಣ ಕೊಡುವಂತೆ ಒತ್ತಾಯಿಸಿದರು: ಯುವತಿಯ ಸ್ನೇಹಿತ ಪೊಲೀಸರಿಗೆ ನೀಡಿದ ಹೇಳಿಕೆ ಟಿವಿ9ಗೆ ಲಭ್ಯ
ಸಾಂದರ್ಭಿಕ ಚಿತ್ರ
TV9 Web
| Updated By: Skanda|

Updated on:Aug 27, 2021 | 10:34 AM

Share

ಮೈಸೂರು: ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಸ್ನೇಹಿತ ಪೊಲೀಸರಿಗೆ ಮಾಹಿತಿ ನೀಡಿದ್ದು, ಘಟನೆ ಹೇಗೆ ನಡೆಯಿತು ಎಂದು ವಿವರಿಸಿದ್ದಾರೆ. ಅದಕ್ಕೆ ಸಂಬಂಧಿಸಿದ ಮಾಹಿತಿ ಟಿವಿ9ಗೆ ಲಭ್ಯವಾಗಿದ್ದು, ಯುವಕ ಹೇಳಿದ ವಿಷಯ ಸಾಂಸ್ಕೃತಿಕ ನಗರಿಯ ಜನರನ್ನು ಬೆಚ್ಚಿಬೀಳಿಸುವಂತಿದೆ. ಯುವಕ ಮತ್ತು ಯುವತಿ ಜಾಗಿಂಗ್​ಗೆ ಹೋದಾಗ ದುಷ್ಕೃತ್ಯ ನಡೆದಿದೆ ಎಂದು ಹೇಳಲಾಗಿದ್ದು, ತನ್ನ ಮೇಲೂ ಹಲ್ಲೆ ನಡೆದಿರುವುದಾಗಿ ಯುವಕ ಹೇಳಿಕೊಂಡಿದ್ದಾನೆ.

ಆಗಸ್ಟ್​ 24ರ ಸಂಜೆ 7.25 ರಿಂದ 7.30ರ ಸುಮಾರಿಗೆ ಜೆಎಸ್‌ಎಸ್ ಆಯುರ್ವೇದಿಕ್ ಕಾಲೇಜಿನ ಮುಂದೆ ವಾಟರ್ ಟ್ಯಾಂಕ್ ಬಳಿ ಕಚ್ಚಾ ರಸ್ತೆಯಲ್ಲಿ ನಾವಿಬ್ಬರೂ ಹೋಗಿದ್ದೆವು. ನಾನು ಯಾವಾಗಲೂ ಜಾಗಿಂಗ್‌ಗೆ ಹೋಗುವ ಸ್ಥಳ ಅದಾಗಿತ್ತು. ಅಲ್ಲಿ ಹೋಗಿ ಬೈಕ್ ನಿಲ್ಲಿಸಿದಾಗ 25 ರಿಂದ‌ 30 ವರ್ಷದ ಸುಮಾರು 6 ಮಂದಿ ಬಂದರು. ಬಲ ಭಾಗದಿಂದ ಏಕಾಏಕಿ ಬಂದು ದೊಣ್ಣೆಯಿಂದ ಹಲ್ಲೆ ಮಾಡಿದರು. ನಂತರ ನನ್ನನ್ನು ತಳ್ಳಿ ಜೊತೆಯಲ್ಲಿದ್ದವಳನ್ನು ಪೊದೆಗಳಿರುವ ಜಾಗಕ್ಕೆ ಎಳೆದುಕೊಂಡು ಹೋದರು. ಅದರಲ್ಲಿ ತೆಳ್ಳಗಿರುವ ಒಬ್ಬ ನನ್ನ ಹಣೆಗೆ ಕಲ್ಲಿನಿಂದ ಹೊಡೆದ. ಆಗ ಪ್ರಜ್ಞೆ ಹೋಗಿ 15 ನಿಮಿಷದ ನಂತರ ಪ್ರಜ್ಞೆ ಬಂತು. ಆಗ 4 ಜನ ನನ್ನ ಮುಂದೆ ನಿಂತು ನನ್ನ ತಂದೆಗೆ ಕಾಲ್ ಮಾಡಿಸಿದರು. 3 ಲಕ್ಷ ರೂಪಾಯಿ ಹಣ ಕೊಡುವಂತೆ ಒತ್ತಾಯ ಮಾಡಿದರು. ನಾನು ಗೆಳತಿ ಎಲ್ಲಿ ಎಂದು ಕೇಳಿದಾಗ ಇಬ್ಬರು ಆಕೆಯನ್ನು ಎಳೆದುಕೊಂಡು ಬಂದು ನನ್ನ ಪಕ್ಕ ಕೂರಿಸಿದರು. ಅವಳು ತೀವ್ರವಾಗಿ ಗಾಯಗೊಂಡು ನಿತ್ರಾಣಗೊಂಡಿದ್ದಳು. ಅವಳಿಗೆ ತರಚಿದ ಗಾಯಗಳಾಗಿದ್ದವು. ಎಂದು ಪೊಲೀಸರಿಗೆ ಸಂತ್ರಸ್ತೆಯ ಸ್ನೇಹಿತ ಹೇಳಿಕೆ ನೀಡಿದ್ದಾನೆ.

ಗೃಹ ಸಚಿವರು ಹೇಳಿದ್ದೇನು? ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡುವಾಗ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿರುವುದನ್ನು ಒಪ್ಪಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇದೀಗ ಮುಖ್ಯಮಂತ್ರಿಗಳ ಹೇಳಿಕೆಗೆ ಪ್ರತ್ಯುತ್ತರಿಸಿರುವ ಆರಗ ಜ್ಞಾನೇಂದ್ರ, ಅವರು ಸಿಎಂ ಅವರಿಗೆ ಅದನ್ನು ಹೇಳುವ ಅಧಿಕಾರ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಜತೆಗೆ, ಪ್ರಕರಣದ ತನಿಖೆ ಚುರುಕಾಗಿದೆ. ಯಾವ ಹಂತದಲ್ಲಿ ತನಿಖೆ ನಡೆಯುತ್ತಿದೆ ಎಂದು ಹೇಳಲಾಗುವುದಿಲ್ಲ. ಖಂಡಿತವಾಗಲೂ ಈ ಪ್ರಕರಣವನ್ನು ಬೇಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಂದಿರುವ ಸಂದಿಗ್ಧತೆಯನ್ನು ನಿವಾರಣೆ ಮಾಡಿಕೊಳ್ಳುವ ಶಕ್ತಿಯನ್ನು ಪೊಲೀಸರಿಗೆ ನೀಡಲಿ ಎಂದು ಚಾಮುಂಡಿಯನ್ನು ಪ್ರಾರ್ಥಿಸಿದ್ದೇನೆ. ಇನ್ನೂ ಆರೋಪಿ ಗಳು ಪತ್ತೆಯಾಗಿಲ್ಲ. ಆರೋಪಿಗಳ ಪತ್ತೆಗೆ ಸ್ವಲ ಸಮಯ ಬೇಕಿದೆ. ಸಂತ್ರಸ್ತೆ ತಮ್ಮ ಹೇಳಿಕೆಯನ್ನು ಪೊಲೀಸರಿಗೆ ತಿಳಿಸಿಲ್ಲ. ವಿಚಾರಣೆಗೆ ತೊಂದರೆ ಆಗುವ ದೃಷ್ಟಿಯಿಂದ ನಾನು ಹೆಚ್ಚಿನ ವಿವರ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.

ನಾಡದೇವತೆ ಚಾಮುಂಡಿಯನ್ನು ಪ್ರಾರ್ಥಿಸಿ ಬಂದಿರುವ ಸಂದಿಗ್ಧತೆಯನ್ನು ನಿವಾರಣೆ ಮಾಡಿಕೊಳ್ಳುವ ಶಕ್ತಿಯನ್ನು ಪೊಲೀಸರಿಗೆ ನೀಡೆಂದು ಬೇಡಿಕೊಂಡಿರುವೆ. ಅಂತೆಯೇ, ಎಲ್ಲರ ಮನಸ್ಸಿಗೂ ಒಳ್ಳೆಯ ಭಾವನೆ ಕೊಡು ಎಂದು ಕೇಳಿಕೊಂಡಿದ್ದೇನೆ ಎನ್ನುವುದಾಗಿ ಮೈಸೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ‘ನಾಳೆ ನಮ್ಮ-ನಿಮ್ಮೆಲ್ಲರ ತಂಗಿ-ತಾಯಿಗೂ ಹೀಗಾಗಬಹುದು; ಎಚ್ಚೆತ್ತುಕೊಳ್ಳಿ’: ಮೈಸೂರು​ ಗ್ಯಾಂಗ್ ರೇಪ್​ಗೆ ಅದಿತಿ ಆಕ್ರೋಶ 

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣದಂತಹ ಘಟನೆ ಮುಂದೆಂದೂ ನಡೆಯಬಾರದು: ಎಡಿಜಿಪಿ ಪ್ರತಾಪ್ ರೆಡ್ಡಿ

(Mysuru boy statement to police on Gangrape)

Published On - 10:22 am, Fri, 27 August 21