ಕೇರಳದಲ್ಲಿ ನಿಫಾ ವೈರಸ್ ಹೆಚ್ಚಳ: ಮೈಸೂರಿನಲ್ಲಿ ಆರಂಭವಾಗದ ತಪಾಸಣೆ, ಚಾಮರಾಜನಗರದಲ್ಲಿ ಕಟ್ಟೆಚ್ಚರ

ಕೇರಳದಲ್ಲಿ ಬುಧವಾರ ಮತ್ತೊಂದು ನಿಫಾ ವೈರಸ್ ಪ್ರಕರಣ ಕಾಣಿಸಿಕೊಳ್ಳುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 5ಕ್ಕೆ ಏರಿದಂತಾಗಿದೆ. ನೆರೆಯ ರಾಜ್ಯದಲ್ಲಿ ಈ ವೈರಸ್ ಹೆಚ್ಚಾದ ಹಿನ್ನೆಲೆ ಗಡಿನಾಡು ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಕರ್ನಾಟಕ ಆರೋಗ್ಯ ಇಲಾಖೆ ಕಟ್ಟೆಚ್ಚರವಹಿಸಿದೆ. ಜಿಲ್ಲೆಗಳಿಗೆ ಎಂಟ್ರಿ ಕೊಡುತ್ತಿರುವ ಪ್ರತಿಯೊಂದು ವಾಹನಗಳನ್ನು ತಪಾಸಣೆ ನಡೆಸಲಾಗುತ್ತಿದ್ದು, ಪ್ರಯಾಣಿಕರ ಮಾಹಿತಿಗಳನ್ನೂ ಸಂಗ್ರಹಿಸಲಾಗುತ್ತಿದೆ.

ಕೇರಳದಲ್ಲಿ ನಿಫಾ ವೈರಸ್ ಹೆಚ್ಚಳ: ಮೈಸೂರಿನಲ್ಲಿ ಆರಂಭವಾಗದ ತಪಾಸಣೆ, ಚಾಮರಾಜನಗರದಲ್ಲಿ ಕಟ್ಟೆಚ್ಚರ
ಕೇರಳದಲ್ಲಿ ನಿಫಾ ವೈರಸ್ ಹೆಚ್ಚಳ ಹಿನ್ನೆಲೆ ಚಾಮರಾಜನಗರದಲ್ಲಿ ಕಟ್ಟೆಚ್ಚರವಹಿಸಲಾಗಿದ್ದು, ಮೈಸೂರಿನಲ್ಲಿ ತಪಾಸಣೆ ಇನ್ನೂ ಆರಂಭಿಸಿಲ್ಲ (ಸಾಂದರ್ಭಿಕ ಚಿತ್ರ)
Follow us
| Updated By: Rakesh Nayak Manchi

Updated on: Sep 14, 2023 | 2:52 PM

ಮೈಸೂರು, ಸೆ.14: ನೆರೆಯ ರಾಜ್ಯ ಕೇರಳದಲ್ಲಿ ನಿಫಾ ವೈರಸ್ (Nipah Virus) ಹೆಚ್ಚಾಗುತ್ತಿರುವ ಹಿನ್ನೆಲೆ ಗಡಿನಾಡು ಜಿಲ್ಲೆಯಾದ ಮೈಸೂರಿನಲ್ಲಿ (Mysuru) ಕಟ್ಟೆಚ್ಚರವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದ್ದರೂ ಕೇರಳದಿಂದ ರಾಜ್ಯಕ್ಕೆ ಎಂಟ್ರಿ ಕೊಡುತ್ತಿರುವವರನ್ನು ತಪಾಸಣೆ ನಡೆಸುಲು ಅಧಿಕಾರಿಗಳು ಮುಂದಾಗಿಲ್ಲ. ಮತ್ತೊಂದು ಗಡಿಭಾಗ ಚಾಮರಾಜನಗರದಲ್ಲಿ (Chamarajanagara) ರಾಜ್ಯಕ್ಕೆ ಎಂಟ್ರಿ ಕೊಡುವ ವಾಹನಗಳ ಮೇಲೆ ನಿಗಾ ಇರಿಸಲಾಗುತ್ತಿದೆ.

ಕೇರಳದಲ್ಲಿ ನಿಫಾ ವೈರಲ್ ಪ್ರಕರಣಗಳ ಸಂಖ್ಯೆಯಲ್ಲಿ ಏರುತ್ತಿದ್ದರೂ ಮೈಸೂರಿಗೆ ಹೆಚ್​ಡಿ ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್​​ನಲ್ಲಿ ಯಾವುದೇ ತಪಾಸಣೆ ನಡೆಸಲಾಗುತ್ತಿಲ್ಲ. ಈ ಗಡಿಯ ಮೂಲಕ ಸಾಕಷ್ಟು ವಾಹನಗಳು ರಾಜ್ಯಕ್ಕೆ ಎಂಟ್ರಿಯಾಗುತ್ತವೆ. ಹೀಗಾಗಿ ಗಡಿಯಲ್ಲಿ ತಪಾಸಣೆ ನಡೆಸಲು ಇಲಾಖೆ ಸೂಚನೆ ನೀಡಿದೆ.

ಇದನ್ನೂ ಓದಿ: ಕೇರಳದಲ್ಲಿ ನಿಫಾ ವೈರಸ್ ಪ್ರಕರಣಗಳ ಸಂಖ್ಯೆ ಐದಕ್ಕೆ ಏರಿಕೆ, ರೋಗಿಗಳ ಸಂಪರ್ಕಕ್ಕೆ ಬಂದಿರುವ 700 ಮಂದಿ ಪೈಕಿ 77 ಜನರಿಗೆ ಅಪಾಯ ಹೆಚ್ಚು

ಅದಾಗ್ಯೂ, ಅಧಿಕಾರಿಗಳು ಬಂದು ಸೂಚನೆ ನೀಡದ ಕಾರಣ ಯಾವುದೇ ತಪಾಸಣೆ ಪ್ರಾರಂಭವಾಗಿಲ್ಲ. ಥರ್ಮಲ್ ಸ್ಕ್ಯಾನ್ ಮಾಡುವುದು ಮತ್ತು ಕೇರಳದಿಂದ ಬರುವ ಪ್ರತಿಯೊಬ್ಬರ ಮೇಲೆ ನಿಗ ಇಡಲು ಕ್ರಮ ವಹಿಸುವುದಾಗಿ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಚಾಮರಾಜನಗರದಲ್ಲಿ ಕಟ್ಟೆಚ್ಚರ

ಚಾಮರಾಜನಗರ: ಕೇರಳದಲ್ಲಿ ನಿಫಾ ಸೋಂಕಿತರ ಪ್ರಕರಣ ಹೆಚ್ಚಾದ ಕಾರಣ ಚಾಮರಾಜನಗರದಲ್ಲಿ ಕಟ್ಟೆಚ್ಚರವಹಿಸಲಾಗಿದೆ. ಮೂಲೆಹೊಳೆ ಚೆಕ್ ಪೋಸ್ಟ್​ನಲ್ಲಿ ಅಲರ್ಟ್ ಆದ ಆರೋಗ್ಯ ಇಲಾಖಾ ಸಿಬ್ಬಂದಿ, ಕೇರಳದಿಂದ ಕರ್ನಾಟಕ ಪ್ರವೇಶಿಸುವ ಪ್ರತಿಯೊಂದು ವಾಹನ ಸವಾರರಿಗೆ ಥರ್ಮಲ್ ಸ್ಕ್ಯಾನಿಂಗ್ ನಡೆಸಲಾಗುತ್ತಿದೆ. ಗೂಡ್ಸ್ ವಾಹನಗಳನ್ನ ಸ್ಯಾನಿಟೈಸ್ ಮಾಡುತ್ತಿದ್ದಾರೆ.

ಕಳೆದ ಬಾರಿ ಕೇರಳದಿಂದ ಬಂದವರಿಂದಲೇ ಜಿಲ್ಲೆಯಲ್ಲಿ ಕೋವಿಡ್ ಹರಡಿತ್ತು. ಚಾಮರಾಜನಗರದಲ್ಲಿ ಪತ್ತೆಯಾದ ಸೋಂಕಿತನ ಟ್ರ್ಯಾವೆಲ್ ಹಿಸ್ಟರಿ ಸಹ ಕೇರಳದಿಂದಲೇ ಪತ್ತೆಯಾಗಿತ್ತು. ಈ ಹಿನ್ನಲೆ ಕೇರಳದಿಂದ ಬರುವ ವಾಹನ ಸವಾರರ ಮೇಲೆ ಆರೋಗ್ಯ ಇಲಾಖಾ ಸಿಬ್ಬಂದಿ ಹದ್ದಿನ ಕಣ್ಣಿಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು