ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಚುನಾವಣೆಯಲ್ಲಿ ಟ್ವಿಸ್ಟ್.. ಕೊನೆಯ ಕ್ಷಣದಲ್ಲಿ ಮೈತ್ರಿ ಮುರಿದ JDS

ಬಹು ನಿರೀಕ್ಷಿತ ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಗಿದೆ. ಕೊನೇ ಹಂತದಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧೆ ಮಾಡಲು ನಿರ್ಧರಿಸಿದೆ. ಮೇಯರ್ ಸ್ಥಾನಕ್ಕೆ ಜೆಡಿಎಸ್​ನ ರುಕ್ಮಿಣಿ ಮಾದೇಗೌಡ, ಉಪಮೇಯರ್ ಸ್ಥಾನಕ್ಕೆ ಸಮೀವುಲ್ಲಾ ನಾಮಪತ್ರ ಸಲ್ಲಿಸಲು ನಿರ್ಧರಿಸಿದ್ದಾರೆ.

  • TV9 Web Team
  • Published On - 9:49 AM, 24 Feb 2021
ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಚುನಾವಣೆಯಲ್ಲಿ ಟ್ವಿಸ್ಟ್.. ಕೊನೆಯ ಕ್ಷಣದಲ್ಲಿ ಮೈತ್ರಿ ಮುರಿದ JDS
ಹೆಚ್.ಡಿ ಕುಮಾರಸ್ವಾಮಿ

ಮೈಸೂರು: ಬಹು ನಿರೀಕ್ಷಿತ ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಗಿದೆ. ಕೊನೇ ಹಂತದಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧೆ ಮಾಡಲು ನಿರ್ಧರಿಸಿದೆ. ಮೇಯರ್ ಸ್ಥಾನಕ್ಕೆ ಜೆಡಿಎಸ್​ನ ರುಕ್ಮಿಣಿ ಮಾದೇಗೌಡ, ಉಪಮೇಯರ್ ಸ್ಥಾನಕ್ಕೆ ಸಮೀವುಲ್ಲಾ ನಾಮಪತ್ರ ಸಲ್ಲಿಸಲು ನಿರ್ಧರಿಸಿದ್ದಾರೆ. ಪಕ್ಷೇತರರ ಸಹಾಯದಿಂದ ಅಧಿಕಾರ ಹಿಡಿಯಲು ಕಾರ್ಯತಂತ್ರ ಹೆಣೆಯಲಾಗುತ್ತಿದೆ. ಬಿಜೆಪಿ, ಕಾಂಗ್ರೆಸ್​ನಿಂದ ಜೆಡಿಎಸ್ ಅಂತರ ಕಾಯ್ದುಕೊಂಡಿದೆ. ಕೊನೆಯ ಕ್ಷಣದಲ್ಲಿ ಮೈತ್ರಿ ಮುರಿದು ಬಿದ್ದಿದೆ. ಸದ್ಯ ಈಗ ಮೇಯರ್ ಚುನಾವಣೆ ಭಾರಿ ಕುತೂಹಲಕ್ಕೆ ಕಾರಣವಾಗಿದೆ.

ಈ ಚುನಾವಣೆಯಲ್ಲಿ JDS​ ಸ್ವತಂತ್ರವಾಗಿ ಸ್ಪರ್ಧಿಸಲಿದೆ
ಈ ಚುನಾವಣೆಯಲ್ಲಿ JDS​ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ. ಮೈಸೂರು ಪಾಲಿಕೆಯಲ್ಲಿ ನಮ್ಮ ಶಕ್ತಿಯನ್ನು ತೋರಿಸ್ತೇವೆ. ಜೆಡಿಎಸ್ ಬಗ್ಗೆ ಸಿದ್ದರಾಮಯ್ಯ ಲಘುವಾಗಿ ಪರಿಗಣಿಸಿದ್ದಾರೆ. ಮೈಸೂರಿನಲ್ಲಿ ಜೆಡಿಎಸ್ ಶಕ್ತಿ ಏನೆಂದು ತೋರಿಸಲು ಈ ಸ್ಪರ್ಧೆ ನಡೆಯುತ್ತಿದೆ. JDS, ಕಾಂಗ್ರೆಸ್ ಮೈತ್ರಿ ಮುರಿಯಲು ಸಿದ್ದರಾಮಯ್ಯ ಕಾರಣ. ಜೆಡಿಎಸ್ ಪಕ್ಷವೇ ಅಲ್ಲ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಸಿದ್ದರಾಮಯ್ಯಗೆ ಮನವರಿಕೆ ಮಾಡಿಕೊಡಲು ನಿರ್ಧಾರ ಮಾಡಿದ್ದೇವೆ. ಪದೇಪದೆ ನಮ್ಮ ಪಕ್ಷದ ಬಗ್ಗೆ ಕೆಣಕಿ ಹೇಳಿಕೆ ನೀಡುತ್ತಾರೆ. ಜಿಟಿಡಿ, ಸಂದೇಶ್ ನಾಗರಾಜ್ ಜೆಡಿಎಸ್​ಗೆ ಮತ ಹಾಕ್ತಾರೆ. ಡಿಕೆಶಿ ನನ್ನ ಜತೆ ಮಾತಾಡದಂತೆ ಒತ್ತಡ ಹಾಕಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

ನಾನು ಇಲ್ಲಿ ಯಾರಿಗೂ ಸವಾಲು ಹಾಕಲು ಬಂದಿಲ್ಲ. ನಾವು ಕಿಂಗ್‌ಮೇಕರ್ ಆಗಲು ಬಯಸುತ್ತಿಲ್ಲ. ನಮ್ಮದೇನಿದ್ದರೂ 2023ರ ಚುನಾವಣೆಯೇ ಗುರಿಯಾಗಿದೆ. ಹೀಗಾಗಿ ಕಾಂಗ್ರೆಸ್​, ಬಿಜೆಪಿಯಿಂದ ಅಂತರ ಕಾಯ್ದುಕೊಳ್ಳುತ್ತಿದ್ದೇವೆ. ರಾಜ್ಯವನ್ನು ಬಿಜೆಪಿ ಸರ್ಕಾರ ಲಘುವಾಗಿ ಪರಿಗಣಿಸುತ್ತಿದೆ. ದೇವೇಗೌಡರು ಸಮಾನ ಅಂತರ ಕಾಯ್ದುಕೊಳ್ಳಲು ಹೇಳಿದ್ದಾರೆ. ಅಧಿಕಾರ ಸಿಗದಿದ್ದರೂ ಪರವಾಗಿಲ್ಲ, ಅಂತರವಿರಲಿ ಎಂದಿದ್ದಾರೆ ಎಂದು ತಿಳಿಸಿದ್ದಾರೆ.

ಮೈಸೂರು ಮಹಾನಗರ ಪಾಲಿಕೆ ಸದಸ್ಯ ಬಲ 73. 25 ಸದಸ್ಯಾ ಬಲ ಹೊಂದಿರುವ ಬಿಜೆಪಿ. ಬಿಜೆಪಿಗೆ 22 ಪಾಲಿಕೆ ಸದಸ್ಯರು, ಲೋಕಸಭಾ ಸದಸ್ಯ, ಇಬ್ಬರು ವಿಧಾನಸಭಾ ಸದಸ್ಯರು. ಕಾಂಗ್ರೆಸ್ 20 ಮಂದಿ ಸದಸ್ಯರನ್ನು ಹೊಂದಿದೆ. 19 ಪಾಲಿಕೆ ಸದಸ್ಯರು, ವಿಧಾನಸಭಾ ಸದಸ್ಯ. ಜೆಡಿಎಸ್ 22 ಸದಸ್ಯ ಬಲ ಹೊಂದಿದೆ. 18 ಪಾಲಿಕೆ ಸದಸ್ಯರು, ವಿಧಾನಸಭಾ ಸದಸ್ಯ, ಮೂವರು ವಿಧಾನ ಪರಿಷತ್ ಸದಸ್ಯರು. ಬಿಎಸ್‌ಪಿ ಓರ್ವ ಪಾಲಿಕೆ ಸದಸ್ಯೆ. ಪಕ್ಷೇತರರು 5 ಪಾಲಿಕೆ ಸದಸ್ಯರು. ಬಹುಮತ ಸಾಬೀತುಪಡಿಸಲು ಮ್ಯಾಜಿಕ್ ನಂಬರ್ 37. ಯಾವುದೇ ಪಕ್ಷಕ್ಕೆ ಬಹುಮತ ಬಾರದ ಹಿನ್ನೆಲೆಯಲ್ಲಿ ಪಾಲಿಕೆಯಲ್ಲಿ ಮೈತ್ರಿ ಅನಿವಾರ್ಯ. ಕಳೆದ ಬಾರಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿತ್ತು. ಆದ್ರೆ ಈ ಬಾರಿ JDS ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಒಲವು ತೋರಿಸಿತ್ತು. ಆದರೆ ಕೊನೇ ಕ್ಷಣದಲ್ಲಿ ಮೈತ್ರಿಯಿಂದ ಹಿಂದೆ ಸರಿದಿದೆ.

ಇದನ್ನೂ ಓದಿ: ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಚುನಾವಣೆ: BJP, JDS ಮೈತ್ರಿ ಬಹುತೇಕ ಖಚಿತ