ಹನಿಟ್ರ್ಯಾಪ್​ ಜಾಲಕ್ಕೆ ಬೀಳಿಸಿ ವಸೂಲಿ ಮಾಡ್ತಿದ್ದ ಜೋಡಿ ಲಾಡ್ಜ್​​ ನಲ್ಲಿ ಸಿಕ್ಕಿಬಿತ್ತು

ಬಟ್ಟೆ ಅಂಗಡಿ ಮಾಲೀಕನಿಗೆ ಹನಿಟ್ರ್ಯಾಪ್ ಮಾಡಿ ತಲೆ ಮರೆಸಿಕೊಂಡಿದ್ದ ಯುವ ಜೋಡಿಯನ್ನ ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಸುಂದರ ಯುವತಿಯನ್ನ ಮುಂದೆ ಬಿಟ್ಟು ಟ್ರ್ಯಾಪ್ ಮಾಡುತ್ತಿದ್ದ ಇಬ್ಬರನ್ನ ಕೇರಳದ ಕಣ್ಣೂರಿನ ಲಾಡ್ಜ್​ ನಲ್ಲಿ ಆರೋಪಿಗಳನ್ನು ಬಂಧನ ಮಾಡಲಾಗಿದೆ. ಇನ್ನು ಈ ಹನಿ ಗ್ಯಾಂಗ್​ ನಲ್ಲಿ ಹುಣಸೂರು ಪೊಲೀಸ್ ಕಾನ್ಸ್​ ಟೇಬಲ್ ಸಹ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.

ಹನಿಟ್ರ್ಯಾಪ್​ ಜಾಲಕ್ಕೆ ಬೀಳಿಸಿ ವಸೂಲಿ ಮಾಡ್ತಿದ್ದ ಜೋಡಿ ಲಾಡ್ಜ್​​ ನಲ್ಲಿ ಸಿಕ್ಕಿಬಿತ್ತು
Kavya
Updated By: ರಮೇಶ್ ಬಿ. ಜವಳಗೇರಾ

Updated on: Jul 20, 2025 | 4:51 PM

ಮೈಸೂರು, (ಜುಲೈ 20): ಜಿಲ್ಲೆಯ ಪಿರಿಯಾಪಟ್ಟಣದ ಕಂಪಲಾಪುರದ ಬಟ್ಟೆ ಅಂಗಡಿ ಮಾಲೀಕ (Cloth vendor) ದಿನೇಶ್ ಕುಮಾರ್​ ಗೆ ಹನಿಟ್ರ್ಯಾಪ್ (honeytrap) ಮಾಡಿ ಪರಾರಿಯಾಗಿದ್ದ ಜೋಡಿಯನ್ನು ಬಂಧಿಸುವಲ್ಲಿ ಬೈಲಕುಪ್ಪೆ ಪೊಲೀಸರು ಯಶಸ್ವಿಯಾಗಿದ್ದಾರೆ. ಹನಿಟ್ರ್ಯಾಪ್ ಮಾಡಿ ತಲೆಮರೆಸಿಕೊಂಡಿದ್ದ ಕವನ ಹಾಗೂ ಸೈಫ್ ಎನ್ನುವರನ್ನು ಕೇರಳದ (Kerala) ಕಣ್ಣೂರಿನ ಲಾಡ್ಜ್​ ನಲ್ಲಿ ಸಿಕ್ಕಿಬಿದ್ದಿದ್ದಾರೆ. ಪ್ರಕರಣ ಸಂಬಂಧ ಬೈಲಕುಪ್ಪೆ ಠಾಣೆಯಲ್ಲಿ ಕೇಸ್​​ ದಾಖಲಾಗಿದ್ದು, ಯುವತಿ ಸೇರಿದಂತೆ ಆರೋಪಿ ಮೂರ್ತಿಯನ್ನ ಅರೆಸ್ಟ್​​ ಮಾಡಿದ್ದಾರೆ. ಇದಕ್ಕೂ ಮುನ್ನ ಇದೇ ಹನಿಟ್ರ್ಯಾಪ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕೃತ್ಯದಲ್ಲಿ ಭಾಗಿಯಾಗಿದ್ದ ಹುಣಸೂರು ಠಾಣೆ ಕಾನ್ಸ್​ ಟೇಬಲ್ ಶಿವಣ್ಣನನ್ನ ಅರೆಸ್ಟ್​ ಜೈಲಿಗಟ್ಟಿದ್ದಾರೆ.

ಕಳೆದ ಒಂದು ತಿಂಗಳ ಹಿಂದೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನಲ್ಲಿ ಕಂಪಲಾಪುರದ ಬಟ್ಟೆ ಅಂಗಡಿ ಮಾಲೀಕ ದಿನೇಶ್ ಕುಮಾರ್​ ನನ್ನು ಹನಿಟ್ರ್ಯಾಪ್ ಬಲೆಗೆ ಬೀಳಿಸಿ ಕವನ ಹಾಗೂ ಸೈಫ್ ಜೋಡಿ 10 ಲಕ್ಷ ರೂ.ಗೆ ಬೇಡಿಕೆ ಇಟ್ಟಿತ್ತು. ಈ ಸಂಬಂಧದಿನೇಶ್ ಕುಮಾರ್ ಬೈಲಕುಪ್ಪೆ ಠಾಣೆಗೆ ದೂರು ನೋಡಿದ್ದರು. ಬಳಿಕ ಕಾರ್ಯಚರಣೆ ನಡೆಸಿದ ಪೊಲೀಸರು, ಹನಿಟ್ರ್ಯಾಪ್​ ಪ್ರಕರಣದಲ್ಲಿ ಭಾಗಿಯಾಗಿದ್ದ ಪೊಲೀಸ್​​ ಪೇದೆ ಶಿವಣ್ಣ, ಆನಂದ್ ಹಾಗೂ ಮೂರ್ತಿಯನ್ನು ಬಂಧಿಸಿದ್ದರು. ಆದ್ರೆ, ಹನಿಟ್ರ್ಯಾಪ್​ ನ ಕಿಂಗ್ ಪಿನ್ ಗಳಾಗಿದ್ದ ಕವನ, ಸೈಫ್ ತಲೆಮರೆಸಿಕೊಂಡಿದ್ದರು.

ಇದನ್ನೂ ಓದಿ: 112ಗೆ ಕರೆ ಮಾಡಿದ್ದ ಮಹಿಳೆಯನ್ನೇ ಬಲೆಗೆ ಬೀಳಿಸಿಕೊಂಡು ಪೊಲೀಸಪ್ಪನ ಪೋಲಿ ಆಟ

ಪೊಲೀಸರಿಗೆ ಚೆಳ್ಳೆ ಹಣ್ಣು ತಿನ್ನಿಸಿಕೊಂಡು ಓಡಾಡಿಕೊಂಡಿದ್ದ ಕವನ ಮತ್ತು ಸೈಫ್ ಆರೋಪಿಗಳನ್ನು ಎಸ್​ಪಿ ವಿಷ್ಣುವರ್ಧನ್ ಮಾರ್ಗದರ್ಶನದಲ್ಲಿ ಬೈಲಕುಪ್ಪೆ ಪಿಎಸ್ಐ ರವಿಕುಮಾರ್, ಸಿಬ್ಬಂದಿಗಳಾದ ವಿಜಯ ಪವರ್, ಮುದ್ದುರಾಜ್, ಮಹಿಳಾ ಪೊಲೀಸ್ ಪೇದೆ ಅಶ್ವಿತಾ ಕಾರ್ಯಚರಣೆಯಲ್ಲಿ ಭಾಗಿಯಾಗಿದ್ದರು. ಸದ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೈಲಕುಪ್ಪೆ ವ್ಯಾಪ್ತಿಯಲ್ಲಿ ಹನಿ ಟ್ರ್ಯಾಪ್ ಮಾಡಿದ ಸ್ಥಳಗಳಿಗೆ ಆರೋಪಿಗಳನ್ನು ಬೈಲಿಕುಪ್ಪೆ ಪೊಲೀಸರು ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ