AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಮಗಳ ಅಶ್ಲೀಲ ವಿಡಿಯೋ ವೈರಲ್; ಕಾಂಗ್ರೆಸ್ ಮುಖಂಡನ ವಿರುದ್ಧ ತಂದೆ ದೂರು, ಎಫ್​ಐಆರ್​ ದಾಖಲು

ಮೈಸೂರಿನ ಕೆಆರ್. ನಗರದ ಕಾಂಗ್ರೆಸ್ ಮುಖಂಡನದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು, ಮಹಿಳೆಯ ತಂದೆ ಸೈಬರ್ ಕ್ರೈಂನಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ವೈಯಕ್ತಿಕ ಲಾಭಕ್ಕಾಗಿ ವಿಡಿಯೋ ಹರಿಬಿಟ್ಟಿದ್ದು, ಕೊಲೆ ಬೆದರಿಕೆ ಆರೋಪ ಕೂಡ ಕೇಳಿಬಂದಿದೆ. ಇತ್ತ ಪ್ರಕರಣ ದಾಖಲಾಗುತ್ತಿದ್ದಂತೆ ಕಾಂಗ್ರೆಸ್​ ಮುಖಂಡ ಪರಾರಿಯಾಗಿದ್ದಾರೆ.

ಮೈಸೂರು: ಮಗಳ ಅಶ್ಲೀಲ ವಿಡಿಯೋ ವೈರಲ್; ಕಾಂಗ್ರೆಸ್ ಮುಖಂಡನ ವಿರುದ್ಧ ತಂದೆ ದೂರು, ಎಫ್​ಐಆರ್​ ದಾಖಲು
ಪ್ರಾತಿನಿಧಿಕ ಚಿತ್ರ
ರಾಮ್​, ಮೈಸೂರು
| Updated By: ಗಂಗಾಧರ​ ಬ. ಸಾಬೋಜಿ|

Updated on:Oct 18, 2025 | 10:23 AM

Share

ಮೈಸೂರು, ಅಕ್ಟೋಬರ್​ 18: ಕೆ.ಆರ್.ನಗರ ತಾಲೂಕು ಕಾಂಗ್ರೆಸ್ ಮುಖಂಡ (Congress Leader) ಲೋಹಿತ್ ಅಲಿಯಾಸ್​​ ರಾಜಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಯೊಂದು ವೈರಲ್​​ ಆಗಿರುವಂತಹ ಘಟನೆ ನಡೆದಿದೆ. ವೈಯಕ್ತಿಕ ಲಾಭಕ್ಕಾಗಿ ಮಗಳೊಂದಿಗಿನ ಅಶ್ಲೀಲ ವಿಡಿಯೋ ಹರಿಬಿಟ್ಟಿದ್ದಾಗಿ ತಂದೆ (father) ದೂರು ನೀಡಿದ್ದು, ಕಾಂಗ್ರೆಸ್ ಮುಖಂಡ ವಿರುದ್ಧ ನಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್​ ದಾಖಲಾಗಿದೆ.

ಎಫ್​​ಐಆರ್​ನಲ್ಲಿ ಏನಿದೆ?

ಅ. 16ರಂದು ರಾತ್ರಿ 9:20 ಗಂಟೆಗೆ ಸೋಮೇಗೌಡ ಬಿನ್ ಲೇಟ್ ಮಲೆಗೌಡ ಎಂಬುವರ ದೂರಿನ ಸಾರಾಂಶವೆನೆಂದರೆ, ನಾನು ವ್ಯವಸಾಯ ಕಸುಬನ್ನು ಮಾಡಿಕೊಂಡಿರುತ್ತೇನೆ. ನನಗೆ ಇಬ್ಬರು ಮಕ್ಕಳಿದ್ದಾರೆ. ಮೂರು ತಿಂಗಳ ಹಿಂದೆ ಹೊಳೆನರಸೀಪುರ ತಾಲೂಕಿನ ಮರಹಳ್ಳಿ ಗ್ರಾಮದ ವ್ಯಕ್ತಿ ಜೊತೆಗೆ ಮಗಳ ಮದುವೆ ಮಾಡಿರುತ್ತೇನೆ. ನನ್ನ ಮಗಳು ಮತ್ತು ಅಳಿಯ ಅನ್ಯೂನ್ಯವಾಗಿದ್ದರು.

ಇದನ್ನೂ ಓದಿ: ಪರಸ್ತ್ರೀಯರ ಜೊತೆ ಪತಿ ಸರಸ ಸಲ್ಲಾಪ: ಗಂಡನ ರಾಸಲೀಲೆ ವಿಡಿಯೋ ನೋಡಿ ಹೆಂಡ್ತಿ ಶಾಕ್

ದೀಪಾವಳಿ ಹಬ್ಬದ ಹಿನ್ನೆಲೆ ನನ್ನ ಮಗಳು ನಮ್ಮ ಮನೆಗೆ ಬಂದಿದ್ದಳು. ಹೀಗಿರುವಾಗ ಅ 16ರಂದು ಬೆಳಿಗ್ಗೆ 10 ಗಂಟೆಗೆ ನನ್ನ ಸಂಬಂಧಿಕರು ನಮ್ಮ ಜಮೀನಿನ ಬಳಿ ಸಿಕ್ಕು, ನಿಮ್ಮ ಮಗಳು ಮತ್ತು ನಿಮ್ಮೂರಿನ ಲೋಹಿತ್​​ ಅಲಿಯಾಸ್​ ರಾಜಿ ಇಬ್ಬರ ಅಶ್ಲೀಲ ವಿಡಿಯೋ ಮಲ್ಲಿಕಾರ್ಜುನ ಎಂಬುವವರ ವಾಟ್ಸಾಪ್​​ ನಂಬರ್​ಗೆ ಬಂದಿದ್ದು, ಆತನು ನನ್ನ ವಾಟ್ಸಾಪ್​​ ನಂಬರ್​ಗೆ ಕಳುಹಿಸಿದ್ದು, ಏನೆಂದು ವಿಡಿಯೋ ನೋಡಲಾಗಿ ಅದು ನಿಮ್ಮ ಮಗಳ ಮತ್ತು ಲೋಹಿತ್​ ಅಶ್ಲೀಲ ವಿಡಿಯೋ ಆಗಿತ್ತು. ಬಳಿಕ ಡಿಲೀಟ್​ ಮಾಡಿರುವುದಾಗಿ ನನಗೆ ಹೇಳಿದ್ದಾರೆ.

ನಮಗೂ ನಮ್ಮೂರಿನ ಲೋಹಿತ್​​ ಎಂಬುವನಿಗೂ ಜಮೀನು ದಾರಿ ವಿಚಾರವಾಗಿ ಆಗಾಗ ಗಲಾಟೆಯಾಗಿದ್ದು, ನಿನಗೆ ಮತ್ತು ನಿಮ್ಮ ಕುಟುಂಬಕ್ಕೆ ಒಂದು ಗತಿ ಕಾಣಿಸುತ್ತೇನೆ ನೋಡು, ಒಂದಲ್ಲ ಒಂದು ದಿನ ನಿಮ್ಮನ್ನು ಕೊಲೆ ಮಾಡದೇ ಬಿಡುವುದಿಲ್ಲವೆಂದು ಪದೇ ಪದೇ ಹೇಳುತ್ತಿದ್ದನು.

ಇದನ್ನೂ ಓದಿ: ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ವಿದ್ಯಾರ್ಥಿಯ ಬಂಧನ

ಈ ದ್ವೇಷದಿಂದ ನನ್ನ ಮಗಳ ಮತ್ತು ನಮ್ಮ ಕುಟುಂಬದ ಮಾನಮರ್ಯಾದೆಯನ್ನು ಬೀದಿ ಪಾಲು ಮಾಡುವ ಉದ್ದೇಶದಿಂದ ನನ್ನ ಮಗಳೊಂದಿಗೆ ತೋಡಗಿದ ವಿಡಿಯೋವನ್ನು ಮೊಬೈಲ್​​ನಲ್ಲಿ ರೆಕಾರ್ಡ್ ಮಾಡಿಕೊಂಡು ಎಲ್ಲರಿಗೂ ವಾಟ್ಸಾಪ್​​ನಲ್ಲಿ ಕಳುಹಿಸಿ, ನನ್ನ ಮಗಳ ಮತ್ತು ನಮ್ಮ ಸಂಸಾರವನ್ನು ಹಾಳು ಮಾಡಿರುತ್ತಾನೆ. ಆದ್ದರಿಂದ ಲೋಹಿತ್ ಅಲಿಯಾಸ್​ ರಾಜಿ ಎಂಬುವನ ಮೇಲೆ ಕಾನೂನು ಕ್ರಮ ಜರುಗಿಸಿ ನನಗೆ ಮತ್ತು ನನ್ನ ಮಗಳಿಗೆ ನ್ಯಾಯ ಕೊಡಿಸುವಂತೆ ತಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:22 am, Sat, 18 October 25