ಮೈಸೂರು: ಕಾಲೇಜಿನಲ್ಲಿ ಪ್ರಜ್ಞೆತಪ್ಪಿ ಬಿದ್ದು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

ದ್ವಿತೀಯ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿ ನಮಿತಾ ಕಾಲೇಜಿನಲ್ಲಿ ನಡೆದ ಡ್ಯಾನ್ಸ್​ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಳು. ಡ್ಯಾನ್ಸ್ ಬಳಿಕ ಕಾಲೇಜಿನಲ್ಲೇ ಪ್ರಜ್ಞೆತಪ್ಪಿ ಬಿದ್ದಿದ್ದಾಳೆ.

ಮೈಸೂರು: ಕಾಲೇಜಿನಲ್ಲಿ ಪ್ರಜ್ಞೆತಪ್ಪಿ ಬಿದ್ದು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು
ನಮಿತಾ
Follow us
TV9 Web
| Updated By: ಆಯೇಷಾ ಬಾನು

Updated on: Feb 17, 2023 | 8:09 AM

ಮೈಸೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನಮಿತಾ(16) ಅನುಮಾನಾಸ್ಪದ ರೀತಿಯಲ್ಲಿ ಕಾಲೇಜಿನಲ್ಲಿ ಪ್ರಜ್ಞೆತಪ್ಪಿ ಬಿದ್ದು ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಟಿ.ನರಸೀಪುರ ಪಟ್ಟಣದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿ ನಮಿತಾ ಕಾಲೇಜಿನಲ್ಲಿ ನಡೆದ ಡ್ಯಾನ್ಸ್​ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಳು. ಡ್ಯಾನ್ಸ್ ಬಳಿಕ ಕಾಲೇಜಿನಲ್ಲೇ ಪ್ರಜ್ಞೆತಪ್ಪಿ ಬಿದ್ದಿದ್ದಾಳೆ. ಕೂಡಲೇ ಕಾಲೇಜು ಸಿಬ್ಬಂದಿ ವಿದ್ಯಾರ್ಥಿನಿಯನ್ನ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದ್ರೆ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯೆ ನಮಿತಾ ಸಾವನ್ನಪ್ಪಿದ್ದಾರೆ. ಟಿ.ನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಅಪರಿಚಿತ ವಾಹನ ಡಿಕ್ಕಿಯಾಗಿ ಗಾಯಗೊಂಡಿದ್ದ ಚಿರತೆ ಮರಿ ಸಾವು

ಚಿಕ್ಕಬಳ್ಳಾಫುರದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಚಿರತೆ ಬಲಿಯಾಗಿದೆ. ಚಿಕ್ಕಬಳ್ಳಾಪುರ ತಾಲೂಕಿನ ಕಣಿವೆ ಬಸವಣ್ಣ ದೇಗುಲ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಚಿರತೆ ಮರಿ ಮೃತಪಟ್ಟಿದೆ. ಚಿರತೆ ಮರಿಗೆ ವಾಹನ ಡಿಕ್ಕಿ ಹೊಡೆದಿದ್ದು ಘಟನೆ ಬಳಿಕ ಸ್ಥಳಕ್ಕೆ ಅಧಿಕಾರಿಗಳು ಬಂದು ಚಿರತೆ ಮರಿಯನ್ನು ಕಾಪಾಡಬೇಕಿತ್ತು. ಆದ್ರೆ ಘಟನೆ ನಡೆದು ಎಷ್ಟೂ ಸಮಯ ಮೀರಿದರೂ ಅಧಿಕಾರಿಗಳೂ ಮಾತ್ರ ಪತ್ತೆ ಇಲ್ಲ. ಇದರಿಂದ ಅಪಘಾತದಲ್ಲಿ ಗಾಯಗೊಂಡಿದ್ದ ಮರಿ ಚಿರತೆ ಕೆಲ ಗಂಟೆಗಳ ಕಾಲ ನಡು ರಸ್ತೆಯಲ್ಲೇ ನರಳಾಡಿದೆ. ಒದ್ದಾಡಿ ಕೊನೆಗೆ ಪ್ರಾಣ ಬಿಟ್ಟಿದೆ. ಕೆಲಕಾಲ ನಡುರಸ್ತೆಯಲ್ಲೇ ಚಿರತೆ ಮರಿಯ ಕಳೇಬರಹ ಬಿದ್ದಿದ್ದು ಬಳಿಕ ಚಿರತೆ ಮರಿ ಕಳೇಬರಹವನ್ನು ಸವಾರರು ರಸ್ತೆ ಪಕ್ಕಕ್ಕೆ ಎಳೆದು ಹಾಕಿದ್ದಾರೆ. ಚಿರತೆ ಮರಿಗೆ ವಾಹನ ಡಿಕ್ಕಿಯಾದ್ರೂ ಸ್ಥಳಕ್ಕೆ ಬಾರದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ