ಮೈಸೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನಮಿತಾ(16) ಅನುಮಾನಾಸ್ಪದ ರೀತಿಯಲ್ಲಿ ಕಾಲೇಜಿನಲ್ಲಿ ಪ್ರಜ್ಞೆತಪ್ಪಿ ಬಿದ್ದು ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಟಿ.ನರಸೀಪುರ ಪಟ್ಟಣದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿ ನಮಿತಾ ಕಾಲೇಜಿನಲ್ಲಿ ನಡೆದ ಡ್ಯಾನ್ಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಳು. ಡ್ಯಾನ್ಸ್ ಬಳಿಕ ಕಾಲೇಜಿನಲ್ಲೇ ಪ್ರಜ್ಞೆತಪ್ಪಿ ಬಿದ್ದಿದ್ದಾಳೆ. ಕೂಡಲೇ ಕಾಲೇಜು ಸಿಬ್ಬಂದಿ ವಿದ್ಯಾರ್ಥಿನಿಯನ್ನ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದ್ರೆ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯೆ ನಮಿತಾ ಸಾವನ್ನಪ್ಪಿದ್ದಾರೆ. ಟಿ.ನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಚಿಕ್ಕಬಳ್ಳಾಫುರದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಚಿರತೆ ಬಲಿಯಾಗಿದೆ. ಚಿಕ್ಕಬಳ್ಳಾಪುರ ತಾಲೂಕಿನ ಕಣಿವೆ ಬಸವಣ್ಣ ದೇಗುಲ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಚಿರತೆ ಮರಿ ಮೃತಪಟ್ಟಿದೆ. ಚಿರತೆ ಮರಿಗೆ ವಾಹನ ಡಿಕ್ಕಿ ಹೊಡೆದಿದ್ದು ಘಟನೆ ಬಳಿಕ ಸ್ಥಳಕ್ಕೆ ಅಧಿಕಾರಿಗಳು ಬಂದು ಚಿರತೆ ಮರಿಯನ್ನು ಕಾಪಾಡಬೇಕಿತ್ತು. ಆದ್ರೆ ಘಟನೆ ನಡೆದು ಎಷ್ಟೂ ಸಮಯ ಮೀರಿದರೂ ಅಧಿಕಾರಿಗಳೂ ಮಾತ್ರ ಪತ್ತೆ ಇಲ್ಲ. ಇದರಿಂದ ಅಪಘಾತದಲ್ಲಿ ಗಾಯಗೊಂಡಿದ್ದ ಮರಿ ಚಿರತೆ ಕೆಲ ಗಂಟೆಗಳ ಕಾಲ ನಡು ರಸ್ತೆಯಲ್ಲೇ ನರಳಾಡಿದೆ. ಒದ್ದಾಡಿ ಕೊನೆಗೆ ಪ್ರಾಣ ಬಿಟ್ಟಿದೆ. ಕೆಲಕಾಲ ನಡುರಸ್ತೆಯಲ್ಲೇ ಚಿರತೆ ಮರಿಯ ಕಳೇಬರಹ ಬಿದ್ದಿದ್ದು ಬಳಿಕ ಚಿರತೆ ಮರಿ ಕಳೇಬರಹವನ್ನು ಸವಾರರು ರಸ್ತೆ ಪಕ್ಕಕ್ಕೆ ಎಳೆದು ಹಾಕಿದ್ದಾರೆ. ಚಿರತೆ ಮರಿಗೆ ವಾಹನ ಡಿಕ್ಕಿಯಾದ್ರೂ ಸ್ಥಳಕ್ಕೆ ಬಾರದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ