AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alert: ಬ್ಯಾಂಕ್ ಮ್ಯಾನೇಜರ್ ಎಂದು ಪರಿಚಯಿಸಿಕೊಂಡು ಡೆಬಿಟ್ ಕಾರ್ಡ್​ ವಿವರ ಪಡೆದು 99,999 ರೂ ವಂಚನೆ

ಡೆಬಿಟ್ ಕಾರ್ಡ್‌ನ ಸಂಪೂರ್ಣ ಮಾಹಿತಿ ಪಡೆದುಕೊಂಡ ವಂಚಕರು ಖಾತೆಯಲ್ಲಿದ್ದ ಹಣವನ್ನು ಡ್ರಾ ಮಾಡಿಕೊಂಡಿದ್ದಾರೆ.

Alert: ಬ್ಯಾಂಕ್ ಮ್ಯಾನೇಜರ್ ಎಂದು ಪರಿಚಯಿಸಿಕೊಂಡು ಡೆಬಿಟ್ ಕಾರ್ಡ್​ ವಿವರ ಪಡೆದು 99,999 ರೂ ವಂಚನೆ
ಎಚ್ಚರ
TV9 Web
| Updated By: guruganesh bhat|

Updated on:Sep 19, 2021 | 3:08 PM

Share

ಮೈಸೂರು: ಬ್ಯಾಂಕ್ ಮ್ಯಾನೇಜರ್ ಎಂದು ಹೇಳಿ ಗುಜರಿ ವ್ಯಾಪಾರಿ ಬಷೀರ್ ಅಹ್ಮದ್ ಎಂಬುವವರಿಗೆ 99,999 ರೂಪಾಯಿ ಲಕ್ಷ ವಂಚನೆ ಎಸಗಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಈ ಘಟನೆ ನಡೆದಿದ್ದು, ಬಷೀರ್ ಅಹ್ಮದ್ ಅವರ ಮೊಬೈಲ್ಗೆ ಕರೆಮಾಡಿ ಡೆಬಿಟ್ ಕಾರ್ಡ್ ಮಾಹಿತಿ ಪಡೆದು ಮೋಸ ಎಸಗಲಾಗಿದೆ. ವಂಚಕ ಮೊದಲು ₹49,999 ಪಡೆದುಕೊಂಡಿದ್ದ. ಆನಂತರ ಮತ್ತೊಮ್ಮೆ 50 ಸಾವಿರ ಹಣ ಡ್ರಾ ಮಾಡಿಕೊಂಡಿದ್ದ. ಪ್ರಕರಣಕ್ಕೆ ಸಂಬಂಧಿಸಿದ ಮೈಸೂರಿನ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಷೀರ್ ಅಹಮದ್ ನಂಜನಗೂಡಿನ ನೀಲಕಂಠನಗರದಲ್ಲಿ ಗುಜರಿ ವ್ಯಾಪಾರ ಮಾಡುತ್ತಾರೆ. ಅವರ ಮೊಬೈಲ್ ಮೂಲಕ ಬಷೀರ್ ಅಹಮದ್‌ರ ಪತ್ನಿ ಷಹಜಹಾನ್ ಅವರನ್ನು ಸಂಪರ್ಕಿಸಿದ ವಂಚಕರು ಮೋಸ ಎಸಗಿದ್ದಾರೆ. ಡೆಬಿಟ್ ಕಾರ್ಡ್‌ನ ಸಂಪೂರ್ಣ ಮಾಹಿತಿ ಪಡೆದುಕೊಂಡ ವಂಚಕರು ಖಾತೆಯಲ್ಲಿದ್ದ ಹಣವನ್ನು ಡ್ರಾ ಮಾಡಿಕೊಂಡಿದ್ದಾರೆ. ಈಕುರಿತು ದೂರು ದಾಖಲಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಬೈಕ್ ಸವಾರ ಮೇಲೆ ಹಲ್ಲೆ; ಆರೋಪಿಗಳ ಬಂಧನ ಬೆಂಗಳೂರು: ಮಹಿಳೆ ಜತೆ ಪ್ರಯಾಣಿಸುತ್ತಿದ್ದ ಬೈಕ್ ಸವಾರನ ನಿಂದನೆ ಮತ್ತು ಹಲ್ಲೆ ಪ್ರಕರಣದ ಆರೋಪಿಗಳನ್ನು ಬಂಧಿಸಲಾಗಿದೆ. ಹಲ್ಲೆ ವಿಡಿಯೋ ವೈರಲ್ ಆದ 12 ಗಂಟೆಯಲ್ಲೇ ಬಂಧನ ಬೆಂಗಳೂರಿನ ಸುದ್ದಗುಂಟೆಪಾಳ್ಯ ಪೊಲೀಸರು ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮೂಲಕ ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಡೈರಿ ಸರ್ಕಲ್ ಫ್ಲೈ ಓವರ್ ಬಳಿ ಈ ಘಟನೆ ನಡೆದಿತ್ತು ಎನ್ನಲಾಗಿದೆ. ಹಲ್ಲೆಯ ವಿಡಿಯೋ ನಿನ್ನೆಯಿಂದ ವೈರಲ್ ಆಗಿತ್ತು. ಘಟನಾ ಸ್ಥಳ, ಬಾತ್ಮೀದಾರರು ನೀಡಿದ ಮಾಹಿತಿಯ ಅನ್ವಯ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: 

Sydney Diary : ‘ಹೀಗೆ ನನಗೆ ಪ್ರತಿ ರಾತ್ರಿ ಎಂಬತೈದು ಸಾರಿ ಎಚ್ಚರವಾಗುತ್ತಿತ್ತು!‘

ವಿಷ್ಣು ಆ ಚಿತ್ರದ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ತೆರಳಬೇಕಿತ್ತು. ಆದರೆ..; ನಾಗತಿಹಳ್ಳಿ ಹಂಚಿಕೊಂಡ್ರು ಮಾಹಿತಿ

(Mysuru Cyber Crime fraud man Say bank manager and withdraw Rs 99,999 of a merchant)

Published On - 3:00 pm, Sun, 19 September 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ