AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Dasara 2023: ಯುವ ಸಂಭ್ರಮ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 12 ಸಾವಿರ ವಿದ್ಯಾರ್ಥಿಗಳು ಭಾಗಿಯಾಗುವ ನಿರೀಕ್ಷೆ

ದಸರಾ ಮಹೋತ್ಸವದ ಅಂಗವಾಗಿ ಮೈಸೂರು ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಬಯಲು ರಂಗಮಂದಿರದಲ್ಲಿ ಅ.6 ರಿಂದ 13 ರವರೆಗೆ ಯುವ ಸಂಭ್ರಮ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಸುಮಾರು 12,000 ಕಾಲೇಜು ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆಯಿದೆ.

Mysuru Dasara 2023: ಯುವ ಸಂಭ್ರಮ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 12 ಸಾವಿರ ವಿದ್ಯಾರ್ಥಿಗಳು ಭಾಗಿಯಾಗುವ ನಿರೀಕ್ಷೆ
ಮೈಸೂರು ವಿಶ್ವವಿದ್ಯಾಲಯImage Credit source: shiksha.com
Follow us
TV9 Web
| Updated By: Rakesh Nayak Manchi

Updated on:Oct 05, 2023 | 10:43 AM

ಮೈಸೂರು, ಅ.5: ದಸರಾ ಮಹೋತ್ಸವದ (Mysuru Dasara 2023) ಅಂಗವಾಗಿ ಮೈಸೂರು ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಬಯಲು ರಂಗಮಂದಿರದಲ್ಲಿ ಅ.6 ರಿಂದ 13 ರವರೆಗೆ ಯುವ ಸಂಭ್ರಮ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಸುಮಾರು 12,000 ಕಾಲೇಜು ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆಯಿದೆ.

ಯುವ ಸಂಭ್ರಮ ಉಪಸಮಿತಿ ಆಯೋಜಿಸಿರುವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಉದ್ಘಾಟಿಸಲಿದ್ದಾರೆ. ಸ್ಯಾಂಡಲ್​ವುಡ್ ನಟ ವಸಿಷ್ಠ ಸಿಂಹ ಮತ್ತು ನಟಿ ಹರಿಪ್ರಿಯಾ ಭಾಗವಹಿಸಲಿದ್ದಾರೆ.

ಬರ ಪರಿಸ್ಥಿತಿ ಕಾರಣದಿಂದಾಗಿ ಈ ವರ್ಷ ಕಾರ್ಯಕ್ರಮದ ಬಜೆಟ್ ಅನ್ನು ಕಡಿಮೆ ಮಾಡಲಾಗಿದೆ. ಕಳೆದ ವರ್ಷ 2.3 ಕೋಟಿ ರೂ. ಬಜೆಟ್​ನಲ್ಲಿ ಕಾರ್ಯಕ್ರಮ ನಡೆಸಲಾಗಿತ್ತು.

ಸಮಿತಿಯ ಉಪ ವಿಶೇಷ ಅಧಿಕಾರಿಯಾಗಿರುವ ಪೊಲೀಸ್ ವರಿಷ್ಠಾಧಿಕಾರಿ ಸೀಮ್ ಲಾಟ್ಕರ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಕರ್ನಾಟಕದಾದ್ಯಂತದ ವಿವಿಧ ಕಾಲೇಜುಗಳಿಂದ 400 ತಂಡಗಳು ಎಂಟು ದಿನಗಳ ಕಾಲ ಸಾಂಸ್ಕೃತಿಕ ಪ್ರದರ್ಶನಗಳಲ್ಲಿ ಭಾಗವಹಿಸಲಿವೆ. ಪ್ರತಿದಿನ ಸರಾಸರಿ 30 ತಂಡಗಳು ಪ್ರದರ್ಶನ ನೀಡಲಿದ್ದು, ಪ್ರತಿ ತಂಡದ ಪ್ರದರ್ಶನಕ್ಕೆ ಕನಿಷ್ಠ 5 ನಿಮಿಷಗಳನ್ನು ನಿಗದಿ ಮಾಡಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ಮತ್ತೆ ಮುನ್ನೆಲೆಗೆ ಬಂದ ಮಹಿಷ ದಸರಾ ವಿವಾದ: ಅ. 13ರಂದು ಚಾಮುಂಡಿ ಬೆಟ್ಟ ಚಲೋಗೆ ಪ್ರತಾಪ್ ಸಿಂಹ ಕರೆ

ವಿದ್ಯಾರ್ಥಿಗಳ ತಂಡಕ್ಕೆ ಚಂದ್ರಯಾನ -3 ರ ಯಶಸ್ಸಿನ ಹಿನ್ನೆಲೆಯಲ್ಲಿ ವೈಜ್ಞಾನಿಕ ಪ್ರಗತಿಗೆ ಮೈಸೂರು ಮಹಾರಾಜರ ಕೊಡುಗೆ, ಭಾರತೀಯ ಸ್ವಾತಂತ್ರ್ಯ ಹೋರಾಟ ಮತ್ತು ಕರ್ನಾಟಕದ ಏಕೀಕರಣ ಮತ್ತು ನಕಲಿ ಸುದ್ದಿಗಳ ಪರಿಣಾಮಗಳು ಮತ್ತು ಅದರ ನಿಯಂತ್ರಣ ಸೇರಿದಂತೆ 20 ವಿಭಿನ್ನ ವಿಷಯಗಳನ್ನು ನೀಡಲಾಗಿದೆ.

ಉಪಸಮಿತಿಯ ಕಾರ್ಯದರ್ಶಿಯಾಗಿರುವ ಮೈಸೂರು ವಿವಿ ರಿಜಿಸ್ಟ್ರಾರ್ ವಿ.ಆರ್.ಶೈಲಜಾ ಮಾತನಾಡಿ, ಒಟ್ಟು 250 ತಂಡಗಳು ಮೈಸೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಿಂದ ಬಂದಿದ್ದು, ಉಳಿದವು ಕರ್ನಾಟಕದ ವಿವಿಧ ಭಾಗಗಳಿಂದ ಬಂದಿವೆ. ನಗರದ ಹೊರಗಿನ ತಂಡಗಳಿಗೆ ವಸತಿ ಮತ್ತು ಊಟವನ್ನು ಒದಗಿಸಲಾಗುವುದು ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:43 am, Thu, 5 October 23

ಬೆಂಗಳೂರಿನಲ್ಲಿ ಮತ್ತೆ ಮಳೆ: ವೀಕೆಂಡ್​ನಲ್ಲಿ ಸಿಲಿಕಾನ್​ ಸಿಟಿ ಕೂಲ್​ ಕೂಲ್
ಬೆಂಗಳೂರಿನಲ್ಲಿ ಮತ್ತೆ ಮಳೆ: ವೀಕೆಂಡ್​ನಲ್ಲಿ ಸಿಲಿಕಾನ್​ ಸಿಟಿ ಕೂಲ್​ ಕೂಲ್
ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?
ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ
ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ
ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ
ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ