Mysuru Dasara 2021: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ, ಗಜಪಡೆಗೆ ತೂಕ ಹೊರಿಸಿ ತಾಲೀಮು

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2021ಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದಿನಿಂದ ಕ್ಯಾಪ್ಟನ್ ಅಭಿಮನ್ಯುಗೆ ತೂಕ ಹೊರಿಸಿ ತಾಲೀಮು ನಡೆಸಲಾಗುತ್ತೆ. ಅಶ್ವತ್ಥಾಮ, ಧನಂಜಯ, ಗೋಪಾಲಸ್ವಾಮಿ, ವಿಕ್ರಮ, ಚೈತ್ರಾ, ಲಕ್ಷ್ಮೀ ಹಾಗೂ ಕಾವೇರಿ ಆನೆಗಳಿಗೆ ಮರಳಿನ ಮೂಟೆ ಹೊರಿಸಿ ತಾಲೀಮು ನಡೆಸಲಾಗುತ್ತೆ.

Mysuru Dasara 2021: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ, ಗಜಪಡೆಗೆ ತೂಕ ಹೊರಿಸಿ ತಾಲೀಮು
ಮೈಸೂರು ದಸರಾ ಹಳೆ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Sep 20, 2021 | 11:31 AM

ದಸರಾ ಸಡಗರಕ್ಕೆ ಇನ್ನೂ ಸಮಯ ಇದೆ. ಜನ ಕೂಡ ಹಬ್ಬ ಮಾಡೋಕೆ ಈಗಷ್ಟೇ ಸಿದ್ಧತೆ ಶುರು ಮಾಡಿದ್ದಾರೆ. ಆದ್ರೆ, ಮೈಸೂರಿನ ಅರಮನೆಯಲ್ಲಿ ಈಗಾಗ್ಲೇ ದಸರಾ ವೈಭವ ಕಳೆಗಟ್ಟಿದೆ. ಗಜಪಡೆ ಕಲರವ ಆರಂಭವಾಗಿದೆ. ಕಾಡಿನಿಂದ ನಾಡಿಗೆ ಬಂದ ಗಜಪಡೆಗಳಿಗೆ ದಸರಾ ತಾಲೀಮು ಆರಂಭವಾಗಿದೆ.

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2021ಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದಿನಿಂದ ಕ್ಯಾಪ್ಟನ್ ಅಭಿಮನ್ಯುಗೆ ತೂಕ ಹೊರಿಸಿ ತಾಲೀಮು ನಡೆಸಲಾಗುತ್ತೆ. ಅಶ್ವತ್ಥಾಮ, ಧನಂಜಯ, ಗೋಪಾಲಸ್ವಾಮಿ, ವಿಕ್ರಮ, ಚೈತ್ರಾ, ಲಕ್ಷ್ಮೀ ಹಾಗೂ ಕಾವೇರಿ ಆನೆಗಳಿಗೆ ಮರಳಿನ ಮೂಟೆ ಹೊರಿಸಿ ತಾಲೀಮು ನಡೆಸಲಾಗುತ್ತೆ. ಹಂತಹಂತವಾಗಿ ತೂಕ ಹೆಚ್ಚಿಸಲಿದ್ದಾರೆ. ಬೆಳಗ್ಗೆ 11.30ಕ್ಕೆ ಸಾಂಪ್ರದಾಯಿಕ ಪೂಜೆ ಸಲ್ಲಿಸಲಾಗುತ್ತೆ.

ಗಜಪಡೆಗಳಿಗೆ ದಸರಾ ಜಂಬೂಸವಾರಿ ತಾಲೀಮು ಕಾಡಿನಿಂದ ನಾಡಿಗೆ ಬಂದಿರೋ ಗಜಪಡೆ ನಿನ್ನೆ(ಸೆಪ್ಟೆಂಬರ್ 19) ಮೈಸೂರು ಅರಮನೆಯ ಒಳಾವರಣದಲ್ಲಿ ಬಿಂದಾಸ್ ಆಗಿ ವಾಕಿಂಗ್ ಮಾಡಿದ್ವು.. ದಸರಾ ಗಜಪಡೆಯ ಕ್ಯಾಪ್ಟನ್ ನೇತೃತ್ವದಲ್ಲಿ ಅಶ್ವತ್ಥಾಮ ಗೋಪಾಲಸ್ವಾಮಿ, ಧನಂಜಯ, ವಿಕ್ರಮ, ಚೈತ್ರಾ ಕಾವೇರಿ ಹಾಗೂ ಲಕ್ಷ್ಮೀ ಹೆಸರಿನ ಆನೆಗಳು ಭರ್ಜರಿಯಾಗಿ ಓಡಾಡಿದ್ವು. ಆದ್ರೆ, ಗಜಪಡೆಯ ನಡಿಗೆ ದೃಶ್ಯ ನೋಡಲು ಜನರಿಗೆ ಅವಕಾಶ ಇರಲಿಲ್ಲ. ಇದ್ರಿಂದ ಜನ ಸ್ವಲ್ಪ ಬೇಸರಗೊಂಡಿದ್ದಾರೆ.

ಪ್ರತಿವರ್ಷವೂ ಮೈಸೂರಿನ ಪ್ರಮುಖ ಬೀದಿಗಳಲ್ಲಿ ಗಜಪಡೆಯ ಗಜಗಾಂಭೀರ್ಯ ನಡಿಗೆ ಜೋರಾಗಿ ನಡೆಯುತ್ತಿತ್ತು. ಎಲ್ಲರೂ ದಸರಾ ಆನೆಗಳ ಬೊಂಬಾಟ್ ನಡಿಗೆಯನ್ನ ಕಣ್ತುಂಬಿಕೊಳ್ಳುತ್ತಿದ್ದರು. ಅರಮನೆಯಿಂದ ಹೊರಟ ಗಜಪಡೆ ಕೆಆರ್ ವೃತ್ತ ಸಯ್ಯಾಜಿರಾವ್ ರಸ್ತೆ ಆಯುರ್ವೇದ ವೃತ್ತ ಬಂಬೂ ಬಜಾರ್ ಮೂಲಕ ಸಾಗಿ ಬನ್ನಿಮಂಟಪ ತಲುಪುತ್ತಿತ್ತು. ಅಲ್ಲಿಂದ ಅರಮನೆಗೆ ಆನೆಗಳು ವಾಪಸಾಗುತ್ತಿದ್ವು. ಈ ಬಾರಿ ಕೊರೊನಾ ಮೂರನೇ ಅಲೆ ಭೀತಿಯಿಂದ, ದಸರಾ ಜಂಬೂಸವಾರಿ ಮೈಸೂರು ಅರಮನೆಗೆ ಮಾತ್ರ ಸೀಮಿತವಾಗಿದೆ. ಹೀಗಾಗಿ ತಾಲೀಮು ಸಹ ಅರಮನೆಯೊಳಗೆ ನಡೆಯುತ್ತಿದ್ದು, ಸಹಜವಾಗಿ ಮೈಸೂರಿಗರಿಗೆ ನಿರಾಸೆ ತಂದಿದೆ.

ಇದನ್ನೂ ಓದಿ: Mysuru Dasara 2021: ಮೈಸೂರು ದಸರಾ ಉತ್ಸವದಲ್ಲಿ ಪಾಲ್ಗೊಳ್ಳಲು ವೀರನಹೊಸಹಳ್ಳಿಯಿಂದ ನಾಳೆ ಗಜಪಯಣ ಆರಂಭ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ