ದಸರಾ ಜಂಬೂ ಸವಾರಿಗೆ ಆನೆಗಳ ಆಯ್ಕೆ; ವಿವಿಧ ಕ್ಯಾಂಪ್​ಗಳಿಂದ 14 ಆನೆಗಳ ಪಟ್ಟಿ ಮಾಡಿದ ಅರಣ್ಯಾಧಿಕಾರಿಗಳು

Mysuru Dasara 2021: ಕಳೆದ ವರ್ಷ 5 ಆನೆ ಕರೆಸಿಕೊಳ್ಳಲಾಗಿತ್ತು. ಈ ಬಾರಿ ಆನೆಗಳ ಆರೋಗ್ಯದ ಹಾಗೂ ಮುಂಜಾಗ್ರತ ದೃಷ್ಟಿಯಿಂದ ಎರಡು ಆನೆಗಳನ್ನ ಹೆಚ್ಚುವರಿಯಾಗಿ ಕರೆಸಿಕೊಳ್ಳಲು ನಿರ್ಧಾರ ಮಾಡಲಾಗಿದೆ.

ದಸರಾ ಜಂಬೂ ಸವಾರಿಗೆ ಆನೆಗಳ ಆಯ್ಕೆ; ವಿವಿಧ ಕ್ಯಾಂಪ್​ಗಳಿಂದ 14 ಆನೆಗಳ ಪಟ್ಟಿ ಮಾಡಿದ ಅರಣ್ಯಾಧಿಕಾರಿಗಳು
ಮೈಸೂರು ದಸರಾ ಆನೆಗಳು (ಸಾಂದರ್ಭಿಕ ಚಿತ್ರ)
Follow us
TV9 Web
| Updated By: ganapathi bhat

Updated on:Aug 24, 2021 | 3:29 PM

ಮೈಸೂರು: ದಸರಾ ಜಂಬೂ ಸವಾರಿಗೆ ಆನೆಗಳ ಆಯ್ಕೆ ಮಾಡಲಾಗಿದೆ. ಅರಣ್ಯಾಧಿಕಾರಿಗಳು 14 ಆನೆಗಳನ್ನು ಆಯ್ಕೆ ಮಾಡಿದ್ದಾರೆ. ಹೈಪವರ್ ಕಮಿಟಿ ಸಭೆಗೂ ಮುನ್ನ ಆನೆಗಳ ಆಯ್ಕೆ ಮಾಡಲಾಗಿದೆ. ಡಿಸಿಎಫ್ ಕರಿಕಾಳ‌ನ್ ನೇತೃತ್ವದಲ್ಲಿ ಆನೆಗಳ ಆಯ್ಕೆ ನಡೆದಿದ್ದು, ಬೆಂಗಳೂರಿನ‌ ಮುಖ್ಯ ಅರಣ್ಯ ಕಚೇರಿಗೆ ಆನೆಗಳ ಪಟ್ಟಿ ರವಾನೆ ಆಗಿದೆ. ಸರಳ ದಸರಾ ಮಾಡಿದರೆ 7 ಆನೆ ಕರೆಸಿಕೊಳ್ಳಲು ಚಿಂತನೆ ನಡೆಸಲಾಗಿದೆ. ಇಲ್ಲವಾದರೆ 14 ಆನೆಗಳನ್ನೂ ಬಳಕೆ ಮಾಡಲಾಗುವ ಬಗ್ಗೆ ತಿಳಿದುಬಂದಿದೆ.

ವಿಶ್ವ ವಿಖ್ಯಾತ ದಸರಾ ಮಹೋತ್ಸವ 2021ರ ಜಂಬೂ ಸವಾರಿಗೆ ಆನೆಗಳ ಆಯ್ಕೆ ಪ್ರಕ್ರಿಯೆ ನಡೆದಿದೆ. ಸದ್ಯ ವಿವಿಧ ಕ್ಯಾಂಪ್​ಗಳಿಂದ 14 ಆನೆಗಳನ್ನ ಪಟ್ಟಿ ಮಾಡಿ ಬೆಂಗಳೂರಿನ‌ ಮುಖ್ಯ ಅರಣ್ಯ ಕಚೇರಿಗೆ ಕಳುಹಿಸಲಾಗಿದೆ. ಸರಳ ದಸರಾ ಮಾಡಿದರೆ 7 ಆನೆಗಳನ್ನ ಕರೆಸಿಕೊಳ್ಳಲು ಚಿಂತನೆ ನಡೆಸಲಾಗಿದೆ. ಆನೆ ಕಾಡು, ದುಬಾರೆ, ಮತ್ತಿಗೋಡು, ಬಂಡೀಪುರ ಆನೆ ಶಿಬಿರದಿಂದ ಆನೆಗಳ ಆಯ್ಕೆ ಮಾಡಲಾಗಿದೆ. ಸದ್ಯ ವಿಕ್ರಮ್, ವಿಜಯಾ, ಅಭಿಮನ್ಯು, ಗೋಪಾಲಸ್ವಾಮಿ, ಭೀಮಾ, ಮಹೇಂದ್ರ, ಧನಂಜಯ, ಪ್ರಶಾಂತ್, ಗೋಪಿ, ಹರ್ಷ, ಕಾವೇರಿ, ಲಕ್ಷ್ಮಣ, ಚೈತ್ರಾ, ಮಹಾರಾಷ್ಟ್ರ ಭೀಮಾ ಆನೆಗಳನ್ನು ಆಯ್ಕೆ ಮಾಡಲಾಗಿದೆ.

ಸರಳ ದಸರಾವಾದರೆ 14 ಆನೆಗಳಲ್ಲಿ 7 ಆನೆಗಳು ನಾಡಿಗೆ ಕರೆಸಿಕೊಳ್ಳಲು ಚಿಂತನೆ‌ ಇದೆ. ಕಳೆದ ವರ್ಷ 5 ಆನೆ ಕರೆಸಿಕೊಳ್ಳಲಾಗಿತ್ತು. ಈ ಬಾರಿ ಆನೆಗಳ ಆರೋಗ್ಯದ ಹಾಗೂ ಮುಂಜಾಗ್ರತ ದೃಷ್ಟಿಯಿಂದ ಎರಡು ಆನೆಗಳನ್ನ ಹೆಚ್ಚುವರಿಯಾಗಿ ಕರೆಸಿಕೊಳ್ಳಲು ನಿರ್ಧಾರ ಮಾಡಲಾಗಿದೆ.

ಈ ವರ್ಷ  ಮೈಸೂರು ದಸರಾ ಆಚರಿಸುವುದಂತೂ ನಿಶ್ಚಿತ. ಆದರೆ ಕಳೆದ ಬಾರಿಯಂತೆ ಸರಳವಾಗಿ ಮಾಡಬೇಕೋ ಅಥವಾ ಇನ್ನೂ ಬೇರೆ ಮಾರ್ಪಾಡು ಮಾಡಿಕೊಳ್ಳಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಳಿ ಚರ್ಚೆ ನಡೆಸುತ್ತೇನೆ ಎಂದು  ಮೈಸೂರಿನಲ್ಲಿ ಸಚಿವ ಎಸ್. ಟಿ.ಸೋಮಶೇಖರ್ ಆಗಸ್ಟ್ 7 ರಂದು ತಿಳಿಸಿದ್ದರು. ಕೊವಿಡ್ ಹೆಚ್ಚಾಗಲಿದೆಯೋ ಕಡಿಮೆ ಆಗಲಿದೆಯೇ ನೋಡುತ್ತೇವೆ. ಹೈ ಪವರ್ ಕಮಿಟಿಯಲ್ಲಿ ಮೈಸೂರು ದಸರಾ ಬಗ್ಗೆ ಚರ್ಚೆ ಮಾಡುತ್ತೇವೆ. ಕೊರೊನಾ ಸ್ಥಿತಿಗತಿ ಬಗ್ಗೆ ಅಧಿಕಾರಿಗಳ ಜತೆ ಸಭೆ ನಡೆಸಿದ್ದೇನೆ. ಆನಂತರ ಒಂದು ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಸ್ಟ್ 9ರಂದು ಹೇಳಿದ್ದರು.

ಇದನ್ನೂ ಓದಿ: ಮೈಸೂರು ದಸರಾ ಆಚರಣೆ, ಕೊವಿಡ್ 3ನೇ ಅಲೆಯ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಸುದ್ದಿಗೋಷ್ಠಿಯ ವಿವರ ಇಲ್ಲಿದೆ

ಈವರ್ಷ ಮೈಸೂರು ದಸರಾ ಆಚರಣೆ ಖಚಿತ: ಸಚಿವ ಎಸ್ ಟಿ ಸೋಮಶೇಖರ್

Published On - 3:20 pm, Tue, 24 August 21

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ