AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SM Krishna: ದಸರಾ ಉದ್ಘಾಟಕರಾಗಿ ಮಾಜಿ ಸಿಎಂ ಎಸ್.ಎಂ ಕೃಷ್ಣ ಆಯ್ಕೆ

ಮೈಸೂರು ದಸರಾ 2021: ದಸರಾ ಸಂಬಂಧ ಸಭೆಯಲ್ಲಿ ಕೃಷ್ಣರನ್ನು ಆಯ್ಕೆ ಮಾಡಿದ್ದೇವೆ ಎಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

SM Krishna: ದಸರಾ ಉದ್ಘಾಟಕರಾಗಿ ಮಾಜಿ ಸಿಎಂ ಎಸ್.ಎಂ ಕೃಷ್ಣ ಆಯ್ಕೆ
ಎಸ್.ಎಂ ಕೃಷ್ಣ
TV9 Web
| Updated By: ganapathi bhat|

Updated on:Sep 28, 2021 | 9:40 PM

Share

ಮೈಸೂರು: ದಸರಾ ಉದ್ಘಾಟಕರಾಗಿ ಮಾಜಿ ಸಿಎಂ ಎಸ್.ಎಂ.ಕೃಷ್ಣ ಆಯ್ಕೆ ಆಗಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಎಸ್.ಎಂ.ಕೃಷ್ಣ ಅಧಿಕಾರದಲ್ಲಿದ್ದಾಗ ಅಭಿವೃದ್ಧಿ ಕಾರ್ಯ ಮಾಡಿದ್ದರು. ಅವರು ಮುಖ್ಯಮಂತ್ರಿ, ಕೇಂದ್ರ ಸಚಿವರಾಗಿದ್ದಾಗ ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ಹಾಗಾಗಿ ಎಸ್.ಎಂ. ಕೃಷ್ಣರನ್ನು ದಸರಾ ಉದ್ಘಾಟಕರಾಗಿ ಆಯ್ಕೆ ಮಾಡಲಾಗಿದೆ. ದಸರಾ ಸಂಬಂಧ ಸಭೆಯಲ್ಲಿ ಕೃಷ್ಣರನ್ನು ಆಯ್ಕೆ ಮಾಡಿದ್ದೇವೆ ಎಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ಒಂದು ಲೆಕ್ಕಾಚಾರದಂತೆ ಇದರಿಂದ ಒಕ್ಕಲಿಗ ಸಮುದಾಯಕ್ಕೆ ಒಂದು ಸಂದೇಶ ನೀಡಿದಂತೆ ಆಗಲಿದೆ ಎಂದು ಹೇಳಲಾಗಿದೆ. ಈ ರಾಜಕೀಯ ಲೆಕ್ಕಾಚಾರ ಸಫಲವಾಗುತ್ತೋ ಇಲ್ಲವೋ ಕಾದುನೋಡಬೇಕಿದೆ.

ಮುಂದಿನ ತಿಂಗಳು ನಡೆಯಲಿರುವ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2021 ಅಂಗವಾಗಿ ಪಾರಂಪರಿಕ ಕಾರ್ಯಕ್ರಮಗಳು ನಿಗದಿಯಾಗಿವೆ. ಅರಮನೆಯಲ್ಲಿ ಪಾರಂಪರಿಕ ದಸರಾ ಕಾರ್ಯಕ್ರಮ ನಿಗದಿಯಾಗಿದ್ದು, ಕೊವಿಡ್ ಹಿನ್ನೆಲೆ ಈ ಬಾರಿಯೂ ಜಟ್ಟಿ‌ ಕಾಳಗಕ್ಕೆ ಬ್ರೇಕ್ ಹಾಕಲಾಗಿದೆ. ಅಕ್ಟೋಬರ್ 1ರಂದು ರತ್ನ ಸಿಂಹಾಸನ ಜೋಡಣೆ ಮಾಡಲಾಗುವುದು. ಹಾಗಾಗಿ ಅ. 1ರಂದು ಅರಮನೆಗೆ ಪ್ರವಾಸಿಗರ ಭೇಟಿ ನಿರ್ಬಂಧಿಸಲಾಗಿದೆ. ಅರಮನೆ ಕಾರ್ಯಕ್ರಮದ ಪಟ್ಟಿ ಟಿವಿ9ಗೆ ಲಭ್ಯವಾಗಿದೆ.

ಅಕ್ಟೋಬರ್ 7 ರಿಂದ 14ರವರೆಗೂ ಅರಮನೆಯಲ್ಲಿ ದಸರಾ ಕಾರ್ಯಕ್ರಮ ಆಯೋಜಿಸಲಾಗಿದೆ. ಅಕ್ಟೋಬರ್ 7ರಂದು ಅರಮನೆಯಲ್ಲಿ ಖಾಸಗಿ ದರ್ಬಾರ್ ನಡೆಯಲಿದೆ. ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಸಿಂಹಾಸನ ಏರಿ ಔಪಚಾರಿಕವಾಗಿ ಖಾಸಗಿ ದರ್ಬಾರ್ ನಡೆಸಲಿದ್ದಾರೆ.

ಅಕ್ಟೋಬರ್ 14ರಂದು ಅರಮನೆಯಲ್ಲಿ ಆಯುಧ ಪೂಜೆ ಏರ್ಪಡಿಸಲಾಗಿದೆ. ಬೆಳಗ್ಗೆ 5.30ರಿಂದ ಪೂಜಾ ವಿಧಿ ವಿಧಾನ ಆರಂಭಗೊಳ್ಳಲಿದೆ. 7.45ಕ್ಕೆ ರಾಜರ ಆಯುಧಗಳು ಅರಮನೆ ಕೋಡಿ ಸೋಮೇಶ್ವರ ದೇಗುಲಕ್ಕೆ ರವಾನೆ ಮಾಡಲಾಗುವುದು. ಪೂಜೆ ಸಲ್ಲಿಸಿ ಕೋಡಿ ಸೋಮೇಶ್ವರ ದೇಗುಲದಿಂದ ಅರಮನೆ ಕಲ್ಯಾಣ ಮಂಟಪಕ್ಕೆ ತರಲಾಗುವುದು. 11.02 ರಿಂದ 11.22ರ ಶುಭ ಮುಹೂರ್ತದಲ್ಲಿ ಆಯುಧಗಳಿಗೆ ಪೂಜೆ ನೆರವೇರಿಸಲಾಗುವುದು. ಯದುವೀರ ಕೃಷದತ್ತ ಚಾಮರಾಜ ಒಡೆಯರ್‌ರಿಂದ ಪೂಜೆ ನಡೆಯಲಿದೆ.

ಅಕ್ಟೋಬರ್ 15ರಂದು ಅರಮನೆಯಲ್ಲಿ ವಿಜಯ ದಶಮಿ ಆಚರಿಸಲಾಗುವುದು. 5.45ಕ್ಕೆ ಆನೆ, ಕುದುರೆ, ಹಸುಗಳ ಆಗಮನವಾಗಲಿದೆ. 6.13 ರಿಂದ 6.32ರವರೆಗೆ ಪೂಜಾ ಕೈಂಕರ್ಯ ನಡೆಯಲಿದೆ. 7.20ರಿಂದ 7.40ರವರೆಗೆ ವಿಜಯದಶಮಿ‌ ಮೆರವಣಿಗೆ ನಡೆಯಲಿದೆ. ಅರಮನೆ ಮುಖ್ಯದ್ವಾರದಿಂದ ಅರಮನೆ ಆವರಣ ಭುವನೇಶ್ವರಿ ದೇಗುಲದವರೆಗೂ ಮೆರವಣಿಗೆ ನಡೆಯಲಿದೆ. ದೇಗುಲದ ಬನ್ನಿ ಮರಕ್ಕೆ ಯದುವೀರ ಕೃಷದತ್ತ ಚಾಮರಾಜ ಒಡೆಯರ್‌ ಪೂಜೆ ನಡೆಸಲಿದ್ದಾರೆ. ಪೂಜೆಯ ನಂತರ ಮೆರವಣಿಗೆ ಮೂಲಕ ಅರಮನೆಗೆ ವಾಪಸ್ಸು ಆಗಲಿದ್ದಾರೆ.

ಅಕ್ಟೋಬರ್ 31ರಂದು ಸಿಂಹಾಸನ ವಿಂಗಡಿಸಿ ಖಜಾನೆಗೆ ವಾಪಸ್ ರವಾನೆ ಮಾಡಲಾಗುವುದು. ಅಂದೂ ಸಹ ಮಧ್ಯಾಹ್ನ 1.30ರವರೆಗೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧವಿರಲಿದೆ.

ಇದನ್ನೂ ಓದಿ: ದಸರಾ ಸಂಭ್ರಮಕ್ಕೂ ಮುನ್ನ ಕೊವಿಡ್ ಎಚ್ಚರಿಕೆಯ ಸಂದೇಶ ರವಾನಿಸಿದ ಕೇಂದ್ರ ಗೃಹ ಕಾರ್ಯದರ್ಶಿ

ಇದನ್ನೂ ಓದಿ: Mysuru Dasara 2021: ದಸರೆಯಲ್ಲಿ ‘ಗಜ ಪ್ರೇಮ’! ಆನೆಗಳ ಪ್ರೀತಿಗೆ ಸಾಕ್ಷಿಯಾಯ್ತು ಮೈಸೂರು ಅರಮನೆ

Published On - 6:34 pm, Tue, 28 September 21

ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ
ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ
‘ಮ್ಯಾಕ್ಸ್ 2’ ಸಿನಿಮಾ ಯಾವಾಗ? ಅಪ್​ಡೇಟ್ ಕೊಟ್ಟ ಸುದೀಪ್
‘ಮ್ಯಾಕ್ಸ್ 2’ ಸಿನಿಮಾ ಯಾವಾಗ? ಅಪ್​ಡೇಟ್ ಕೊಟ್ಟ ಸುದೀಪ್
VIDEO: ಸುಈಈಈಈ... ಪ್ಯಾಟ್ ಕಮಿನ್ಸ್ ವಾಟ್ ಎ ಕ್ಯಾಚ್
VIDEO: ಸುಈಈಈಈ... ಪ್ಯಾಟ್ ಕಮಿನ್ಸ್ ವಾಟ್ ಎ ಕ್ಯಾಚ್
ಶಿವಕುಮಾರ್ ಕಾಮಗಾರಿ ನಡೆಯುತ್ತಿರುವ ಸ್ಥಳ ಪರಿಶೀಲನೆ ನಡೆಸಲಿದ್ದಾರೆ: ಸೋಮಣ್ಣ
ಶಿವಕುಮಾರ್ ಕಾಮಗಾರಿ ನಡೆಯುತ್ತಿರುವ ಸ್ಥಳ ಪರಿಶೀಲನೆ ನಡೆಸಲಿದ್ದಾರೆ: ಸೋಮಣ್ಣ
ತೇಜಸ್ವಿ ಸೂರ್ಯ ಮನೆಗೆ ಹೊಸ ಅತಿಥಿ: ಹಾಡಿನ ಮೂಲಕ ಸ್ವಾಗತಿಸಿದ ಶಿವಶ್ರೀ
ತೇಜಸ್ವಿ ಸೂರ್ಯ ಮನೆಗೆ ಹೊಸ ಅತಿಥಿ: ಹಾಡಿನ ಮೂಲಕ ಸ್ವಾಗತಿಸಿದ ಶಿವಶ್ರೀ