ಮೈಸೂರು: ಅರಮನೆ ಸುತ್ತಮುತ್ತ ಯುವಕರಿಂದ ತುತ್ತೂರಿ ಊದುತ್ತಾ ಕಿರಿಕಿರಿ ಉಂಟಾದ ಹಿನ್ನೆಲೆಯಲ್ಲಿ ತುತ್ತೂರಿ ಬಳಸುವುದನ್ನು ನಿಷೇಧಿಸಿ ಕಮಿಷನರ್ ಆದೇಶ ಹೊರಡಿಸಿದ್ದಾರೆ. ಪೀಪಿ ಊದುತ್ತ ಯುವಕರಿಂದ ಕಿರಿಕಿರಿ ಹಿನ್ನೆಲೆ ನಿಷೇಧ ಹೇರಲಾಗಿದೆ. ಇಂದಿನಿಂದಲೇ (ಅಕ್ಟೋಬರ್ 16) ಈ ನಿಷೇಧಾಜ್ಞೆ ಜಾರಿಗೊಳಿಸಲು ಆದೇಶ ನೀಡಲಾಗಿದೆ. ಮೈಸೂರು ಕಮಿಷನರ್ ಡಾ. ಚಂದ್ರಗುಪ್ತ ನಿರ್ದೇಶನ ನೀಡಿದ್ದಾರೆ.
ದಸರಾ ದೀಪಾಲಂಕಾರ 9 ದಿನ ಮುಂದುವರಿಕೆ: ಬಸವರಾಜ ಬೊಮ್ಮಾಯಿ
ವಿಜಯ ದಶಮಿ ದಿನದ ಬಳಿಕವೂ ನಂತರದ 9 ದಿನ ದಸರಾ ದೀಪಾಲಂಕಾರ ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿನ್ನೆ (ಅಕ್ಟೋಬರ್ 15) ಅಧಿಕೃತ ಘೋಷಣೆ ಮಾಡಿದ್ದರು. ಸುತ್ತೂರು ಶಾಖಾ ಮಠದಲ್ಲಿ ಸಿಎಂ ಬೊಮ್ಮಾಯಿ ಈ ಬಗ್ಗೆ ಹೇಳಿಕೆ ನೀಡಿದ್ದರು. ದಸರಾ ದೀಪಾಲಂಕಾರ ಮುಂದುವರಿಸಲು ಜನರ ಬೇಡಿಕೆ ಇದೆ. ಹಾಗಾಗಿ ವಿದ್ಯುತ್ ದೀಪಾಲಂಕಾರ ಮುಂದುವರಿಸಲಾಗುವುದು. ಇಂದಿನಿಂದ 9 ದಿನ ದೀಪಾಲಂಕಾರ ಮುಂದುವರಿಯಲಿದೆ ಎಂದು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಬೊಮ್ಮಾಯಿ ಹೇಳಿದ್ದರು.
ಸಿಎಂ ಬೊಮ್ಮಾಯಿ ರಾಜ್ಯದ ಜನತೆಗೆ ನಾಡ ಹಬ್ಬ ದಸರಾದ ಶುಭಾಶಯ ಕೋರಿದ್ದರು. ರಾಜ್ಯ ಮತ್ತಷ್ಟು ಸುಭಿಕ್ಷವಾಗಲಿ. ತಾಯಿ ಚಾಮುಂಡೇಶ್ವರಿ ನಾಡಿನ ಜನತೆಗೆ ಹರಸಲಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ನಾಡಿಗೆ ಶುಭಹಾರೈಸಿದ್ದರು. ಸುತ್ತೂರು ಶಾಖಾ ಮಠಕ್ಕೆ ಸಿಎಂ ಬೊಮ್ಮಾಯಿ ಭೇಟಿ ಕೊಟ್ಟಿದ್ದರು. ಮಠದಲ್ಲಿ ಸಿಎಂ ಬೊಮ್ಮಾಯಿಗೆ ಸಾಂಪ್ರದಾಯಿಕ ಸ್ವಾಗತ ಕೋರಲಾಗಿತ್ತು. ಮಠದ ಆವರಣದಲ್ಲಿ ಚಾಮುಂಡೇಶ್ವರಿ ದೇವಿಗೆ ಬಸವರಾಜ ಬೊಮ್ಮಾಯಿ ಪೂಜೆ ಸಲ್ಲಿಸಿದ್ದರು.
ಇದನ್ನೂ ಓದಿ: Mysuru Dasara 2021: ದುರ್ಗಾ ಮಾತೆಯ 9 ದಿವ್ಯ ಅವತಾರ ಆಯುರ್ವೇದದಲ್ಲಿ 9 ದಿವ್ಯ ಔಷಧ ರೂಪದಲ್ಲಿದೆ; ವಿವರ ಇಲ್ಲಿದೆ
ಇದನ್ನೂ ಓದಿ: Mysuru Dasara: ಗತಕಾಲದ ಕಥೆ ಹೇಳುತ್ತಿವೆ ಮೈಸೂರು ಗೊಂಬೆಗಳು, ರಂಗೇರಿದ ಗೊಂಬೆ ಪ್ರದರ್ಶನ