ಕಳೆಗಟ್ಟಿದ ಅರಮನೆ ನಗರಿ: ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಸಜ್ಜು; ಅಂಬಾರಿ ಕಟ್ಟಿ ತಾಲೀಮು, ಮಾವುತರಿಗೆ ಉಪಹಾರ

Mysuru dasara 2021 preparation: ದಸರಾ ಗಜಪಡೆಗೆ ಇಂದಿನಿಂದ ಅಂತಿಮ ಹಂತದ ತಾಲೀಮು ನಡೆಸಲಾಗುತ್ತಿದೆ. ಕ್ಯಾಪ್ಟನ್ ಅಭಿಮನ್ಯುಗೆ ಮರದ ಅಂಬಾರಿ ಕಟ್ಟಿ, ಅದರ ಮೇಲೆ ಮರಳು ಮೂಟೆ ಹೊರಿಸಿ ತಾಲೀಮು ನೀಡಲಾಗುತ್ತಿದೆ. ಇಂದು ಬೆಳಗ್ಗೆಅರಮನೆ ಆವರಣದಲ್ಲಿ ಮರದ ಅಂಬಾರಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಕೆ ಬಳಿಕ ಸಿಬ್ಬಂದಿ ಆನೆಗೆ ಅಂಬಾರಿ ಕಟ್ಟಲಿದ್ದಾರೆ.

ಕಳೆಗಟ್ಟಿದ ಅರಮನೆ ನಗರಿ: ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಸಜ್ಜು; ಅಂಬಾರಿ ಕಟ್ಟಿ ತಾಲೀಮು, ಮಾವುತರಿಗೆ ಉಪಹಾರ
ಕಳೆಗಟ್ಟಿದ ಅರಮನೆ ನಗರಿ: ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಸಜ್ಜು; ಅಂಬಾರಿ ಕಟ್ಟಿ ತಾಲೀಮು, ಮಾವುತರಿಗೆ ಉಪಹಾರ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Oct 01, 2021 | 9:34 AM

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಇಂದಿನಿಂದ ಅಂತಿಮ ಹಂತದ ತಾಲೀಮು ಶುರುವಾಗಿದ್ದು, ಅರಮನೆ ನಗರಿ ಕಳೆಕಟ್ಟುತ್ತಿದೆ. ಅಂಬಾರಿ ಕಟ್ಟಿ ತಾಲೀಮು ನಡೆಸಲಾಗುತ್ತಿದೆ. ಮಾವುತರು ಕಾವಾಡಿಗಳು ಅರಣ್ಯ ಇಲಾಖೆ ಸಿಬ್ಬಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಉಪಹಾರ ಬಡಿಸಿದ್ದಾರೆ.

ದಸರಾ ಗಜಪಡೆಗೆ ಇಂದಿನಿಂದ ಅಂತಿಮ ಹಂತದ ತಾಲೀಮು ನಡೆಸಲಾಗುತ್ತಿದೆ. ಕ್ಯಾಪ್ಟನ್ ಅಭಿಮನ್ಯುಗೆ ಮರದ ಅಂಬಾರಿ ಕಟ್ಟಿ, ಅದರ ಮೇಲೆ ಮರಳು ಮೂಟೆ ಹೊರಿಸಿ ತಾಲೀಮು ನೀಡಲಾಗುತ್ತಿದೆ. ಜಂಬೂ ಸವಾರಿ ಮೆರವಣಿಗೆಯಲ್ಲಿಆನೆ ಅಭಿಮನ್ಯು 750 ಕೆಜಿ ತೂಕದ ಅಂಬಾರಿ ಹೊರಲಿದ್ದಾನೆ. ಇಂದು ಬೆಳಗ್ಗೆಅರಮನೆ ಆವರಣದಲ್ಲಿ ಮರದ ಅಂಬಾರಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಕೆ ಬಳಿಕ ಸಿಬ್ಬಂದಿ ಆನೆಗೆ ಅಂಬಾರಿ ಕಟ್ಟಲಿದ್ದಾರೆ. ಅಭಿಮನ್ಯು ಜೊತೆ ಕಾವೇರಿ, ಚೈತ್ರಾ, ಲಕ್ಷ್ಮಿ, ಗೋಪಾಲಸ್ವಾಮಿ, ಧನಂಜಯ, ಅಶ್ವತ್ಥಾಮ, ವಿಕ್ರಮ ಆನೆಗಳು ಹೆಜ್ಜೆ ಹಾಕಲಿವೆ.

ಈ ಮಧ್ಯೆ, ಮೈಸೂರು ದಸರಾ ಅಂಗವಾಗಿ ಮಾವುತರು, ಕಾವಾಡಿಗಳು ಮತ್ತು ಅರಣ್ಯ ಇಲಾಖೆ ಸಿಬ್ಬಂದಿಗೆ ಮೈಸೂರು ಜಿಲ್ಲಾಡಳಿತ ವತಿಯಿಂದ ಅರಮನೆ ಆವರಣದಲ್ಲಿ ಉಪಹಾರ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಮಾವುತರಿಗೆ ತಿಂಡಿ ಬಡಿಸಿದರು. ಸಚಿವ ಎಸ್ ಟಿ ಸೋಮಶೇಖರ್ ಮಾವುತರ ಜೊತೆ ತಿಂಡಿ ತೆಗೆದುಕೊಂಡರು. ಈ ವೇಳೆ ಸಚಿವ ಸೋಮಶೇಖರ್​ಗೆ ಶಾಸಕರಾದ ಎಸ್ ಎ ರಾಮದಾಸ್, ನಾಗೇಂದ್ರ, ಜಿಲ್ಲಾಧಿಕಾರಿ ಡಾ ಬಗಾದಿ ಗೌತಮ್, ಕಮಿಷನರ್ ಡಾ ಚಂದ್ರಗುಪ್ತ ಸೇರಿ ಹಲವು ಅಧಿಕಾರಿಗಳು ಸಾಥ್ ನೀಡಿದರು.

ಈ ವೇಳೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಸರಳ ದಸರಾಗೆ ಎಲ್ಲಾ ತಯಾರಿ ನಡೆದಿದೆ. ಸಂಜೆ ಒಳಗಡೆ ಸಾಂಸ್ಕೃತಿಕ ಕಾರ್ಯಕ್ರಮಗಳ ಪಟ್ಟಿ ಅಂತಿಮವಾಗಲಿದೆ. ಹಂಸಲೇಖ ಸೇರಿದಂತೆ ನಾಡಿನ ಹಲವು ಕಲಾವಿದರಿಗೆ ಕಾರ್ಯಕ್ರಮ ನೀಡಲಾಗುತ್ತೆ. ಉದ್ಘಾಟನೆಗೆ 500 ಹಾಗೂ ಜಂಬೂ ಸವಾರಿಗೆ 1000 ಜನ ಎಂದು ತಜ್ಞರ ಸಮಿತಿ ಹೇಳಿದೆ. ಇದನ್ನು ಹೆಚ್ಚು ಮಾಡಲು ಕೇಳಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: SM Krishna: ಮೈಸೂರು ದಸರಾ ಉದ್ಘಾಟನೆಗೆ ಆಮಂತ್ರಿಸಿದ ಹಿನ್ನೆಲೆ; ಪತ್ರದ ಮುಖೇನ ಧನ್ಯವಾದ ತಿಳಿಸಿದ ಎಸ್.ಎಂ ಕೃಷ್ಣ

ಇದನ್ನೂ ಓದಿ: Mysore Dasara 2021: ಕೊರೊನಾದಿಂದ ಜಟ್ಟಿ‌ ಕಾಳಗಕ್ಕೆ ಬ್ರೇಕ್: ಅರಮನೆಯ ಪಾರಂಪರಿಕ ದಸರಾ ಕಾರ್ಯಕ್ರಮ ಲಿಸ್ಟ್​ ಇಲ್ಲಿದೆ

Published On - 9:23 am, Fri, 1 October 21

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ